'ಅಕ್ಕ' ಸಮ್ಮೇಳನಕ್ಕೆ ಬಿ.ಎಸ್.ಯಡಿಯೂರಪ್ಪ |
ಪ್ರಕಟಿಸಿದ ದಿನಾಂಕ : 2008-08-20
ಬೆಂಗಳೂರು, ಮಂಗಳವಾರ, 19 ಆಗಸ್ಟ್ 2008 ಕರ್ನಾಟಕ ಮತ್ತು ಅಮೆರಿಕ ನಡುವಿನ ಸಂಬಂಧ ವೃದ್ದಿ ಹಾಗೂ ಸಾಂಸ್ಕೃತಿಕ ದ್ಯೋತಕವಾಗಿರುವ ಅಕ್ಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಪಾಲ್ಗೊ ಳ್ಳಲಿದ್ದಾರೆ.
ಈ ಬಗ್ಗೆ ಮಂಗಳವಾರ ಮುಖ್ಯಮಂತ್ರಿಗಳ ಕಾರ್ಯಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ.
ಇದೇ ವೇಳೆ ತಮ್ಮ ಇಂಗ್ಲೆಂಡ್ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ರಾಜ್ಯದಲ್ಲಿ ನೆರೆ ಮತ್ತು ಬರ ಪರಿಸ್ಥಿತಿ ಇರುವುದರಿಂದ ಪರಿಹಾರ ಕಾರ್ಯಗಳತ್ತ ಹೆಚ್ಚು ಗಮನ ನೀಡುವ ನಿಟ್ಟಿನಲ್ಲಿ ಇಂಗ್ಲೆಂಡ್ ಪ್ರವಾಸವನ್ನು ರದ್ದುಗೊಳಿಸಿದ್ದು, ಅಕ್ಕ ಸಮ್ಮೇಳನದಿಂದ ನೇರವಾಗಿ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಗಾಗಲೇ ನೆರೆ ಪ್ರದೇಶಗಳ ವರದಿ ತರಿಸಿಕೊಂಡು ಸಮಸ್ಯೆ ನಿವಾರಣೆಯ ಚಿಂತನೆಯಲ್ಲಿರುವ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ವಿದೇಶ ಪ್ರವಾಸ ಸೂಕ್ತವಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಅಮೆರಿಕದ ಚಿಕಾಗೋದಲ್ಲಿ ಅಕ್ಕ ಸಮ್ಮೇಳನ ಆ. 26ರಿಂದ ಆರಂಭಗೊಳ್ಳಲಿದ್ದು, 29ಕ್ಕೆ ಮುಕ್ತಾಯಗೊಳ್ಳಲಿದೆ.
ವರದಿಯ ವಿವರಗಳು |
 |
ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-08-20
|
|
|