ಭಯ`ಉತ್ಪಾದನೆ'ಯ ಹಲವಾರು ಮುಖಗಳು |
ಪ್ರಕಟಿಸಿದ ದಿನಾಂಕ : 2008-10-12
ಅಧಿಕಾರರೂಢ ಗೃಹಮಂತ್ರಿಗಳ ರಾಜೀನಾಮೆಗೆ ಪ್ರತಿಪಕ್ಷಗಳ ಮುಖಂಡರು ಆಗ್ರಹಿಸುತ್ತಾರೆ. ಗೃಹಮಂತ್ರಿಗಳು ಪೊಲೀಸ್, ಬೇಹುಗಾರಿಕೆ ಬಲಿಷ್ಠವಾಗಿರುವ ಬಗ್ಗೆ ಸಮರ್ಥನೆ ನೀಡುತ್ತಾರೆ. ಅದೂ ಪತ್ರಿಕೆಗಳಲ್ಲಿ ಪ್ರಕಟವಾಗುತ್ತದೆ. ವೈಫಲ್ಯ-ಸಾಫಲ್ಯಗಳ ಚರ್ಚೆಯಲ್ಲಿ ದಿನದೂಡುತ್ತಿರುವಾಗಲೇ ಮತ್ತೊಂದು ಬಾಂಬ್‌ಸ್ಪೋಟ ತಲ್ಲಣ ಮೊಡಿಸಿ, ಮತ್ತೊಂದಿಷ್ಟು ಅಮಾಯಕರನ್ನು ಬಲಿತೆಗೆದುಕೊಂಡು ರಕ್ತದೋಕುಳಿ ಹರಿಸಿರುತ್ತದೆ.
ನಿಮ್ಮ ಮನೆಯ ಒಂದು ಕೋಣೆಯಲ್ಲಿ ಬೆಂಕಿ ಬಿದ್ದಿದ್ದರೆಮತ್ತೊಂದು ಕೋಣೆಯಲ್ಲಿಸುಮ್ಮನೆ ಮಲಗಿ ನೆಮ್ಮದಿಯಿಂದ ನಿದ್ದೆ ಹೋಗಬಲ್ಲಿರಾ?
ಭಯೋತ್ಪಾದನೆಯೆಂಬುದು ದೇಶದ ನರನಾಡಿಗಳನ್ನು ವ್ಯಾಪಿಸುತ್ತಿರುವ ಈ ವಿಕೃತ ಹೊತ್ತಿನಲ್ಲಿ ಈ ಪ್ರಶ್ನೆಗೆ ರಾಜಕಾರಣಿಗಳು ಮತ್ತು ಭಯೋತ್ಪಾದಕರ ಹೊರತಾಗಿ ಮತ್ತಾರೂ `ಹೋಗಬಲ್ಲೆವು ಎಂದು ಯಾರೂ ಹೇಳಲಾರರು.
ಎಲ್ಲಿ ಯಾವಾಗ ಸ್ಪೋಟವಾಗುತ್ತದೋ ನಮ್ಮ ಕಾಲುಕೈಗಳು ಹೊಂದಿಸಲು ಸಿಗದಂತೆ ಚೂರುಪಾರಾಗಿ ಛಿದ್ರಗೊಂಡು ಹರಿದು ಹಾರಿಹೋಗಬಲ್ಲವೋ ಎಂಬ ಭಯದಲ್ಲಿಯೇ ಎಲ್ಲರೂ ದಿನದೂಡಬೇಕಾದ ಭೀತಿಯಲ್ಲಿ ನಾವಿದ್ದೇವೆ. ಇದನ್ನು ನಿಗ್ರಹಿಸಬಲ್ಲ ಶಕ್ತಿಯುಳ್ಳ ರಾಜಕಾರಣಿಗಳು ಆರೋಪ-ಪ್ರತ್ಯಾರೋಪ, ಸಮರ್ಥನೆ-ನಿರಾಕರಣೆ, ದೂಷಣೆ-ಸ್ಪಷ್ಟನೆಯಲ್ಲಿಯೇ ಇಡೀ ಕಾಲವನ್ನು ವ್ಯಯಿಸುತ್ತಿದ್ದಾರೆ. ಭಯೋತ್ಪಾದನೆಯೆಂಬುದು ನಮ್ಮೆಲ್ಲರ ಮೇಲೆ ನಿರಂತರ ಚಾಚಿರುವ ಕರಾಳ ನೆರಳು ಎಂದು ಯಾರಿಗೂ ಅನ್ನಿಸುತ್ತಲೇ ಇಲ್ಲ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಯಾವ ಸಮುದಾಯದ ಓಟುಗಿಟ್ಟಿಸಲು `ಯಾವ ಮಾತುಗಳುಎಷ್ಟರಮಟ್ಟಿಗೆ ಸಫಲವಾಗಬಹುದೆಂಬ ಅಕ್ಷರ ವ್ಯಭಿಚಾರದಲ್ಲಿಯೇ ಎಲ್ಲರೂ ತೊಡಗಿದ್ದಾರೆ. ಕಾಂಗ್ರೆಸ್, ಬಿಜೆಪಿ, ಕಮ್ಯುನಿಸ್ಟರು, ಎಸ್ಪಿ ಹೀಗೆ ಯಾವುದೇ ಪಕ್ಷಗಳೂ ಇದರಿಂದ ಹೊರತಾಗಿಲ್ಲ. ಎಲ್ಲರೂ `ಮತಬ್ಯಾಂಕ್ ನತ್ತಲೆ ಕಣ್ಣಿಟ್ಟು, ಬಾಯ್ತೆರೆಯುತ್ತಿದ್ದಾರೆ.
` ಭಾರತವೂ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿಲ್ಲ. ಭಯೋತ್ಪಾದಕರು ಭಾರತದ ವಿರುದ್ಧ ಹೋರಾಡುತ್ತಿದ್ದಾರೆ. ರಾಜಕಾರಣಿಗಳು ಭಯೋತ್ಪಾದಕರ ವಿರುದ್ಧ ಹೋರಾಡುತ್ತಿಲ್ಲ. ಅವರು ಪರಸ್ಪರ ಕಚ್ಚಾಡುತ್ತಿದ್ದಾರೆ. ಅವರು ಜನರ ಭದ್ರತೆ ಬಗ್ಗೆ ಚಿಂತಾಕ್ರಾಂತರಾಗಿಲ್ಲ. ಅವರ ಚಿಂತೆಯೇನಿದ್ದರೂ ಜನರ ಓಟಿನ ಮೇಲೆ. ಭಯೋತ್ಪಾದನೆಯ ವಿರುದ್ಧ ಅವರ ಮಾತಿನ ಸಮರ ಏನಿದ್ದರೂ ಕೇವಲ ಮತಗಳಿಕೆಗಷ್ಟೇ ಸೀಮಿತ( ಔಟ್‌ಲುಕ್‌ನಲ್ಲಿ ರಾಜೇಂದರ್ ಪುರಿ).
ಬದಲಾದ ಭಯೋತ್ಪಾದನೆ
ಗುಜರಾತ್ ಗಲಭೆ ನಂತರ ಭಯೋತ್ಪಾದನೆಯ ವ್ಯಾಖ್ಯೆಗಳೇ ಬದಲಾಗಿವೆ. ಸಿಮಿ, ಇಂಡಿಯನ್ ಮುಜಾಹಿದಿನ್ ಸಂಘಟನೆಗಳ ಹೆಸರು ಬಾಂಬ್‌ಸ್ಪೋಟ ನಡೆದಾಗೆಲ್ಲಾ ಮತ್ತೆ ಮತ್ತೆ ಪ್ರಸ್ತಾಪವಾಗುತ್ತಿದೆ. ಅದರೆ ಜತೆಗೆ ಸಂಘಪರಿವಾರ ಪ್ರೇಷಿತ ಕೆಲವು ಸಂಘಟನೆಗಳು ಆತ್ಮಹತ್ಯಾ ದಳದ ರಚನೆಗೆ ಮುಂದಾಗುತ್ತಾ ಕ್ರೈಸ್ತರ ಮೇಲಿನ ದಾಳಿಗೆ ತಾವೇ ಬಾಧ್ಯಸ್ಥರು ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಿವೆ. ವಿಧ್ವಂಸಕ ಕೃತ್ಯಗಳ ಮೇಲಾಟದಲ್ಲಿ ಸತ್ಯವನ್ನು ಬಹಿರಂಗ ಪಡಿಸಬೇಕಾದ ಪೊಲೀಸರು ಯಾರ ಮೇಲೋ ಗೂಬೆ ಕೂರಿಸಿ, ತಮ್ಮ ಜವಾಬ್ದಾರಿಯನ್ನು ಮುಗಿಸಿಬಿಡುವ ಆತುರ ತೋರುತ್ತಿದ್ದಾರೆ.
2-3 ದಶಕಗಳ ಹಿಂದೆ ಭಯೋತ್ಪಾದನೆ ಎಂದರೆ ಅದು ತಮಿಳು ಉಗ್ರರೋ, ಅಸ್ಸಾಂನ ಉಲ್ಫಾ ಉಗ್ರರೋ, ಪಂಜಾಬಿನ ಖಾಲಿಸ್ತಾನ್ ಉಗ್ರರೋ, ನಾಗಾ ಬಂಡುಕೋರರೋ ಅಥವಾ ನಕ್ಸಲ್ ಉಗ್ರರ ಕೃತ್ಯವೆಂದೇ ಪರಿಭಾವಿಸುವ ಕಾಲವೊಂದಿತ್ತು. ಆದರೀಗ ಕಾಲ ಬದಲಾಗಿದೆ. ಇಂದು ದೇಶದುದ್ದಕ್ಕೂ ಎಲ್ಲೇ ಬಾಂಬ್‌ಸ್ಪೋಟ, ವಿಚ್ಛಿದ್ರಕಾರಿ ಘಟನೆ ನಡೆದಾಗ ಅದರ ಹಿಂದೆ ಮುಸ್ಲಿಂ ಬಣ್ಣವುಳ್ಳ ಸಂಘಟನೆಯೊಂದರ ಹೆಸರು ತಳುಕು ಹಾಕಿಕೊಂಡಿರುತ್ತದೆ. ಪೊಲೀಸ್ ವೈಫಲ್ಯವೆಂಬ ಆರೋಪ ತಪ್ಪಿಸಿಕೊಳ್ಳಲು ನಡೆಸಲಾಗುವ ಬಂಧನ ಎಂದಿನ ಸರಳೀಕೃತ ಮಾದರಿಯಲ್ಲಿಯೇ ನಡೆಯುತ್ತಿರುತ್ತದೆ. ಅದರಿಂದ ಮತ್ತೊಂದು ದುರಂತ ಘಟನೆ ಅಥವಾ ವಿಧ್ವಂಸಕ ಕೃತ್ಯ ನಿಲ್ಲುವುದಿಲ್ಲ. ದೇಶದ ಇನ್ನೊಂದು ಮೊಲೆಯಲ್ಲಿ ಅದೇ ಮಾದರಿಯ ಘಟನೆಗಳು ನಡೆದಾಗ ಮತ್ತೆ ಅದೇ ರೀತಿಯ ಬಂಧನಗಳು, ವರ್ಣರಂಜಿತ ಹೇಳಿಕೆಗಳು, ಆಕರ್ಷಕ ಫೋಟೋಗಳು ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸುತ್ತವೆ. ವಿಸ್ಪೋಟಗಳಿಗೆ ನಿಲುಗಡೆ ಮಾತ್ರ ಕಾಣುವುದಿಲ್ಲ.
ಅಧಿಕಾರರೂಢ ಗೃಹಮಂತ್ರಿಗಳ ರಾಜೀನಾಮೆಗೆ ಪ್ರತಿಪಕ್ಷಗಳ ಮುಖಂಡರು ಆಗ್ರಹಿಸುತ್ತಾರೆ. ಗೃಹಮಂತ್ರಿಗಳು ಪೊಲೀಸ್, ಬೇಹುಗಾರಿಕೆ ಬಲಿಷ್ಠವಾಗಿರುವ ಬಗ್ಗೆ ಸಮರ್ಥನೆ ನೀಡುತ್ತಾರೆ. ಅದೂ ಪತ್ರಿಕೆಗಳಲ್ಲಿ ಪ್ರಕಟವಾಗುತ್ತದೆ. ವೈಫಲ್ಯ-ಸಾಫಲ್ಯಗಳ ಚರ್ಚೆಯಲ್ಲಿ ದಿನದೂಡುತ್ತಿರುವಾಗಲೇ ಮತ್ತೊಂದು ಬಾಂಬ್‌ಸ್ಪೋಟ ತಲ್ಲಣ ಮೊಡಿಸಿ, ಮತ್ತೊಂದಿಷ್ಟು ಅಮಾಯಕರನ್ನು ಬಲಿತೆಗೆದುಕೊಂಡು ರಕ್ತದೋಕುಳಿ ಹರಿಸಿರುತ್ತದೆ.
ಪೋಟಾ, ಟಾಡಾದಂತಹ ಕಠಿಣ ಕಾಯ್ದೆಗಳ ಅಗತ್ಯವನ್ನು ಪ್ರತಿಪಾದಿಸಲಾಗುತ್ತದೆ. ಇರುವ ಕಾಯ್ದೆಗಳೇ ಸಮರ್ಪಕ ಜಾರಿಯಾಗದೇ ಇರುವಾಗ ಹೊಸ ಕಾಯ್ದೆಗಳನ್ನು ತಂದು ಮುಗ್ಧರ ಬಂಧನಕ್ಕೆ, ಅಮಾಯಕರ ಮೇಲೆ ದೌರ್ಜನ್ಯಕ್ಕೆ ಅವಕಾಶ ಕೊಡುವಂತೆ ಒತ್ತಾಯಿಸಲಾಗುತ್ತದೆ. ಇರುವ ಕಾಯ್ದೆಗಳಲ್ಲಿಯೇ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವಾಗ ಹೊಸ ಕಾಯ್ದೆಗಳು ಯಾಕೆ ಬೇಕೆಂದು ಯಾರೂ ಪ್ರಶ್ನೆ ಕೇಳುವುದಿಲ್ಲ. ಕರ್ನಾಟಕ ತರಬೇಕೆಂದಿರುವ ಕೋಕಾ ಕಾಯ್ದೆ ವಿರೋಧಿಸುತ್ತಿರುವ ಕೇಂದ್ರದ ಕಾಂಗ್ರೆಸ್ ಸರ್ಕಾರ, ಮಹಾರಾಷ್ಟ್ರದಲ್ಲಿ ಅಂಥದೇ ಕಾಯ್ದೆ ತರಲು ಸಮ್ಮತಿ ಸೂಚಿಸುತ್ತದೆ. ಟಾಡಾ ಇದ್ದಾಗ ಆಗಿರುವ ಅನಾಹುತಗಳ ಅರಿವಿದ್ದರೂ ಬಿಜೆಪಿಯ ರಾಷ್ಟ್ರೀಯ ಮುಖಂಡರು ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಟಾಡಾ ಮರುಜಾರಿ ಮಾಡುವುದಾಗಿ ಹೇಳುತ್ತಿದ್ದಾರೆ.
ಭಯೋತ್ಪಾದನೆಯ ಮೊಲ ಬೇರುಗಳನ್ನು ಕಿತ್ತೊಗೆಯದೇ ಅಲಂಕಾರಿಕ ಗಿಡಗಳ ರೆಂಬೆಕೊಂಬೆ ಕತ್ತರಿಸುವ ರೀತಿಯಲ್ಲಿ `ಕಟಿಂಗ್ ಮಾಡಿದರೆ ಏನು ಫಲ?
ಯಾವುದು ಭಯೋತ್ಪಾದನೆ?
ನೆಮ್ಮದಿಯಿಂದ, ತಮ್ಮ ಪಾಡಿಗೆ ತಾವು ಬದುಕುತ್ತಿರುವ ಸಮಾಜ ಅಥವಾ ಸಮುದಾಯವನ್ನು ಭಯಕ್ಕೆ ದೂಡುವುದೆಲ್ಲವೂ ಭಯೋತ್ಪಾದನೆಯೇ. ಆದರೆ ಬಾಂಬ್‌ಸ್ಪೋಟದಂತಹ ವಿದ್ರೋಹದ ಚಟುವಟಿಕೆಗಳು ಮಾತ್ರ ಭಯೋತ್ಪಾದನೆ ಎಂಬ ವ್ಯಾಖ್ಯೆ ಪಡೆಯುತ್ತಿರುವುದು ಸಲ್ಲದ ಸಂಗತಿ.
ಗುಜರಾತ್‌ನಲ್ಲಿ ತಿಂಗಳುಗಟ್ಟಲೇ ನಡೆದ ಗಲಭೆ, ಕರ್ನಾಟಕದಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರಗಳ ನಡೆದ ದಾಳಿ ಎಲ್ಲವೂ ಭಯೋತ್ಪಾದಕ ಕೃತ್ಯಗಳೆಂದು ನಾವ್ಯಾಕೆ ಕರೆಯುವುದಿಲ್ಲ. ಬಾಂಬ್‌ಸ್ಪೋಟದ ಕೃತ್ಯಗಳೆಂತೆಯೇ ಇವು ಕೂಡ ಹಿಂಸೆಯ ವೈಭವೀಕರಣವಲ್ಲವೇ?
ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ಸಿಪಿ ಎಂ ಪಾಲಿಟ್‌ಬ್ಯುರೋ ಸದಸ್ಯೆ ಬೃಂದಾ ಕಾರಟ್, ಮಹಾರಾಷ್ಟ್ರ ನಾಂದೇಡ್, ಥಾನೆ, ತಮಿಳು ನಾಡಿನ ತೇನ್‌ಕಾಶಿಯಲ್ಲಿ ವಿಶ್ವಹಿಂದೂ ಪರಿಷತ್, ಆರೆಸ್ಸೆಸ್ ಹಾಗೂ ಬಿಜೆಪಿ ಮುಖಂಡರ ಮನೆಯಲ್ಲಿ ಬಾಂಬ್ ತಯಾರಿಕೆ ನಡೆಯುತ್ತಿದ್ದುದು, ಆಕಸ್ಮಿಕ ಸ್ಪೋಟ ಸಂಭವಿಸಿದ್ದರ ಬಗ್ಗೆ ಮಾತನಾಡಿದ್ದಾರೆ.
ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ 2006ರಲ್ಲಿ ನಾಂದೇಡ್‌ನಲ್ಲಿ ನಡೆದ ಬಾಂಬ್‌ಸ್ಪೋಟಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದಾಗ ಮಹಾರಾಷ್ಟ್ರದಾದ್ಯಂತ ಕೋಮುಗಲಭೆ ಹುಟ್ಟುಹಾಕಲು ಸಂಚು ಬಯಲಿಗೆ ಬಂದಿತ್ತೆಂದು ಇತ್ತೀಚಿನ ಔಟ್‌ಲುಕ್ ಸಂಚಿಕೆ ವಿಸ್ತೃತ ವರದಿ ನೀಡಿದೆ.
ಶಿವಸೇನೆ ಆತ್ಮಹತ್ಯಾದಳ ರಚಿಸಲು ಮುಂದಾಗಿದ್ದರೆ, ಶ್ರೀರಾಮಸೇನೆ ಕೂಡ ಆತ್ಮಹತ್ಯಾದಳ ರಚಿಸುವುದಾಗಿ ಘೋಷಿಸಿದೆ. ಭಯೋತ್ಪಾದನೆ ವಿರೋಧಿಸುವುದಾಗಿ ಹೇಳುತ್ತಿರುವ ಸಂಘಟನೆಗಳು ಆತ್ಮಹತ್ಯಾದಳಗಳನ್ನು ಸಂಘಟಿಸಿ, ವಿಸ್ಪೋಟಕ ಕೃತ್ಯಗಳಿಗೆ ಕೈಯಿಕ್ಕಿದರೆ ಪ್ರಜಾಪ್ರಭುತ್ವಕ್ಕೆ ಎಲ್ಲಿ ಬೆಲೆ ಬಂದೀತು?
ಭಯೋತ್ಪಾದನೆಯನ್ನು ಅದು ಮುಸ್ಲಿಮರೇ ಮಾಡಲಿ, ಹಿಂದುಗಳೇ ಮಾಡಲಿ, ಸಿಖ್ಖರೇ ಮಾಡಲಿ, ಅಸ್ಸಾಮಿಯರೇ ಮಾಡಲಿ, ತಮಿಳರೇ ಮಾಡಲಿ ಅದು ಅಕ್ಷಮ್ಯ. ಯಾರೂ ಯಾರಿಗೂ ಪ್ರತಿಸ್ಪರ್ಧಿಯಾಗಿ ಅದನ್ನು ಮಾಡಕೂಡದು.
ಅಹಿಂಸಾ ಪರಮೋ ಧರ್ಮ ಎಂದು ಪ್ರತಿಪಾದಿಸಿದ, ದಯವೇ ಧರ್ಮದ ಮೂಲವಯ್ಯಾ ದಯೆಯಿಲ್ಲದ ಧರ್ಮ ಅದಾವುದಯ್ಯ ಎಂದು ಪ್ರತಿಪಾದಿಸಿದ ಭಾರತೀಯರ ಸಂಸ್ಕೃತಿ ಹಾಗೆ ಉಳಿಯಬೇಕಾದರೆ ಎಲ್ಲರೂ ಹಿಂಸೆಯನ್ನು ಖಂಡಿಸಬೇಕು. ಹಿಂಸಾ ಪ್ರತಿಪಾದಕರ ವಿರುದ್ಧ ಒಂದಾಗಬೇಕು. ಬುದ್ದ, ಮಹಾವೀರ, ಗಾಂಧಿ ನೆಲೆಸಿದ ನಾಡಿನಲ್ಲಿ ಹಿಂಸೆಯ ತಾಂಡವನೃತ್ಯಕ್ಕೆ ಧ್ವನಿ ಸೇರಿಸಿದರೆ ಅನಾಗರಿಕ ಕಾಲಕ್ಕೆ, ಶಿಲಾಯುಗದ ಕಾಲಕ್ಕೆ ಮತ್ತೆ ಹೋಗುವುದರಲ್ಲಿ ಸಂಶಯವಿಲ್ಲ.
ಶಿಲಾಯುಗದ ಕಾಲದ ಜನ, ಒಳ್ಳೆಯ ಬೇಲಿಗಳು ಒಳ್ಳೆಯ ನೆರೆ ಹೊರೆಯವರನ್ನು ಸೃಷ್ಟಿಸುತ್ತವೆ ಎಂದು ನಂಬಿದ್ದರು ಎಂದು ರಾಬಟ್‌ಫ್ರಾಸ್ಟ್ ತನ್ನ ಪದ್ಯದಲ್ಲಿ ಹೇಳುತ್ತಾನೆ. ಅದು ಮತ್ತೆ ಮರುಕಳಿಸಬಾರದಲ್ಲವೇ?
` ಮಳೆ ಬಂದಾಗ ಓಡಿ ಹೋಗಿ ಮರದ ಕೆಳಗೆ ನಿಂತು ಆಸರೆ ಪಡೆಯುವವರು ಅದು ಯಾವ ಜಾತಿಯ ಮರ, ತನ್ನ ಬಗಲಲ್ಲಿ ನಿಂತವರು ಯಾವ ಜಾತಿ, ಯಾವಧರ್ಮದವರು ಎಂದು ನೋಡುವುದಿಲ್ಲ. ಭಾರತವೆಂಬ ಮರವನ್ನು ಆಶ್ರಯಿಸುವವರು ಕೂಡ ಹೀಗೆ ಮಳೆಯಿಂದ ಆಸರೆ ಪಡೆಯಲು ನಿಂತವರೆಂಬುದನ್ನು ಮರೆಯಬಾರದು.
ವರದಿಯ ವಿವರಗಳು |
 |
ಕೃಪೆ : ಉದಯವಾಣಿ ವರದಿಗಾರರು : ಪ್ರವೀಣ್ ಪ್ರಭಾಕರ್
ಪ್ರಕಟಿಸಿದ ದಿನಾಂಕ : 2008-10-12
|
|
| Saif, Dubai | 2008-10-15 | | Priya Odugare,
Bharathadalli samaajada shanthi / nemmadhi kapadalu police vyavasthe,kelasa karya galigagi adhikarashahi,anyayavannu thadeyalu nyayanga hagoo ivelladara melvicharanegagi shasakangavidhe.Eee prathiyondu angavu thanna karyavannu thanu sariyagi maadalu bekada spandhaneyannu needuvabadhalu, namma rajakaranigalu samajavannu vividha gumpugalaagi vibhajisi prathiyondhu dhurghataneyannoo aa aa gumpugalige thamagishtabandhanthe serissutha thamage bekadavarannu hogalutha, bedadavarannu thegalutha deshavannu vadeyuva deshadhrohi kelasavannu maaduthiddare. Modalige, eee rajakaranigalige avara karthavyavannu avaru neraverisabekemba bhaddhatheyannu tharisabeku hagoo bereya vibhagagala karthavyadalli moogu thoorisidahre horagattabheku. Prathiyobbarigoo avaravara karthvyavannu shraddeyindha neraverisalu swathanthryavirabeku. Udhaharanege, yelladaroo bomb sphotavadhare athava yaara meladharoo halleyaadhre, adannondu dhurghataneyendu pariganisi polisarige yella sahayahasthachachi aa ghataneya hindiruva aparadhigalige criminal kanoonina reethi shikshe needi. Anthaha vyakthigalanna avara dushkruthyagalindha guruthisi, jaathiyindalla. Prathi dushkruthyakku, vicharane nadesi, aparadhigalannu bhandhisi mathu shikshisi. Heege maaduvudharindhadharoo jaathiyatheyannu rashtriyatheyagi badalisabahudheno.
Dhanyavadhgalu.
|
| Krishna Hebbar, Kambadakone | 2008-10-14 | | ನಿಜಕ್ಕೂ ಆಶ್ಚರ್ಯಕರ ಉದಯವಾಣಿಯಲ್ಲಿ ಇಂತಹ ಅತ್ಯುತ್ತಮ ಲೇಖನದಿಂದ ಉದಯವಾಣಿ ಪತ್ರಿಕೆ ಕೊಮುದ್ವೇಶದಿಂದ ಕೋಮು ಸೌಹಾರ್ದದ ಕಡೆಗೆ ಧಾವಿಸುತ್ತಿದೆ ಎನ್ನಬಹುದು ಅಥವಾ ಬಿ ಜೆ ಪಿ ಗೆ ಓಟು ಗಳಿಸಲು ಸಾಧ್ಯವಾಗುವ ಉದ್ದೇಶದಿಂದ ಪ್ರಕಟಿಸಿದ್ದು ಏನೆಂದು ತಿಳಿಯಲಿಲ್ಲ . ಏನೆ ಇರಲಿ ವರದಿಗಾರರ ಪ್ರಯತ್ನ ಮಾತ್ರ ಶ್ಲಾಘನೀಯ! ದಯವಿಟ್ಟು ಉದಯವಾಣಿ ಸಂಪಾದಕರು ಇಂತಹ ಕೋಮು ಭಾವನೆಯನ್ನು ಕಾಪಾಡುವ ಲೇಖನ ಪ್ರಕಟಿಸಿ. ಎಲ್ಲ ಧರ್ಮದವರ ವರದಿಯನ್ನು ಕಾಲ್ಪನಿಕವಾಗಿ ಪ್ರಕಟಿಸದೆ ನಿಜ ಎನೆನ್ನುದನ್ನ ಅರಿತು ಬರೆಯಿರಿ. ಇದರಿಂದ ಖಂಡಿತ ಶಾಂತಿ ಉಂಟಾಗುದು. ಪರಶುರಾಮ್, ಸಂತೋಷ್ |
| shakeer kudregala, kudregala,mudigere | 2008-10-13 | | ಉತ್ತಮ ಲೇಖನ ಇಂಥ ಲೇಖನ ಉದಯವಾಣಿ ಯಂತ ಕೋಮುವಾದಿ ಪತ್ರಿಕೆ ಯಲ್ಲಿ ಪ್ರಕಟವಾದದ್ದು ನೋಡಿ ಆಶ್ಚರ್ಯ ವಾಹಿತು. ಭಾರತೀಯ ರಾದ ನಾವೆಲ್ಲರೂ ಭಯುತ್ಪಾದನೆಯನು ನಡೆಸುವ ಎಲ್ಲ ಸಂಗಟನೆ ಗಳನ್ನೂ ವಿರೋದಿಸಿ. ಜ್ಯಾತ್ಯಾತೀತ ವಾಗಿ ಬದುಕಿ ದಯೆ ಯೇ ಧರ್ಮದ ಮೋಲ ಎಂಬ ತತ್ವವನ್ನು ಪಾಲಿಸಿ ಕೊಂಡು ನಡೆಯಬೇಕು. ಭಯೋತ್ಪಾದ ದಂತಹ ಕ್ರತ್ಯಗಳನ್ನು ಯಾರು ಮಾಡುತ್ತಾರೋ ಅವರನ್ನು ಕೂಡಲೇ ಬಂದಿಸಿ ಸರಿಯಾದ ಶಿಕ್ಷೆ ಯನ್ನು ನೀಡಬೇಕು. ಅದು ಬಿಟ್ಟು ಅಮಾಯಕರನ್ನು ಬಂದಿಸಿ ಶಿಕ್ಷೆ ಆಗುದನ್ನು ತಡೆಯಬೇಕು. ಜೈ ಹಿಂದ್ . ಜೈ ಭಾರತ್ |
|