ಮ೦ಗಳೂರು: ಮಾ. 21ರ೦ದು ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ಪ್ರದಾನ |
ಪ್ರಕಟಿಸಿದ ದಿನಾಂಕ : 2010-03-18
ಮಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ೨೦೦೮, ೨೦೦೯ರ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾ. ೨೧ರಂದು ನಡೆಯಲಿದೆ. ತೆಂಕು ತಿಟ್ಟು, ಬಡಗುತಿಟ್ಟು, ಬಡಾಬಡಗುತಿಟ್ಟುಗಳಲ್ಲದೆ ದೊಡ್ಡಾಟ, ಸಣ್ಣಾಟ, ಕೃಷ್ಣ ಪಾರಿಜಾತ, ಘಟ್ಟದ ಕೋರೆ ಮುಂತಾದ ಯಕ್ಷಗಾನದ ಪ್ರಕಾರಗಳನ್ನೆಲ್ಲ ಸೇರಿಸಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ರಚಿಸಲಾಗಿದೆ.
ಹಾಗಾಗಿ ಈ ಎಲ್ಲ್ಲಪ್ರಕಾರಗಳ ಕಲಾವಿದರನ್ನೂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಕಾ ಡೆಮಿ ಅಧ್ಯಕ್ಷ ಕುಂಬಳೆ ಸುಂದರರಾವ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವರದಿಯ ವಿವರಗಳು |
 |
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-18 00:00:00
|
|
|