ಹಾಸನ: ವರದಕ್ಷಿಣೆ ಕಿರುಕುಳ: ಆರೋಪಿ ವೈದ್ಯನ ಬಂಧನ |
ಪ್ರಕಟಿಸಿದ ದಿನಾಂಕ : 2010-03-21
ಹಾಸನ, ಮಾ.೨೦: ವರದಕ್ಷಿಣೆ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಹಾಸನದ ಆಯುರ್ವೇದ ವೈದ್ಯ ಸ್ವಾಗತ್‌ನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ೧೫ ದಿನಗಳ ಕಾಲ ನ್ಯಾ ಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಡಾ.ಸ್ವಾಗತ್ ತಂದೆ ನಾರಾಯಣ್, ತಾಯಿ ಪದ್ಮ ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದನಂತರ ಅವರನ್ನೂ ಬಂಧಿಸು ವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಮಧ್ಯೆ ಸ್ವಾಗತ್ ಅಣ್ಣ, ಸುಜಿತ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಇನ್ನೊಂದೆಡೆ ಚೈತ್ರ ತನ್ನ ಪತಿಯ ಮನೆಯಲ್ಲಿರಲು ಅವಕಾಶ ಮಾಡಿಕೊಡಿ ಎಂಬ ಪೋಷಕರ ಮನವಿಯನ್ನು ಪೊಲೀಸರು ತಿರಸ್ಕರಿಸಿದ್ದಾರೆ.
ನ್ಯಾಯಾಲಯದ ಮೂಲಕ ಬಗೆಹರಿಸಿಕೊಳ್ಳುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಚೈತ್ರಾ ಸಂಬಂ ಧಿಕರು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಕುವೆಂಪು ನಗರದ ಸ್ವಾಗತ್ ಮನೆ ಮುಂದೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ವರದಿಯ ವಿವರಗಳು |
 |
ಕೃಪೆ : ವಾಭಾ ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-21
|
|
|