| ಇತ್ತೀಚಿನ 20 ಪ್ರಮುಖ ವರದಿಗಳು |
|
|
|
‘ಗೋಹತ್ಯೆ’ ಹಿಂದೆ ನರಹತ್ಯೆಯ ಕಾರ್ಯಸೂಚಿ: ದೇವನೂರು |
ಪ್ರಕಟಿಸಿದ ದಿನಾಂಕ : 2010-03-21
ಬೆಂಗಳೂರು, ಮಾ. ೨೦: ಗೋಹತ್ಯೆ ನಿಷೇಧ ಮಸೂದೆ ಜಾರಿಯ ಹಿಂದೆ ಸಂಘವಾರದ ‘ನರಹತ್ಯೆ’ಯ ಗುಪ್ತ ಕಾರ್ಯ ಸೂಚಿ ಅಡಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಾಹಿತಿ ದೇವನೂರು ಮಹಾದೇವ, ಗೋವಿನ ಸಗಣಿ-ಗಂಜಳ ಔಷಧಿಯಾದರೆ ಗೋಮಾಂಸ ಔಷಧಿಯಾಗುವುದಿಲ್ಲವೇಕೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಶನಿವಾರ ನಗರದ ಗಾಂಧಿ ಭವನದಲ್ಲಿ ಡಾ.ರಾಮಮನೋಹರ ಲೋಹಿಯಾ ಸಮತಾ ವಿದ್ಯಾಲಯ ಆಯೋಜಿಸಿದ್ದ ಲೋಹಿಯಾ ಜನ್ಮ ಶತಾಬ್ದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಹಾರ ಸಂಸ್ಕೃತಿಯ ಅರಿವಿಲ್ಲದ ಅವಿವೇಕಿ ಸರಕಾರ ಗೋಹತ್ಯೆ ನಿಷೇಧಕ್ಕೆ ಮುಂದಾಗಿದೆ. ಇದು ಅನಾಗರೀಕ ಕೆಲಸ ಎಂದು ಕಿಡಿಕಾರಿದರು.
ಬರಲಿರುವ ದಿನಗಳಲ್ಲಿ ಗೋಮಾಂಸದ ಖಾದ್ಯಗಳನ್ನು ತಯಾರಿಸಿ ಸಾರ್ವಜನಿಕವಾಗಿ ತಿನ್ನಬೇಕು. ಈ ಖಾದ್ಯಗಳನ್ನು ಮಾರಾಟ ಮಾಡಬೇಕು ಎಂದು ಹೇಳಿದ ದೇವನೂರು, ಗೋಹತ್ಯೆ ನಿಷೇಧ ಮಸೂದೆಯನ್ನು ವಿರೋಧಿಸಿ ದಲಿತ, ರೈತ ಮತ್ತು ಸಮಾಜವಾದಿಗಳೆಲ್ಲ ಒಗ್ಗೂಡಿ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ರೂಪಿಸಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.
ಲೋಹಿಯಾ ಬೌತಿಕವಾಗಿ ನಮ್ಮನ್ನು ಅಗಲಿದ ದಿನವೇ ನಾನು ಅವರ ಪ್ರಜ್ಞೆಯನ್ನು ಮೈಗೂಡಿಸಿಕೊಂಡೆ. ಜಾತಿ ಪದ್ಧತಿಯ ವಿರುದ್ಧ ಅವಿರತ ಕೆಲಸ ಮಾಡಿದ ಲೋಹಿಯಾರ ನೆನಪು ಮಾಡಿಕೊಳ್ಳುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ ದೇವನೂರು, ಜಾತಿ ವ್ಯವಸ್ಥೆಯಲ್ಲಿ ಮುಳುಗಿದರೆ ನೀರಲ್ಲಿ ಮುಳುಗಿ ಮೂರ್ಛೆಹೋದಂತೆ. ಜಾತಿ ವ್ಯವಸ್ಥೆಯ ವಿರುದ್ಧ ವಿರುದ್ಧ ಹೋರಾಡುವುದು ತಂತಿಯ ಮೇಲಿನ ನಡಿಗೆ ಇದ್ದಂತೆ. ಜಾತಿ ಪದ್ಧತಿಯ ನಾಶ ಜಾತ್ಯತೀತ ಮನೋಭೂಮಿಕೆಯ ಮೇಲೆ ನಡೆಯಬೇಕಾಗಿದೆ. ಯಾವುದೇ ರೀತಿಯ ದ್ವೇಷದ ಸೋಂಕಿಲ್ಲದೆ ಪ್ರೀತಿಯಿಂದ ಈ ಕಾರ್ಯ ನಿರ್ವಹಿಸಬೇಕಾದುದು ಎಲ್ಲ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಹೊಸ ನಾಣ್ಯ ಬೇಕು: ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ರಾಮಮನೋಹರ ಲೋಹಿಯಾರ ಸೈದ್ದಾಂತಿಕ ವಿಚಾರಗಳನ್ನು ಕರಗಿಸಿ ಹೊಸ ನಾಣ್ಯ ತಯಾರಿಸುವ ಅಗತ್ಯವಿದೆ ಎಂದ ದೇವನೂರು ಮಹಾದೇವ, ಸಮಾಜದ ಎಲ್ಲ ವರ್ಗದ ಜನರನ್ನು ಒಳಗೊಳ್ಳುವ ತಾತ್ವಿಕತೆ ಬೇಕಾಗಿದೆ. ಇದೇ ಸಂದರ್ಭದಲ್ಲಿ ಕಮ್ಯೂನಿಷ್ಟ್ ಸಂಘಟನೆಯ ಬಿಗಿ ರಚನೆಯನ್ನು ಉದಾರಗೊಳಿಸಿ ಸ್ವೀಕರಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ನನ್ನ ಬಿಡುಗಡೆಗಾಗಿ ನನ್ನ ಸಾಮಾಜಿಕ ಹೋರಾಟ ಎಂಬ ಭಾವನೆಯನ್ನು ಬೆಳೆಸಿಕೊಂಡು ಜಗತ್ತಿನ ಕತ್ತಲನ್ನು ತೊಡೆದು ಹಾಕಲು ಒಗ್ಗೂಡಬೇಕು. ಆ ಮೂಲಕ ಸಮಾಜವಾದದ ಮೌಲ್ಯವನ್ನು ಹೆಚ್ಚಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಅವರು ಕರೆ ನೀಡಿದರು.
ಮೀಸಲು ಮಸೂದೆಯಿಂದ ಪ್ರಾದೇಶಿಕ ಪಕ್ಷಗಳ ನಾಶ: ಕಾರ್ಯಕ್ರದಲ್ಲಿ ಪ್ರಸ್ಥಾವಿಕವಾಗಿ ಮಾತನಾಡಿದ ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್, ಮಹಿಳಾ ಮೀಸಲಾತಿ ಮಸೂದೆ ಜಾರಿಗೊಳಿಸುವುದರಿಂದ ದೇಶದಲ್ಲಿನ ಪ್ರಾದೇಶಿಕ ಪಕ್ಷಗಳು ಸಂಪೂರ್ಣ ನಾಶವಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಮಸೂದೆ ಜಾರಿಯಿಂದ ದಲಿತ, ಹಿಂದುಳಿದ, ಅಲ್ಪಸಂಖ್ಯಾತರಿಗೆ ನಾಯಕರುಗಳ ಸ್ಥಾನಗಳಿಗೆ ಧಕ್ಕೆಯುಂಟಾಗಲಿದೆ. ಈಗಾಗಲೇ ಮುಂಚೂಣಿಯಲ್ಲಿನ ಜಾತಿಗಳಿಗೆ ಮಹಿಳಾ ಮೀಸಲಾತಿ ಮಸೂದೆಯಿಂದ ಅನುಕೂಲವಾಗಲಿದೆ ಎಂದು ಹೇಳಿದ ಅವರು, ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ನಾಯಕರು ಕಷ್ಟಪಟ್ಟು ಉಳಿಸಿಕೊಂಡು ಕ್ಷೇತ್ರಗಳು ಅವರಿಂದ ಕೈತಪ್ಪಿ ಹೊಗಲಿವೆ ಎಂದು ಬಹಿರಂಗಪಡಿಸಿದರು.
ಮಹಿಳಾ ಮೀಸಲಾತಿ ಮತ್ತು ಮಹಿಳಾ ಸಬಲೀಕರಣದ ಬಗ್ಗೆ ಅತೀವ ಕಳಕಳಿ ವ್ಯಕ್ತಪಡಿಸುವ ಸೋನಿಯಾಗಾಂಧಿ. ಅವರ ಪಕ್ಷದಲ್ಲಿ ಶೇ.೧೦ರಷ್ಟು ಟಿಕೆಟ್‌ಗಳನ್ನು ಮಹಿಳೆಯರಿಗೆ ನೀಡಿಲ್ಲ. ಮೊದಲು ಟಿಕೆಟ್‌ನಿಂದ ಬದ್ಧತೆ ಪ್ರದರ್ಶಿಸಲಿ ಎಂದು ಒತ್ತಾಯಿಸಿದ ರವಿವರ್ಮ ಕುಮಾರ್, ಮಹಿಳಾ ಮೀಸಲಾತಿ ಮಸೂದೆಯನ್ನು ಕಡುವೈರಿಗಳೆಂದು ಬಿಂಬಿತವಾಗಿದ್ದ ಬಿಜೆಪಿ ಮತ್ತು ಕಮ್ಯೂನಿಷ್ಟರು ಒಗ್ಗೂಡಿದ್ದಾರೆ.
ಸುಷ್ಮಾ ಮತ್ತು ಬೃಂದಾ ಕಾರಟ್‌ರ ಆಲಿಂಗನದ ಹಿಂದೆ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರನ್ನು ತುಳಿಯುವ ಹುನ್ನಾರ ಅಡಗಿದೆ. ಮಾತ್ರವಲ್ಲ ಮಸೂದೆಯಿಂದ ದಮನಿತ ಸಮುದಾಯಗಳಿಗೆ ಮಾರಕವಾಗಲಿದೆ ಎಂದು ಹೇಳಿದರು.
ಮಹಾತ್ಮಗಾಂಧಿಯವರ ‘ಕ್ವಿಟ್ ಇಂಡಿಯಾ’ ಚಳುವಳಿಯೆ ಪ್ರೇರಣೆ ನೀಡಿದ್ದು ಲೋಹಿಯಾ ಚಿಂತನೆಗಳು. ಇಂದು ಬಂಡವಾಳವಾದ ಅಪ್ರಸ್ತುತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜಾತಿ ಮತ್ತು ಲಿಂಗ ಅಸಮಾನತೆಯ ವಿರುದ್ಧ ತಮ್ಮ ಪ್ರಖರ ವಿಚಾರ ಮಂಡಿಸಿದ ಲೋಹಿಯ ಅತ್ಯಂತ ಪ್ರಸ್ತುತ ಎಂದು ಪ್ರತಿಪಾದಿಸಿದ ರವಿವರ್ಮ ಕುಮಾರ್, ೨೧ನೆ ಶತಮಾನವನ್ನು ಲೋಹಿಯಾ ಚಿಂತನೆ ಆವರಿಸಲಿದೆ ಎಂದು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಆಂಧ್ರದ ತೆಲಂಗಾಣ ಹೋರಾಟ ಸಮಿತಿ ಅಧ್ಯಕ್ಷ ಕೇಶವರಾವ್ ಜಾದವ್, ಮಧ್ಯಪ್ರದೇಶದ ಜಸ್ವೀರ್ ಸಿಂಗ್, ಮಾಜಿ ಸಚಿವ ಆಹಗೂ ಹಾಲಿ ಶಾಸಕ ಡಾ.ಎಚ್.ಸಿ.ಮಹಾದೇವಪ್ಪ, ಹಂಪಿ ವಿಶ್ವ ವಿದ್ಯಾಲಯದ ಡಾ.ರೆಹಮತ್ ತರೀಕೆರೆ, ಪ್ರೊ.ಕೆ.ಬಿ.ಸಿದ್ಧಯ್ಯ, ಸಾಹಿತಿ ನಟರಾಜ್ ಮತ್ತಿತರರು ಲೋಹಿಯಾ ಪ್ರಸ್ತುತತೆಯ ಕುರಿತು ಮಾತನಾಡಿದರು. ಆದಿಮ ಕಲಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವರದಿಯ ವಿವರಗಳು |
 |
ಕೃಪೆ : ವಾರ್ತಾಭಾರತಿ ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-21 00:00:00
|
|
| hareesh, karnataka | 2010-03-23 | | you are get man mr.ಸಾಹಿತಿ ದೇವನೂರು ಮಹಾದೇವ |
|
|
| »ಶೋಭಾ ತಂದೆ ವೈಕುಂಠಕ್ಕೆ ಯಡ್ಡಿ ಪಟಾಲಂ ಹಾಜರ್ | | »ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ' | | »ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು? | | »ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ | | »ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated) | | »ಮೈಸೂರು: ತೆರೆದ ತೊಟ್ಟಿಗೆ ಬಿದ್ದು ಆರು ವರ್ಷದ ಬಾಲಕ ಸಾವು | | »ಮಂಡ್ಯ: ನಗರಸಭೆ ಸಾವಾನ್ಯ ಸಭೆಗೆ ಅಡ್ಡಿ: ಜೆಡಿಎಸ್‌ನ ನಾಲ್ವರ ಅವಾನತು | | »ತುಮಕೂರಿನಲ್ಲಿ ಹೆಣ್ಣು ಮಕ್ಕಳ ಪತ್ತೆ: ಅನಾಥ ಮಕ್ಕಳ ಹಿಂದೆ ಭಿಕ್ಷಾಟನಾ ಜಾಲದ ಶಂಕೆ | | »ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ | | »ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ | | »ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ | | »ಬೋಧಿ ದಮ್ಮ ಬಂತೇಜಿ ಬಿಡುಗಡೆಗೆ ಆಗ್ರಹಿಸಿ ಧರಣಿ | | »ಗಣಿಗಾರಿಕೆ ಸ್ಥಗಿತ : 20,000 ಕೋಟಿ ರು ನಷ್ಟ | | »ಕೆ.ಎಸ್.ಸಿ.ಎ. ಡೆಲ್ ಶಾಲಾ ಟೂರ್ನಿ ಬಳ್ಳಾರಿ ಶಾಲಾ ತಂಡ ಚಾಂಪಿಯನ್ | | »ಮಾಜಿ ಸಚಿವರ ಮೊಂಡು ವಾದ; ಕ್ಷಮೆ ಕೇಳುವಂತಹ ತಪ್ಪು ಮಾಡಿಲ್ಲ | | »ಕಾಂಗ್ರೆಸ್‌ನಂತೆ ನಾವು ಚಿಲ್ಲರೆ ರಾಜಕಾರಣ ಮಾಡಲ್ಲ: ಡಿ.ವಿ. ಸದಾನಂದ ಗೌಡ | | »ತಮಿಳುನಾಡು ರಾಜ್ಯಪಾಲ ರೋಸಯ್ಯರ ಸಂಬಂಧಿ ಮನೋಜ್ ಹತ್ಯೆ ಪ್ರಕರಣ: ಮೂವರು ವಶಕ್ಕೆ | | » ಬನ್ನೂರಮಠ ಲೋಕಾಯುಕ್ತ ಹುದ್ದೆ ನಿರಾಕರಣೆ: ರಾಜ್ಯ ಸರ್ಕಾರ ಯಾರ ಹೆಸರು ಶಿಫಾರಸು ಮಾಡಲಿದೆಂಬ ಕುತೂಹಲ | | »ಬಳೆ ಅತ್ತಿಗುಪ್ಪೆ: ನಿಧಿ ಆಸೆಗೆ ದೇವರ ವಿಗ್ರಹ ಭಗ್ನ | | »ಕುವೆಂಪು ವಿಶ್ವವಿದ್ಯಾಲಯದ 22ನೇ ವಾರ್ಷಿಕ ಘಟಿಕೋತ್ಸವ: ಕಷ್ಟ ಕಾರ್ಪಣ್ಯ; ಆದರೂ ಬಿಡಲಿಲ್ಲ ಚಿನ್ನದ ಬೇಟೆ | | »ನರಗುಂದ, ಅಥಣಿ ಬಂದ್: ಮೈಸೂರು, ಮಂಗಳೂರಿನಲ್ಲಿ ಆಕ್ರೋಶ | | »ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ.. | | »ಭಿಕ್ಷೆ ಎತ್ತಿದ ಹಣದಿಂದ ತುಮಕೂರಿನಲ್ಲಿ ರೇಣುಕಾ ಎಲ್ಲಮ್ಮ ದೇಗುಲ ನಿರ್ಮಿಸಿದ ಮಂಗಳಮುಖಿಯರು | | »ಅಶ್ಲೀಲ ಕಲಾಪಕ್ಕೆ ಸದನ ಬಲಿ | | »ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ | | »ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ | | »ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ | | »ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ | | »ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ | | »‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ | | »ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ | | »ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ? | | »ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ | | »ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ | | »ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ | | »ಬಿಬಿಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ | | »ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್ ಚಾರಿಯಟ್' 'ಹೌಸ್ ಫುಲ್ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು | | »ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು | | »ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿಎಂ | | »ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update) | | »ಸದನದಲ್ಲಿ ಮೊಬೈಲ್ ಫೋನ್ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್ ಮಂತ್ರಿ ಸ್ಥಾನಕ್ಕೆ ರಾಜಿನಾಮೆ | | »ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು | | »ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ | | »50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ | | »ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ | | »ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ | | »ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್ | | »ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ | | »ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ | | »ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ | |