ಗುರುವಾರ, 08-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಮಸ್ಕತ್: ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಭಾರತೀಯ ಶಾಲೆ

ಹತ್ತನೆಯ ಹಾಗೂ ಹನ್ನೆರಡನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಮಸ್ಕತ್, ಸೆಪ್ಟೆಂಬರ್ 28:  ನಗರದ ಪ್ರತಿಷ್ಟಿತ ಇಂಡಿಯನ್ ಸ್ಕೂಲ್ ಮಸ್ಕತ್ ಕಳೆದ ಶೈಕ್ಷಣಿಕ ವರ್ಷದ ಸಿ.ಬಿ.ಎಸ್.ಇ. ಮಾಧ್ಯಮದ ಹತ್ತನೆಯ ಹಾಗೂ ಹನ್ನೆರಡನೇ ತರಗತಿಗಳಲ್ಲಿ 90% ಕ್ಕೂ ಹೆಚ್ಚು ಅಂಗಕಗಲೋಂದಿಗೆ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ The Indian School Muscat merit awards ಪ್ರಶಸ್ತಿಗಳನ್ನು ನೀಡಿ ಗೌರವಿಸಿತು.

ಈ ಪ್ರಶಸ್ತಿಗಳನ್ನು ಸೆಪ್ಟೆಂಬರ್ 11ನೇ ತಾರೀಖಿನಂದು ಶಾಲೆಯ ಮಲ್ಟಿಪರ್ಪಸ್ ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪ್ರದಾನಿಸಲಾಯಿತು.  ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ, ಅಧ್ಯಾಪಕ ವೃಂದ ಹಾಗೂ ಪಾಲಕರು  ಉಪಸ್ಥಿತರಿದ್ದರು. 

ಈ ಪ್ರಶಸ್ತಿಗಳನ್ನು ಪ್ರತಿವರ್ಷ ಹತ್ತು ಮತ್ತು ಹನ್ನೆರಡನೇ ತರಗತಿಯ ಪ್ರತಿಭಾವಂತ ಮಕ್ಕಳಿಗೆ ನೀಡಲಾಗುತ್ತದೆ.  ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಒಮಾನಿ ರಿಯಾಲ್ 100 ನಗದು ಬಹುಮಾನವನ್ನೂ ನೀಡಲಾಗುತ್ತದೆ.  ಎರಡನೆಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬೆಳ್ಳಿಯ ಪದಕ ಹಾಗೂ  25 ಒಮಾನಿ ರಿಯಾಲ್ ನಗದು ಬಹುಮಾನ್ ನೀಡಲಾಗುತ್ತದೆ.  ಉಳಿದವರಿಗೆ ಪ್ರಶಸ್ತಿಪತ್ರ ಹಾಗೂ ನಗದು ಬಹುಮಾನಗಳನ್ನು ನೀಡಲಾಗುತ್ತದೆ. ಈ ವರ್ಶ ಹತ್ತನೆಯ ತರಗತಿಯಲ್ಲಿ 88 ಹಾಗೂ ಹನ್ನೆರಡನೇ ತರಗತಿಯಲ್ಲಿ 25 ವಿದ್ಯಾರ್ಥಿಗಳು ಶೇಖಡಾ 90 ಕ್ಕಿಂತಲೂ ಹೆಚ್ಚು ಅಂಕ ಪಡೆದಿದ್ದಾರೆ.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಒಮಾನ್ ಟ್ರಿಬ್ಯೂನ್
ವರದಿಗಾರರು : ಅರ್ಶದ್ ಹುಸೇನ್ ಎಂ.ಹೆಚ್
ಪ್ರಕಟಿಸಿದ ದಿನಾಂಕ : 2008-09-28


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಒಮಾನ್]

 

 

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri