ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಅದ್ದೂರಿ ಸ್ವಾಗತ. |
ಪ್ರಕಟಿಸಿದ ದಿನಾಂಕ : 2010-03-20
ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆಯುವ ದಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪರವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಕೃಷ್ಣ ಪಾಲೆಮಾರ್, ಮೇಯರ್ ರಜನಿ ದುಗ್ದಣ್ಣ ಅವರು ಸ್ವಾಗತಿಸಿದರು.
ಮಂಗಳೂರು, ಮಾ.೨೦: ನೈಸ್ ಬಗ್ಗೆ ಈಗಾಗಲೆ ಸಾಕಷ್ಟು ಚರ್ಚೆಯಾಗಿದೆ. ಈ ಬಗ್ಗೆ ತಂದೆ ಮಕ್ಕಳನ್ನು ಮಾತುಕತೆಗೆ ಆಹ್ವಾನಿಸಲಾಗಿದ್ದರೂ ಅವರು ಮಾತು ಕತೆಗೆ ಬಂದಿಲ್ಲ. ಆದರೆ ತಂದೆ ಮಕ್ಕಳು ವೃಥಾ ಆರೋಪವನ್ನು ಮಾತ್ರ ಮುಂದು ವರಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಕಲ್ಲಡ್ಕದಲ್ಲಿ ಶ್ರೀರಾಮ ಯಜ್ಞದಲ್ಲಿ ಭಾಗವಹಿಸುವ ಸಲುವಾಗಿ ಇಂದು ಸಂಜೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಂದರ್ಭ ನೈಸ್ ಬಗ್ಗೆ ದೇವೇಗೌಡರು ತಮ್ಮನ್ನು ವಚನ ಭ್ರಷ್ಟರು ಎಂದು ಟೀಕಿಸಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಯಡಿಯೂರಪ್ಪ ಉತ್ತರಿಸಿದರು.
ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿರುವ ಯೋಜನೆಗಳನ್ನು ಕಾರ್ಯಗತಗೊಳಿಸ ಲಾಗುವುದು ಎಂದು ಅವರು ಹೇಳಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜಶೆಟ್ಟಿ, ಉಪಮೇಯರ್ ರಾಜೇಂದ್ರ ,ಪಶ್ಚಿಮ ವಲಯ ಐಜಿಪಿ ಗೋಪಾಲ್ ಹೊಸೂರ್, ನಗರ ಪಾಲಿಕೆ ಆಯುಕ್ತ ಡಾ.ವಿಜಯಪ್ರಕಾಶ್,ಶಾಸಕ ಯೋಗಿಶ್ ಭಟ್, ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ, ಎಸ್ ಪಿ ಡಾ.ಸುಬ್ರಮ ಣ್ಯೇಶ್ವರ ರಾವ್ ಉಪಸ್ಥಿತರಿದ್ದರು.
ವರದಿಯ ವಿವರಗಳು |
 |
ವರದಿಗಾರರು : ಸತೀಶ್ ಕಾಪಿಕಾಡ್
ಪ್ರಕಟಿಸಿದ ದಿನಾಂಕ : 2010-03-20 00:00:00
|
|
|