ಚಿಕ್ಕಮಗಳೂರು: ಅಜ್ಜಂಪುರ ಅತ್ಯಾಚಾರ ಪ್ರಕರಣ: ಆರೋಪಿಯ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ |
ಪ್ರಕಟಿಸಿದ ದಿನಾಂಕ : 2010-03-21
ಚಿಕ್ಕಮಗಳೂರು, ಮಾ.೨೦: ಇತ್ತೀಚೆಗೆ ತರೀಕೆರೆ ತಾಲೂಕಿನ ಅಜ್ಜಂಪುರ ಹೋಬಳಿ ಕೇಂದ್ರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ನಿರತೆಯೋರ್ವಳ ಮೇಲೆ ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿರುವ ಶಾಲಾ ಶಿಕ್ಷಕ ಸುರೇಶ್ ಎಂಬಾತನ ಬಂಧನಕ್ಕೆ ಆಗ್ರಹಿಸಿ ಸ್ಥಳೀಯ ವಿವಿಧ ಮಹಿಳಾ ಸಂಘಟನೆಯ ಸದಸ್ಯರು ಅಜ್ಜಂಪುರ ಪೊಲೀಸ್ ಠಾಣೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಅಜ್ಜಂಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಕಾರರು, ಬಳಿಕ ಅಜ್ಜಂಪುರ ಪೊಲೀಸ್ ಠಾಣೆಯ ಎದುರು ಸಮಾವೇಶಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯೆ ರಾಧಾ ಸುಂದರೇಶ್, ಮಹಿಳೆ ಯರ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರಕಾರ ಮಾತ್ರ ಆರೋಪಿಗಳ ಮೇಲೆ ಸೂಕ್ತ ಕ್ರಮಕೈಗೊಂಡು ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡ ಲು ವಿಫಲವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಧ್ರುವಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಎ.ಸಿ.ಚಂದ್ರಪ್ಪ , ಎ.ಬಿ. ರಾಜ್‌ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತ ರಿದ್ದರು.
ವರದಿಯ ವಿವರಗಳು |
 |
ಕೃಪೆ : ವಾಭಾ ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-21 00:00:00
|
|
|