ಉಡುಪಿ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಬಿ. ಪುಂಡಲೀಕ ಮರಾಠೆ ನೇಮಕ |
ಪ್ರಕಟಿಸಿದ ದಿನಾಂಕ : 2010-03-10
ಉಡುಪಿ: ಶಿಕ್ಷಣ - ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಶಿಕ್ಷಕ ಬಿ. ಪುಂಡಲೀಕ ಮರಾಠೆ ಅವ ರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದೆ.
೨೦೦೪ರಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿಯ `ಮ್ಹಾನ್‌ಮಣೀಸ್' ಪ್ರಶಸ್ತಿ ಪುರಸ್ಕೃತರಾದ ಅವರು ೨೦೦೫ ರಲ್ಲಿ ೬ರಿಂದ ೧೦ನೇ ತರಗತಿಯವರೆಗಿನ ಕೊಂಕಣಿ ಪಠ್ಯ ಪುಸ್ತಕ ರಚನಾ ಸಮಿತಿಯ ಸದಸ್ಯರಾಗಿ, ೨೦೦೬ರಲ್ಲಿ ಕೊಂಕಣಿ ಪಠ್ಯಪುಸ್ತಕ ಕಾರ್ಯಪಡೆಯ ಸದಸ್ಯರಾಗಿದ್ದರು. ಪ್ರಸ್ತುತ ಅವರ ಬೆಳ್ಮಣ್ಣಿನ ಸಂತ ಜೋಸೆಫರ ಶಾಲೆಯಲ್ಲಿ ಹಿರಿಯ ಶಿಕ್ಷಕರಾಗಿ ಕಾರ್ಯನಿರ್ವ ಹಿಸುತ್ತಿದ್ದಾರೆ.
ವರದಿಯ ವಿವರಗಳು |
 |
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-10 00:00:00
|
|
|