ಬೆ೦ಗಳೂರು: ಹೊಸ ವಿಶ್ವವಿದ್ಯಾಲಯ ಸ್ಥಾಪನೆ ಇಲ್ಲ: ಮುಖ್ಯಮಂತ್ರಿ |
ಪ್ರಕಟಿಸಿದ ದಿನಾಂಕ : 2010-03-21
ಬೆಂಗಳೂರು, ಮಾ.೨೦: ಮುಂದಿನ ಸಾಲಿನಲ್ಲಿ ಯಾವುದೇ ಹೊಸ ವಿಶ್ವವಿದ್ಯಾಲಯವನ್ನು ಸ್ಥಾಪಿ ಸುವ ಉದ್ದೇಶ ಸರಕಾರಕ್ಕಿಲ್ಲ. ಪ್ರಸ್ತುತ ಇರುವ ವಿಶ್ವವಿದ್ಯಾಲಯಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಗಮನ ಹರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಣೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ನಡೆಯಲಿರುವ ಮಾದಿಗ ಜನಾಂಗದ ರಾಜ್ಯಮಟ್ಟದ ಚೈತನ್ಯ ಸಮಾವೇಶಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸ್ಕೃತ ವೇದ ಹಾಗೂ ಜಾನಪದ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಬೇಡಿಕೆ ಸರಕಾರದ ಮುಂದಿದೆ. ಆದರೆ, ಇನ್ನೊಂದು ವರ್ಷ ಯಾವುದೆ ಹೊಸ ವಿಶ್ವವಿದ್ಯಾಲಯ ಸ್ಥಾಪಿಸಲು ಮುಂದಾಗುವುದಿಲ್ಲ ಎಂದರು.
ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಗಳಿಗೆ ಹೆಚ್ಚಿನ ಸಂಪನ್ಮೂಲಗಳನ್ನು ಕಲ್ಪಿಸಿ, ಉಪ ನ್ಯಾಸಕರು, ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಉತ್ತಮ ಮೂಲಭೂತ ಸೌಕರ್ಯಗಳನ್ನು ನೀಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ನೈಸ್ ಚರ್ಚೆಗೆ ಪ್ರತಿಪಕ್ಷಗಳ ನಿರಾಸಕ್ತಿ: ನೈಸ್ ಯೋಜನೆಯ ಕುರಿತು ವಿಧಾನಮಂಡಲದ ಅಧಿ ವೇಶನದಲ್ಲಿ ಚರ್ಚೆ ನಡೆಸಲು ತಾನು ಸಿದ್ಧವಾಗಿದ್ದರೂ, ಪ್ರತಿಪಕ್ಷಗಳು ಚರ್ಚೆಗೆ ಆಸಕ್ತಿ ತೋರಲಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ನೈಸ್ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಚರ್ಚೆಯಾಗಬೇಕು ಎಂದು ನಾನೇ ಹಲವಾರು ಬಾರಿ ಪ್ರಸ್ತಾಪ ಮಾಡಿದ್ದೇನೆ. ಆದರೆ, ವಿಸ್ತೃತ ಚರ್ಚೆಗೆ ಜೆಡಿಎಸ್ ಸದಸ್ಯರು ಆಸಕ್ತಿ ತೋರದೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯು ೧೨೦ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದ್ದು, ಬಿಜೆಪಿ ಪಕ್ಷದವರೇ ಮೇಯರ್, ಉಪಮೇಯರ್ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಲ್ಲದೆ, ಗ್ರಾಮಪಂಚಾಯತ್ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.೫೦ರಷ್ಟು ಮೀಸಲಾತಿ ನೀಡುವುದು ಸಾಧ್ಯವಿಲ್ಲ.
ಈ ಹಿಂದಿನಂತೆ ಶೇ.೩೩ ರಷ್ಟು ಮೀಸಲಾತಿ ಮುಂದುವರಿಯಲಿದೆ ಎಂದ ಅವರು, ಭಾಗ್ಯಲಕ್ಷ್ಮಿ, ಮಡಿಲು ಯೋಜನೆಯನ್ನು ತಾಯಂದಿರಿಗೆ, ಮಕ್ಕಳಿಗೆ ಉಡುಗೊರೆ ನೀಡಬೇಕು ಎಂದು ಹೇಳಿಕೆ ನೀಡಿದ್ದು ಬಿಬಿಎಂಪಿ ಚುನಾ ವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡಲ್ಲ ಎಂದರು.
ವರದಿಯ ವಿವರಗಳು |
 |
ಕೃಪೆ : ವಾಭಾ ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-21 00:00:00
|
|
|