ಪ್ರದೀಪ್ ಕುಮಾರ್ ಕಲ್ಕೂರರಿಗೆ ಸಾರ್ವಜನಿಕ ಅಭಿನಂದನೆ |
ಪ್ರಕಟಿಸಿದ ದಿನಾಂಕ : 2008-10-22
ಮಂಗಳೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸತತ ಮೂರನೆ ಬಾರಿ ಅಯ್ಕೆಯಾಗಿರುವ ಎಸ್. ಪ್ರದೀಪ್ ಕುಮಾರ್ ಕಲ್ಕೂರರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಮಂಗಳವಾರ ಸಂಜೆ ನಗರದ ಪುರಭವನದಲ್ಲಿ ನಡೆಯಿತು.

ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿ ಅರ್ಶಿರ್ವಚನ ನೀಡಿದರು. ಮೂಡಿಬಿದಿರೆ ಜೈನಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಬಾಳಕುಂದ್ರು ಮಠದ ಸ್ವಾಮೀಜಿ, ಕಟೀಲು ವೇ. ಮೂ. ಲಕ್ಷ್ಮೀ ನಾರಾಯಣ ಅಸ್ರಣ್ಣ ಪಾಲ್ಗೊಂಡಿದ್ದರು. ಖ್ಯಾತ ವಿಧ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಅಭಿನಂದನಾ ಭಾಷಣಗೈದರು. ಮುಂಬಯಿ ವಿಶ್ವವಿದನಿಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ತಾಳ್ತಜೆ ವಸಂತಕುಮಾರ್, ಕರ್ನಾಟಕ ಬ್ಯಾಂಕಿನ ಮುಖ್ಯ ಮಹಾಪ್ರಬಂಧಕ ಪಿ. ಜಯರಾಮ ಭಟ್, ವಿಮಾನ ನಿಲ್ದಾಣ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಎಂ. ಅರ್. ವಾಸುದೇವ, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಉದ್ಯಮಿ ಎ. ಜೆ. ಶೆಟ್ಟಿ, ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಯಶೋವರ್ಮ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಂಬಾತನಯ ಮುದ್ರಾಡಿ ಮುಖ್ಯ ಅತಿಥಿಗಳಾಗಿದ್ದರು.
ಅಭಿನಂದನಾ ಸಮಿತಿಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ್ ಸ್ವಾಗತಿಸಿದರು. ಗೌರವಾಧ್ಯಕ್ಷ ಪ್ರೊ. ಎಂ. ಬಿ. ಪುರಾಣಿಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವರದಿಯ ವಿವರಗಳು |
 |
ಕೃಪೆ : ವಾರ್ತಾಭಾರತಿ ವರದಿಗಾರರು : ಗ.ಕ.ಕರಾವಳಿ ವರದಿಗಾರರು
ಪ್ರಕಟಿಸಿದ ದಿನಾಂಕ : 2008-10-22
|
|
|