ಮಂಗಳೂರು, ಮಾ.೧೮: ಪರೀಕ್ಷೆ...ಪರೀಕ್ಷೆ...ಮಂಗಳೂರಿನ ಕಾರ್‌ಸ್ಟ್ರೀಟ್‌ನಲ್ಲಿರುವ ಹೆಮ್ಮಕ್ಕಳ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವುದು. ಇನ್ನೊಂದು ಚಿತ್ರದಲ್ಲಿ ಉಡುಪಿ ನಗರದ ಪೂರ್ಣಪ್ರಜ್ಞ್ಞ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿರುವುದು.
ದ.ಕ.ಜಿಲ್ಲೆಯಲ್ಲಿ ಹಾಗೂ ಉಡುಪಿಯಲ್ಲಿ ಗುರುವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದ್ದು, ಯಾವುದೇ ನಕಲಿ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ದ.ಕ.ಜಿಲ್ಲೆಯಲ್ಲಿ ೪೫ ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ೨೯,೧೬೮ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯ ೨೫ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದು ಆರಂಭಗೊಂಡವು.