ಶನಿವಾರ, 11-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
Latest news item ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
Latest news item ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ'
Latest news item ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು?
Latest news item ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
Latest news item `ಹಾಲ್ ಆಫ್ ಫೇಮ್'ಗೆ ಗಾವಸ್ಕರ್
Latest news item ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
Latest news item ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
Latest news item ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
‘ಕೈ ಕತ್ತರಿಸಿ’

-  ಧಾರ್ಮಿಕ ಕೇಂದ್ರ ಧ್ವಂಸಗೊಳಿಸುವವರ ವಿರುದ್ಧ ಮುಖ್ಯಮಂತ್ರಿ ತೀವ್ರ ಆಕ್ರೋಶ
-  ಉಳವಿ ಕ್ಷೇತ್ರದಲ್ಲಿ ಸಿ‌ಎಂ ಗರಂ
-  ಬಡವರು, ಧರ್ಮ ರಕ್ಷಣೆಗೆ ನಾನು ಯಾರನ್ನೂ ಕೇಳ ಬೇಕಾಗಿಲ್ಲ
- ಒಬಾಮಾ ಅಭಿವೃದ್ದಿಗೆ ಭಾರತೀಯರನ್ನೇ ಆಯ್ಕೆಮಾಡಿದ್ದಾರೆ

ಜೋಯಿಡಾ:’ದೇವಸ್ಥಾನ, ಚರ್ಚ್, ಮಸೀದಿಗಳನ್ನು ಧ್ವಂಸಗೊಳಿಸುವವರ ಕೈ ಕತ್ತರಿಸಿ, ಅಂಥವರ ಮೇಲೆ ಕ್ರಮ ಕೈಗೊಳ್ಳಲು ಯಾರ ಮುಲಾಜಿಗೂ ಕಾಯಬೇಡಿ’ ’ಸರ್ಕಾರಕ್ಕೆ ಮಸಿ ಬಳಿಯಲು ದುಷ್ಟಶಕ್ತಿಗಳು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿವೆ. ಈ ಬುಡಮೇಲು ಕೃತ್ಯ ನೋಡಿ ಸಂತಸಪಡುವ ಜನರಿದ್ದಾರೆ. ಅವರ ಉದ್ದೇಶ ಏನು? ಸ್ವಾರ್ಥಿಗಳು ಎಲ್ಲಿ ಬೇಕಾದರೂ ಬುಡಮೇಲು ಕೃತ್ಯ ನಡೆಸುತ್ತಾರೆ...’

ತಾಲೂಕಿನ ಉಳವಿಯಲ್ಲಿ ಶ್ರೀ ಚನ್ನಬಸವೇಶ್ವರನ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳ್ಳಿ ರಥ ಉದ್ಘಾಟಿಸಿ ಅನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಿ‌ಎಂ ಯಡಿಯೂರಪ್ಪ ಪೂಜಾ, ಪ್ರಾರ್ಥನಾ ಸ್ಥಳಗಳ ಮೇಲೆ ದಾಳಿ ಮಾಡುವವರ ವಿರುದ್ಧ ಗುಡುಗಿದ ಪರಿ ಇದು.

ಮುಖ್ಯಮಂತ್ರಿಯವರ ಕೋಪ ಇನ್ನೂ ಮುಂದುವರಿದಿದ್ದು ಅವರ ಈ ಮಾತುಗಳಲ್ಲಿ ಹರಿದುಬಂತು.

’ಒಳ್ಳೆಯದನ್ನು ಮಾಡಿದರೆ ಒಳ್ಳೆಯದು ಎಂದು ಹೇಳುವುದನ್ನು ಬಿಟ್ಟು ಪ್ರತಿಪಕ್ಷಗಳು ವ್ಯರ್ಥ ಆಪಾದನೆ ಮಾಡುತ್ತಿವೆ. ೬೦ ವರ್ಷ ಆಗದ್ದನ್ನು ಈ ಯಡಿಯೂರಪ್ಪ ಎರಡು ವರ್ಷಗಳಲ್ಲಿ ಮಾಡೋಕಾಗತ್ತಾ?’.

’ನಾನು ಮಠಗಳಿಗೆ ಹಣ ನೀಡುವುದನ್ನು ಪ್ರತಿಪಕ್ಷಗಳು ಆಕ್ಷೇಪಿಸುತ್ತಿವೆ. ಆದರೆ, ಬಡ, ದೀನ- ದಲಿತರ ಮತ್ತು ಧರ್ಮದ ರಕ್ಷಣೆ ಮಾಡಲು ನಾನು ಯಾರನ್ನೂ ಕೇಳಬೇಕಾದ ಅಗತ್ಯವಿಲ್ಲ’.

ಯಾವ ದೇಶ ಇತಿಹಾಸವನ್ನು ಮರೆಯುತ್ತದೆಯೋ ಆ ದೇಶಕ್ಕೆ ಭವಿಷ್ಯವಿಲ್ಲ. ೨೧ನೇ ಶತಮಾನ ಎಂದರೆ ಭಾರತೀಯರ ಶತಮಾನ. ಅಮೆರಿಕ ಅಧ್ಯಕ್ಷ ಒಬಾಮಾ ಕೂಡ ಅಭಿವೃದ್ಧಿಗಾಗಿ ಭಾರತೀಯರನ್ನೇ ಆಯ್ಕೆ ಮಾಡಿಕೊಂಡಿದ್ದಾರೆ ಎಂದರು ಸಿ‌ಎಂ.

ಇದೇ ಮೊದಲಲ್ಲ: ‘ಕತ್ತರಿ’ಸುವ ಹೇಳಿಕೆಗಳ ಆರಂಭವಾಗಿದ್ದು ಫಿಲಿಬಿಟ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ವರುಣ್ ಗಾಂಧಿ ಅವರಿಂದ.

ಹಿಂದುತ್ವ ವಿರೋಧಿಸುವವರನ್ನು ಕಡಿದು ಹಾಕಬೇಕು ಎಂದು ಬಹಿರಂಗ ಸಭೆಯಲ್ಲಿ ಹೇಳಿದ್ದರು.

ನಂತರ ಚುನಾವಣಾ ಸಂದರ್ಭದಲ್ಲಿ ಮಾರ್ಚ್ ಅಂತ್ಯದಲ್ಲಿ ಕಾಗೋಡು ತಿಮ್ಮಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಂಗಾರಪ್ಪ ಪರವಾಗಿ ಸಾಗರದಲ್ಲಿ ಚುನಾವಣಾ ಭಾಷಣ ಮಾಡುವಾಗ ‘ಈ ಹಿಂದುತ್ವ ಅಂತ ಹೇಳ್ತಕ್ಕಂತಾ ಕೈ ಮೊದಲು ಕಡೀಬೇಕು. ಬಹುಸಂಖ್ಯಾತರು ಅಂದ್ರೆ ಯಾರು ಎಷ್ಟು ಪರ್ಸೆಂಟ್ ಇದೀರಿ ನೀವು? ನೀವು ಪೂಜೆ ಮಾಡಕ್ಕೆ ನಾವ್ ಪ್ರಸಾದ ತಗೊಳ್ಳಕ್ಕೆ ನಾಚ್ಕೆ ಆಗಲ್ಲ ನಿಮಗೆ?’ ಎಂದು ಬಹಿರಂಗ ಸಭೆಯಲ್ಲಿ ಗುಡುಗಿದ್ದರು.ಆ ಬಗ್ಗೆ ಸಾಗರ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾಗೋಡು ಮಾತಿಗೆ ಪ್ರತಿಯಾಗಿ ಈಗ ಅಬ್ಕಾರಿ ಸಚಿವರಾಗಿರುವ ರೇಣುಕಾಚಾರ್ಯ ಹಿಂದುತ್ವ ವಿರೋಧಿಗಳ ತಲೆಕಡಿಯಬೇಕು ಎಂದು ಗುಡುಗಿದ್ದರು.ಅದಕ್ಕೂ ಬಹಳ ಹಿಂದೆ ಗೋಹತ್ಯೆ ಮಾಡುವವರನ್ನು ಕೈಗಳನ್ನು ಕಡಿಯಬೇಕು ಎಂದು ಈಗ ಇಂಧನ ಸಚಿವರಾಗಿರುವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿ ವಿವಾದ ಹುಟ್ಟುಹಾಕಿದ್ದರು.

ಪ್ರತಿಕ್ರಿಯೆಗಳು

ಮುಖ್ಯಮಂತ್ರಿ ಆ ಭಾವನೆಯಲ್ಲಿ ಹೇಳಿಲ್ಲ. ಧಾರ್ಮಿಕ ಕೇಂದ್ರಗಳಿಗೆ ಮುಖ್ಯಮಂತ್ರಿ ಹೇಳಿಕೆ ಹಿನ್ನೆಲೆಯಲ್ಲಿ ಜನ ಎಚ್ಚರಗೊಳ್ಳಬೇಕೆಂಬುದೇ ಆಗಿದೆ. ಉದ್ರೇಕಗೊಳಿಸಲು ಈ ರೀತಿ ಹೇಳಿಲ್ಲ.
- ಧನಂಜಯ ಕುಮಾರ್, ಬಿಜೆಪಿ ವಕ್ತಾರ

ಅವರಿಗೆ ಸಿಟ್ಟು ಬಂದಿದೆ ಅಷ್ಟೇ. ಅವರು ಬೇಕೆಂದೇ ಹೇಳಿದ್ದಾರೆ ಎಂದೆನಿಸುತ್ತಿಲ್ಲ.
- ಯು.ಆರ್. ಅನಂತಮೂರ್ತಿ

ಹೇಳಿಕೆಯ ಭಾವನೆಯನ್ನಷ್ಟೇ ಅರ್ಥ ಮಾಡಿಕೊಳ್ಳಬೇಕು. ಕಾನೂನು ಕೈಗೆತ್ತಿಕೊಳ್ಳಬೇಕೆಂದು ಹೇಳಿಲ್ಲ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
- ಸಿ.ಟಿ.ರವಿ, ಬಿಜೆಪಿ ವಕ್ತಾರ

ಸಿ‌ಎಂ ಆಗಿ ಈ ಮಾತು ಹೇಳಬಾರದಿತ್ತು. ದೇವಸ್ಥಾನಗಳನ್ನು ಒಡೆದಾಗ ಈ ರೀತಿ ಹೇಳಲ್ಲ. ಚರ್ಚ್ ಒಡೆದಾಗ ಈ ರೀತಿ ಹೇಳಿಕೆ ಬರುತ್ತವೆ. ಹೇಳಿಕೆಯಲ್ಲೂ ತಾರತಮ್ಯ ತೋರಿಸುತ್ತಾರೆ.
- ಪ್ರಮೋದ್ ಮುತಾಲಿಕ್

ಸರ್ಕಾರಕ್ಕೆ ಮಸಿ ಬಳಿಯಲು ದುಷ್ಟಶಕ್ತಿಗಳು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿವೆ. ಈ ಕೃತ್ಯ ನೋಡಿ ಸಂತಸಪಡುವ
ಜನರಿದ್ದಾರೆ. ಅವರ ಉದ್ದೇಶ ಏನು?
- ಯಡಿಯೂರಪ್ಪ

ಕ್ರಿಮಿನಲ್‌ಗಳು ಮಾತನಾಡುವ ಶಬ್ದ. ಸಿ‌ಎಂ ಮೂಲತಃ ಆರ್‌ಎಸ್‌ಎಸ್‌ನವರು, ಅವರ ಫ್ಯಾಸಿಸ್ಟ್ ಮನೋಭಾವ ತೋರಿಸುತ್ತದೆ.
- ಸಿದ್ದರಾಮಯ್ಯ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕನ್ನಡ ಪ್ರಭ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-01-28 00:00:00

Tell a Friend

ಪ್ರತಿಸ್ಪಂದನ
rizwan, manglore
2010-01-28
abhinandanegalu manya mukhyamanthrigalavre, nimma e kanoonu jarige bandare rss,bajarangadala,munthada sangatenegalu mayavagabahudu.and edu munduvaridare sangaparivaadavaralli yaarigoo kai iralikkilla.
farzan, siddakatte(dubai)
2010-01-28
this is not good.this is stupid. CM has so big ressponsibility.so that is worng statement
VS. Shetty, MUDIPU, SA
2010-01-28
Mukyamanthrimdha i reethiya helikeyaadhare, namma graha rakshaka manthiyavariyavaru ಪ್ರಾರ್ಥನಾ ಮಂದಿರಗಳಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ: ಕೈ ಚೆಲ್ಲಿದ ಆಚಾರ್ಯ idharalli yaavudhu sari?. nijavaagiyo athavaa thorikeyo?...
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಶೋಭಾ ತಂದೆ ವೈಕುಂಠಕ್ಕೆ ಯಡ್ಡಿ ಪಟಾಲಂ ಹಾಜರ್
»ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ'
»ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು?
»ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
»ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
»ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು
»ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್‌ನ ನಾಲ್ವರ ಅವಾನತು
»ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ
»ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
»ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
»ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ
»ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ
»ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ
»ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್
»ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ
»ಕಾಂಗ್ರೆಸ್‌ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ
»ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ
» ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ
»ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ
»ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ
»ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ
»ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
»ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು
»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri