ಮ೦ಗಳೂರು: ಕೊಚ್ಚಿಯಲ್ಲಿ ಅಖಿಲ ಭಾರತ ಕನ್ನಡ ಸಂಸ್ಕೃತಿ ಸಮ್ಮೇಳನ |
ಪ್ರಕಟಿಸಿದ ದಿನಾಂಕ : 2010-02-07
ಮಂಗಳೂರು: ಹೃದಯವಾಹಿನಿ ಪತ್ರಿಕೆ ಮಂಗಳೂರು ಮತ್ತು ಕೊಚ್ಚಿ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ಏಳನೇ ಅಖಿಲ ಭಾರತ ಕನ್ನಡ ಸಂಸ್ಕೃತಿ ಸಮ್ಮೇಳನ ಮಾರ್ಚ್ 27 ಮತ್ತು 28 ರಂದು ಕೊಚ್ಚಿಯ ಪುರಭವನದಲ್ಲಿ ನಡೆಯಲಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದಲ್ಲಿ ಕವಿಗೋಷ್ಠಿ, ಬಹುಬಾಷಾ ಕವಿ ಗೋಷ್ಠಿ, ಹಾಸ್ಯ ಗೋಷ್ಠಿ, ಮಾಧ್ಯಮ ಗೋಷ್ಠಿ ಮತ್ತು ಭಾಷಾ ಬಾಂಧವ್ಯ ಗೋಷ್ಠಿ ನಡೆಯಲಿದೆ. ಸಮ್ಮೇಳನದ ಅಂಗವಾಗಿ ಸಾಂಸ್ಕೃತಿಕ ಕಾರ್‍ಯಕ್ರಮಗಳಾದ ಜಾನಪದ ನೃತ್ಯ, ಭರತನಾಟ್ಯ, ನೃತ್ಯರೂಪಕ, ಯಕ್ಷಗಾನ, ಪ್ರಶಸ್ತಿ ಪುರಸ್ಕೃತ ಚಲನಚಿತ್ರ ಪ್ರದರ್ಶನ ನಡೆಯಲಿದೆ ಎಂದರು. ಹೃದಯವಾಹಿನಿ ಪತ್ರಿಕೆಯ ಅಖಿಲ ಭಾರತ ಕನ್ನಡ ಸಂಸ್ಕೃತಿ ಸಮ್ಮೇಳನದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 14 ಮಂದಿಗೆ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು. ಮಾಹಿತಿಗೆ 93433 43239 ಸಂಪರ್ಕಿಸಬಹುದು.
ವರದಿಯ ವಿವರಗಳು |
 |
ಕೃಪೆ : ಪ್ರಜಾವಾಣಿ ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-02-07 00:00:00
|
|
|