ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಕರಾವಳಿಗೆ ಬಜೆಟ್ ಕೊಡುಗೆ ಘೋಷಣೆ ಮಾತ್ರ

ಈ ಸಾಲಿನ ಬಜೆಟ್ ನೋಡಿದರೆ ಹೊಸ ಯೋಜನೆಗಳ ಘೋಷಣೆ ಮಟ್ಟಿಗೆ ಎರಡು ಮಾತಿಲ್ಲ. ಆದರೆ ಈ ಹಿಂದಿನ ಘೋಷಣೆಗಳ ಸ್ಥಿತಿ-ಗತಿ ಏನು ಯಾರಿಗೆ ಗೊತ್ತು? ಆಡಳಿತ ಪಕ್ಷ ಸಹಜವಾ ಗಿಯೇ ಜನಪರ, ಅಭಿವೃದ್ದಿಪರ ಎಂದು ಹೊಗಳಬಹುದು ಮತ್ತು ಹೊಗಳಲೇಬೇಕು. ಆದರೆ ಪ್ರತಿ ಪಕ್ಷದವರಿಂದ ಇಂಥ ಹೊಗಳಿಕೆ ನಿರೀಕ್ಷೆ ಮಾಡುವಂತಿಲ್ಲ. ಆದ್ದರಿಂದಲೇ ವಿರೋಧ ಪಕ್ಷಗಳು ಸಾರಾಸಗಟಾಗಿ ವಿರೋಧಿಸುತ್ತಿವೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಹು ನಿರೀಕ್ಷಿತವಾದ ಬಜೆಟ್ ಮಂಡಿಸಿದ್ದಾರೆ, ಆದರೆ ಜನಸಾಮಾನ್ಯರ ನಿರೀಕ್ಷೆಗಳು ಮಾತ್ರ ಮರೀಚಿಕೆಗಳಾಗಿವೆ. ಸಹಜವಾಗಿಯೇ ಮುಖ್ಯಮಂತ್ರಿ ಯಾದವರಿಗೆ ಸಮಗ್ರ ರಾಜ್ಯದ ಹಿತಕಾಪಾಡುವ ಹೊಣೆಗಾರಿಕೆ ಇರುತ್ತದೆ. ಎಲ್ಲ ವರ್ಗ, ಜಾತಿ, ಪಂಗಡದವರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಬೇಕಾಗುತ್ತದೆ. ಆದರೆ ಬೆಳೆಯು ತ್ತಿರುವ ನಗರಗಳನ್ನು ಗಮನದಲ್ಲಿಟ್ಟುಕೊಂಡು ಆದ್ಯತೆ ಮೇಲೆ ಅನುದಾನ ಒದಗಿಸುವ ಜವಾ ಬ್ದಾರಿಯೂ ಇರುತ್ತದೆ.

ಈ ಹಿನ್ನೆಲೆಯಲ್ಲಿ ನೋಡಿದರೆ ಕರಾವಳಿ ಭಾಗ ಬೆಂಗಳೂರನ್ನು ಬಿಟ್ಟರೆ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರದೇಶ. ಕರಾವಳಿ ಅಭಿವೃದ್ದಿ ಪ್ರಾಧಿಕಾರದ ರಚನೆಯನ್ನು ಬಿಟ್ಟರೆ ಈ ಭಾಗದ ಬೆಳವಣಿಗೆಗೆ ಪೂರಕವಾಗಿ ಈ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎನ್ನುವುದನ್ನು ಖಂಡಿತಕ್ಕೂ ಪ್ರಶ್ನಿಸಲೇ ಬೇಕಾಗುತ್ತದೆ.

ಈ ಸಾಲಿನ ಬಜೆಟ್ ನೋಡಿದರೆ ಹೊಸ ಯೋಜನೆಗಳ ಘೋಷಣೆ ಮಟ್ಟಿಗೆ ಎರಡು ಮಾತಿಲ್ಲ. ಆದರೆ ಈ ಹಿಂದಿನ ಘೋಷಣೆಗಳ ಸ್ಥಿತಿ-ಗತಿ ಏನು ಯಾರಿಗೆ ಗೊತ್ತು? ಆಡಳಿತ ಪಕ್ಷ ಸಹಜವಾಗಿ ಯೇ ಜನಪರ, ಅಭಿವೃದ್ದಿಪರ ಎಂದು ಹೊಗಳಬಹುದು ಮತ್ತು ಹೊಗಳಲೇಬೇಕು. ಆದರೆ ಪ್ರತಿ ಪಕ್ಷದವರಿಂದ ಇಂಥ ಹೊಗಳಿಕೆ ನಿರೀಕ್ಷೆ ಮಾಡುವಂತಿಲ್ಲ. ಆದ್ದರಿಂದಲೇ ವಿರೋಧ ಪಕ್ಷಗಳು ಸಾರಾಸಗಟಾಗಿ ವಿರೋಧಿಸುತ್ತಿವೆ.

ಕರಾವಳಿಗೆ ಮೋನೋ ರೈಲು, ಸ್ಕೈಬಸ್, ಮಂಗಳ ಕಾರ್ನೀಶ್ ಇತ್ಯಾದಿ... ಇತ್ಯಾದಿ ಘೋಷಣೆ ಗಳಾಗಿದ್ದವು. ಅವುಗಳ ಸ್ಥಿತಿ ಈಗ ಏನಾಗಿದೆ? ಕರಾವಳಿಯಲ್ಲಿ ಪ್ರತೀ ವರ್ಷ ಮಳೆಗಾಲದಲ್ಲಿ ಸಮಸ್ಯೆ ಒಡ್ಡುವ ಕಡಲು ಕೊರೆತಕ್ಕೆ ಈ ಬಜೆಟ್ ಏನು ಹೇಳಿದೆ ? ಬಜೆಟ್ ತಯಾರಿಗೂ ಮುನ್ನ ಆಯಾಯ ಭಾಗದ ಶಾಸಕರನ್ನು ಕರೆದು (ಪ್ರತಿಪಕ್ಷದವರನ್ನೂ ಸಹಿತ) ಚರ್ಚಿಸಿ ಆದ್ಯತೆ ಗುರುತಿ ಸಿಕೊಳ್ಳುವುದು ಸಂಪ್ರದಾಯ. ಕಳೆದ ಒಂದು ದಶಕದಿಂದ ಈ ಸಂಪ್ರದಾಯಕ್ಕೆ ತಿಲಾಂಜಲಿ ಕೊಡಲಾಗಿದೆ. ಹೋಗಲಿ ಆಡಳಿತ ಪಕ್ಷದವರನ್ನಾದರೂ ಕರೆದು ಆದ್ಯತೆ ಗುರುತಿಸಲಾಗಿದೆಯೇ ಎಂದು ಕೇಳಿ ನೋಡಿ.

ನೇತ್ರಾವತಿ ನದಿ ತಿರುಗಿಸಲು ಹೊರಟವರಿಗೆ ಮಳೆಗಾಲದಲ್ಲಿ ಅವಳಿ ಜಿಲ್ಲೆಯ ಹತ್ತಕ್ಕೂ ಹೆಚ್ಚು ದೊಡ್ಡ ನದಿಗಳ ನೀರು ಸಮುದ್ರಕ್ಕೆ ಹರಿದು ವ್ಯರ್ಥವಾಗಿ ಹೋಗುತ್ತಿದೆಯಲ್ಲಾ ಏನು ಮಾಡಿ ದ್ದಾರೆ ? ಹಣಕಾಸು ಆಯೋಗದ ಅಧ್ಯಕ್ಷರಾಗಿರುವ ಎ.ಜಿ.ಕೊಡ್ಗಿಯವರು ಅವಿಭಜಿತ ಜಿಲ್ಲಾ ಪರಿಷತ್ ಸದಸ್ಯರಾಗಿದ್ದಾಗ (ಆಗ ಕಾಂಗ್ರೆಸ್‌ನಲ್ಲಿದ್ದರು) ಕರಾವಳಿಯ ನದಿ ಜೋಡಣೆ ಕುರಿತು ಜಿಲ್ಲಾ ಪರಿಷತ್‌ಗೆ ವರದಿ ಕೊಟ್ಟಿದ್ದರು.

ಆಗಿನ ಜಿಲ್ಲಾ ಪರಿಷತ್ ಅಧ್ಯಕ್ಷರಾಗಿದ್ದ ಕೆ.ಸಿ.ಕುಂದರ್ ಆಸಕ್ತಿ ತೋರಿಸಿ ನಬಾರ್ಡ್, ವಿಶ್ವಬ್ಯಾಂಕ್ ಸಹಿತ ಹಲವು ಹಣಕಾಸು ಸಂಸ್ಥೆಗಳ ಮೊರೆ ಹೋಗಿದ್ದರು, ಆದರೆ ಅದು ಕೈಗೂಡಲಿಲ್ಲ. ಎರಡೂ ವರೆ ದಶಕಗಳ ನಂತರ ದೊಡ್ಡ ಹುದ್ದೆಯಲ್ಲಿರುವ ಕೊಡ್ಗಿಯವರಿಗೆ ತಾವೇ ಸಿದ್ದಪಡಿಸಿದ ನದಿಜೋ ಡಣೆ ಯೋಜನೆಗೆ ಮುಖ್ಯಮಂತ್ರಿಗಳ ಮನವೊಲಿಸಲು ಯಾಕೆ ಆಗಿಲ್ಲ ?

ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಕಾಲದಲ್ಲಿ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ವಾರಾಹಿ ಯೋಜನೆಗೆ ಒಂದೇ ದಿನ ಶಿಲಾನ್ಯಾಸ ಮಾಡಲಾಗಿತ್ತು. ಆಗ ಈ ಯೋಜನೆ ಗಳಿಗೆ ಒತ್ತಾಸೆ ನೀಡಿದ್ದವರು ಆಗಿನ ರಾಜ್ಯದ ಹಣಕಾಸು ಸಚಿವರು ಮತ್ತು ಈಗಿನ ಕೇಂದ್ರ ಸರ್ಕಾರದಲ್ಲಿ ಕಾನೂನು ಸಚಿವರಾಗಿರುವ ಎಂ.ವೀರಪ್ಪ ಮೊಯ್ಲಿ ಅವರು ಎನ್ನುವುದು ಈಗಿನ ರಾಜಕಾರಣಿಗಳಿಗೂ ಗೊತ್ತಿಲ್ಲ, ಹೊಸತಲೆಮಾರಿನ ಮಾಧ್ಯಮದವರಿಗೂ ಗೊತ್ತಿಲ್ಲ.

ದುರಂತವೆಂದರೆ ಈ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡವರು ಈಗ ಕೋಟ್ಯಾಧೀಶರು, ಸಕ್ಕರೆ ಕಾರ್ಖಾನೆ ಯಂತ್ರಗಳಿಗೆ ತುಕ್ಕು ಹಿಡ್ಡಿದಿದೆ, ಕಬ್ಬು ಬೆಳೆದು ಒದಗಿಸಿದ ರೈತರ ಮನೆ ಮಠ ಜಪ್ತಿಯಾಗಿದೆ. ಕಾರ್ಖಾನೆ ಭೂಮಿಯನ್ನು ರಿಯಲ್ ಎಸ್ಟೇಟ್ ದಂಧೆಯವರಿಗೆ ಮಾರಲು ಸಂಚು ನಡೆದಿದೆ.

ಸಾಲ ಒದಗಿಸಿದವರಿಗೆ ಬಡ್ಡಿ ತುಂಬಲು ಕಾರ್ಖಾನೆಯ ಭೂಮಿ ಮಾರಲು ವಿಧಾನ ಸಭೆಯಲ್ಲಿ ಪ್ರಶ್ನೆಗೆ ಉತ್ತರಿಸುತ್ತಾರೆ ಅಂದರೆ ಸರ್ಕಾರಗಳ ಚಿಂತೆ ಯಾವದಿಕ್ಕಿನಲ್ಲಿದೆ ಎನ್ನುವುದು ಅರ್ಥ ವಾಗಿ ಬಿಡುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಕ್ಕರೆ ಕಾರ್ಖಾನೆ ಉಳಿಸಲು ಏನಾದರೂ ಯೊಚನೆ ಮಾಡಿದರೆ ? ಅಥವಾ ಈ ಸಾಲಿನ ಬಜೆಟ್‌ನಲ್ಲಿ ಸಂದೇಶವಾದರೂ ಇದೆಯೇ?

ಕ್ಷಮಿಸಿ ಇದ್ದುದನ್ನು ಇದ್ದಂತೆ ಹೇಳಿದ್ದಕ್ಕೆ. ಕರಾವಳಿ ಭಾಗದ ಜನಪ್ರತಿನಿಧಿಗಳು ಸಿಟ್ಟಾಗಬೇಡಿ, ಕೂಲ್ ಆಗಿ ಸ್ವಲ್ಪ ಹೊತ್ತು ಯೋಚಿಸಿ, ವಾಸ್ತವ ಅರಿವಾಗುತ್ತದೆ. ರಾಜಕೀಯ ಬೇಕು ಚುನಾವಣೆ ಕಾಲಕ್ಕೆ ಮಾತ್ರ, ಉಳಿದ ಕಾಲದಲ್ಲಿ ಅಭಿವೃದ್ದಿಯೇ ಮಂತ್ರವಾಗಲಿ ಎನ್ನುವುದು ಆಶಯ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಚಿದಂಬರ ಬೈಕಂಪಾಡಿ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-10 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
»ಈ ಗುಲಾಬಿ ಇರುವುದು ನಿನಗಾಗಿ...
»ನಿಮ್ಮ ಪ್ರೇಮ ಚಿರಾಯುವಾಗಲಿ...
»ಶಂಕರ್ ಸಾವಿಗೆ ಕಾರಣಳಾದ ಆ ಮಾಯಾವಿ ಯಾರು?
»ಮನಃಶಾಸ್ತ್ರಕ್ಕೆ ವೇದಾಂತದ ಅಡಿಗಲ್ಲು...
»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri