ಉಡುಪಿ, ಮಾ.೯: ಬೆಳ್ಮಣ್ಣು ಸಂತ ಜೋಸೆಫರ ಶಾಲೆಯಲ್ಲಿ ಹಿರಿಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಬಿ.ಪುಂಡಲೀಕ ಮರಾಠೆ ಶಿರ್ವ ಇವರನ್ನು ಸರಕಾರ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಸದಸ್ಯರನ್ನಾಗಿ ನೇಮಕ ಮಾಡಿದೆ.
ಶಿಕ್ಷಣ, ಸಾಹಿತ್ಯ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಮರಾಠೆ, ಕೊಂಕಣಿ ಪಠ್ಯ ಪುಸ್ತಕ ರಚನಾ ಸಮಿತಿಯ ಸದಸ್ಯರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.