ಉಡುಪಿ, ಮಾ.೨೧: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಶಿ ಕೃಷ್ಣ ಶಿಕ್ಷಣ ಪ್ರತಿಷ್ಠಾನದ ಉಡುಪಿ ಶಿಕ್ಷಣ ಮಹಾ ವಿದ್ಯಾಲಯ ಅಂಬಾಗಿಲು ಹಾಗೂ ಉಡುಪಿ ತಾಲೂಕು ಕ್ಷಯ ರೋಗ ನಿಯಂತ್ರಣ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಮಾ.೨೪ರ ಬೆಳಗ್ಗೆ ೧೦:೩೦ಕ್ಕೆ ಜಿಲ್ಲಾ ಮಟ್ಟದ ವಿಶ್ವ ಕ್ಷಯ ರೋಗ ದಿನಾಚರಣೆಯನ್ನು ಉಡುಪಿ ಅಂಬಾಗಿಲಿ ನಲ್ಲಿರುವ ಉಡುಪಿ ಶಿಕ್ಷಣ ಮಹಾವಿದ್ಯಾಲಯ ಸಭಾಭವನ (ಸುಜನಾ ಕಾಂಪ್ಲೆಕ್ಸ್) ದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್‌ನ ಪ್ರಭಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ಪ್ರಾಣೇಶ್ ರಾವ್ ಉದ್ಘಾಟಿಸುವರು. ಸಭೆಯ ಅಧ್ಯಕ್ಷತೆ ಯನ್ನು ಉಡುಪಿ ಶಿಕ್ಷಣ ಮಹಾವಿದ್ಯಾಲಯದ ನಿರ್ದೇಶಕ ಎ.ಎಂ.ಹೆಬ್ಬಾರ್ ವಹಿಸುವರು.
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಚಂದ್ರ ಬಾಯರಿ ಕ್ಷಯರೋಗದ ಕುರಿತು ವಿಶೇಷ ಉಪನ್ಯಾಸ ನೀಡುವರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸರ್ಜನ್ ಡಾ. ದಯಾನಂದ ನಾಯಕ್, ಉಡುಪಿ ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ, ಉಡುಪಿ ಪ್ರಭಾರ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ವಿಶ್ವನಾಥ್ ಬಿ. ಭಾಗವಹಿಸುವರು ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.