ಮಂಗಳೂರು: ಮಕ್ಕಳ ಹಕ್ಕುಗಳ ಜಾಗೃತಿಗಾಗಿ ‘ಕರಾವಳಿ ಅಲೆ’ಗೆ ಪ್ರಶಸ್ತಿ
ಪ್ರಕಟಿಸಿದ ದಿನಾಂಕ : 2010-03-12
ಮಂಗಳೂರು, ಮಾ.೧೧: ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಕರಾವಳಿ ಅಲೆ ಪತ್ರಿಕೆಗೆ ‘ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿದ ಅತ್ಯುತ್ತಮ ಪತ್ರಿಕೆ’ ಎಂಬ ‘ಸಿಡಬ್ಲುಸಿ ಪ್ರಶಸ್ತಿ’ಯನ್ನು ಘೋಷಿಸಿದೆ.
ಮಕ್ಕಳ ಹಕ್ಕುಗಳು ಮತ್ತು ರಕ್ಷಣೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದ ಹಿನ್ನೆಲೆಯಲ್ಲಿ ಅಲೆಗೆ ಈ ಪ್ರಶಸ್ತಿ ಘೋಷಿಸಲಾಗಿದೆ.
ಮಕ್ಕಳ ಹಕ್ಕುಗಳ ಬಗ್ಗೆ ಹಲವಾರು ಮಾಹಿತಿಯುಕ್ತ ಮತ್ತು ಚಿಂತನಾತ್ಮಕ ವರದಿಗಳನ್ನು ಪ್ರಕಟಿಸಿದ ‘ದಿ ಹಿಂದೂ’ ಪತ್ರಿಕೆಯ ವರದಿಗಾರ ಸುದಿಪ್ತೋ ಮೊಂಡಲ್‌ಗೆ ವೈಯುಕ್ತಿಕ ಪ್ರಶಸ್ತಿಯನ್ನು ಘೋಷಿಸಲಾಗಿದೆ. ‘ಮಕ್ಕಳ ಕಲ್ಯಾಣ ಸಮಿತಿ’ ಮತ್ತು ‘ಸಿವಿಲ್ ಸೊಸೈಟಿ ಆಫ್ ಮಂಗಳೂರು’ ಸಂಸ್ಥೆಯು ಮಾ.೧೨ರಂದು ನಗರದ ಎಸ್‌ಡಿಎಂ ಕಾಲೇಜಿನಲ್ಲಿ ಹಮ್ಮಿಕೊಂಡಿ ರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ರಾಜ್ಯದ ಮಕ್ಕಳ ಹಕ್ಕುಗಳ ಅಯೋಗದ ಅಧ್ಯಕ್ಷೆ ನೀನಾ ನಾಯಕ್ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟನೆ ತಿಳಿಸಿದೆ.