ಮಂಡ್ಯ, ಮಾ.೧೫: ಶ್ರೀರಂಗಪಟ್ಟಣ ತಾಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಶ್ರೀ ಚಾಮುಂಡಮ್ಮ ದೇವಿಗೆ ಪೂಜೆ ಸಲ್ಲಿಸುವ ವಿಚಾರವಾಗಿ ದಲಿತರು ಮತ್ತು ಸವರ್ಣೀಯರ ನಡುವೆ ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ೧೪೪ ಸೆಕ್ಷನ್ ಜಾರಿ ಮಾಡಲಾಗಿದೆ.
೨೦೦೮ರ ಯುಗಾದಿ ಹಬ್ಬದ ವೇಳೆ ಉಭಯ ಕೋಮುಗಳ ನಡುವೆ ಘರ್ಷಣೆ ಉಂಟಾಗಿ, ವಿವಾದ ತಲೆತೋರಿತ್ತು.
ಆ ವೇಳೆ ಜಿಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು.
ಅಂದಿನಿಂದ ಪ್ರತಿ ವರ್ಷವೂ ಯುಗಾದಿ ಹಬ್ಬದ ವೇಳೆ ಬಿಗುವಿನ ವಾತಾವರಣ ಸೃಷ್ಟಿಯಾಗುತ್ತಿತ್ತು. ಈ ವರ್ಷಉಭಯ ಕೋಮುಗಳ ನಡುವೆ ಒಮ್ಮತ ಮೂಡಿಸಲು ನಡೆಸಿದ ಪ್ರಯತ್ನ ವಿಲವಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾ.೧೭ರ ಸಂಜೆ ೬ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಎನ್.ಸಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.