ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ನ್ಯಾ.ಸಂತೋಷ್ ಹೆಗ್ಡೆ ಮಾಡಿದ ಸುದ್ದಿ

ಕಳೆದ ನಾಲ್ಕು ವರ್ಷಗಳಿಂದಲೂ ಲೋಕಾಯುಕ್ತ ದಾಳಿಗಳು ಸರ್ಕಾರದ ಅಧಿಕಾರಿಗಳು - ನೌಕರರ ಮೇಲೆ ನಿರಂತರವಾಗಿ ನಡೆದಿವೆ. ಎಲ್ಲ ಪ್ರಕರಣಗಳಲ್ಲೂ ವಶಪಡಿಸಿಕೊಂಡ ಹಣ, ದಾಖಲೆಗಳ ಸಮೇತ ಸರ್ಕಾರಕ್ಕೆ ವರದಿ ಹೋಗುತ್ತದೆ.

ಈ ಕೆಲಸದ ಸ್ವರೂಪವೇ ನಿಧಾನಗತಿಗೆ ಹೇಳಿ ಮಾಡಿಸಿದಂತಿದೆ. ಎಲ್ಲ ವಿವರಗಳನ್ನು ಸಿದ್ಧಪಡಿಸಿ, ಆರೋಪಗಳ ಪಟ್ಟಿಗಳನ್ನು ಸಿದ್ಧಪಡಿಸಿ, ಸರ್ಕಾರಕ್ಕೆ ದಾಖಲೆಗಳು ರವಾನೆಯಾಗುವ ವೇಳೆಗೆ ತಿಂಗಳುಗಳೇ ಕಳೆದಿರುತ್ತವೆ. ಇಷ್ಟೆಲ್ಲ ಆದ ಅನಂತರ, ಸರ್ಕಾರ ಮೊಕದ್ದಮೆಯನ್ನು ದಾಖಲು ಮಾಡಲು ಅನುಮತಿ ನೀಡುವುದರಲ್ಲಿ ಇನ್ನಷ್ಟು ವಿಳಂಬ. ಆ ವೇಳೆಗೆ ಎಲ್ಲ ಪ್ರಕರಣಗಳೂ ತಮ್ಮ ಬಿಸಿಯನ್ನು ಕಳೆದುಕೊಂಡು ಹಳಸಲಾಗಿರುತ್ತವೆ. ಇದು ಲೋಕಾಯುಕ್ತ, ಸುಪ್ರೀಮ್ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಸ್ವಂತ ಅನುಭವ ಆಧರಿತ ಅಳಲು.

ತಿಂಗಳುಗಳ ಹಿಂದೆಯೇ ಸಂತೋಷ್ ಹೆಗ್ಡೆ ಅವರು ಸರ್ಕಾರಕ್ಕೆ ಪತ್ರ ಬರೆದು, ಆಯೋಗದ ವ್ಯಾಪ್ತಿಯಲ್ಲಿ ಶಾಸಕರ ಜತೆಯಲ್ಲೇ ಚುನಾಯಿತ ಮಹಾನಗರ ಪಾಲಿಕೆಯ ಕಾರ್ಪೊರೇಟರ್‌ ಗಳನ್ನು ಸೇರಿಸಬೇಕೆಂದು ಸಲಹೆ ಮಾಡಿದ್ದರು. ಲೋಕಾಯುಕ್ತ ಕಾಯಿದೆಗೆ ಆ ಸಣ್ಣ ಮಾರ್ಪಾ ಟನ್ನು ಸರ್ಕಾರ ಇನ್ನೂ ಮಾಡಿಲ್ಲ.

ಈಗ ಮತ್ತೊಮ್ಮೆ ಲೋಕಾಯುಕ್ತರು ಹತ್ತು ಮಂದಿ ಅಧಿಕಾರಿಗಳು - ನೌಕರರ ಮನೆ ಮೇಲೆ ದಾಳಿ ನಡೆಸಿ ಹೊಸ ವರ್ಷದಲ್ಲಿ (ಉಗಾದಿಯ ಅನಂತರ) ಎಂಟು ಕೋಟಿ ರುಪಾಯಿಗಳಷ್ಟು ಶಂಕಿತ ಅಕ್ರಮ ಸಂಪತ್ತನ್ನು ಬಯಲಿಗೆ ಎಳೆದಿದ್ದಾರೆ. ಈ ಪ್ರಕರಣವೂ ದೊಡ್ಡ ರೀತಿಯಲ್ಲಿ ಸುದ್ದಿಯಾಗಿ ದ್ದರೂ, ಇದರಿಂದ ಭ್ರಷ್ಟಾಚಾರದ ಮೇಲೆ ಪರಿಣಾಮ ಬೀರುವ ಭ್ರಮೆ ಜನರಿಗೂ ಇಲ್ಲ, ಲೋಕಾ ಯುಕ್ತರಿಗೂ ಇಲ್ಲ ಎನ್ನುವಂತಾಗಿದೆ.

ಸರ್ಕಾರ ಲೋಕಾಯುಕ್ತ ಸ್ಥಾನದಿಂದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ನಿವೃತ್ತರಾಗುವ ದಿನವನ್ನೇ ಕಾಯುತ್ತಿದೆಯೇನು ಎನ್ನುವ ಉದ್ಗಾರ ಈಗ ಲೋಕಾಯುಕ್ತರಿಂದಲೇ ಹೊರಗೆ ಬಿದ್ದಿದೆ.

ಇಂತಹ ಪರಿಸ್ಥಿತಿ ಯಾವ ಸರ್ಕಾರಕ್ಕೂ ಮರ್ಯಾದೆ ತರುವಂತಹ ವಿಚಾರವಲ್ಲ. ನಿಜ, ಆಡಳಿತ ವ್ಯವಸ್ಥೆಯಲ್ಲಿ ವ್ಯಾಪಕವಾದ ಭ್ರಷ್ಟಾಚಾರ ಆಳವಾಗಿ ಬೇರು ಬಿಟ್ಟಿರುವುದಕ್ಕೆ ಈಗಿನ ಸರ್ಕಾರವೇ ಕಾರಣ ಎಂದೇನೂ ಅಲ್ಲ. ಲೋಕಾಯುಕ್ತವೇ ಆಗಲಿ ಅಥವಾ ಬೇರೆ ಯಾವ ವ್ಯವಸ್ಥೆಯೇ ಆಗಲಿ ಎಲ್ಲ ಸರ್ಕಾರಿ ಕಾರ್ಯಾಲಯಗಳಲ್ಲೂ ಬಲೆಯನ್ನಿಟ್ಟು ಮಿಕಗಳಿಗೆ ಕಾದು ಕೂಡುವಂತಹ ಪರಿಸ್ಥಿತಿ ಈಗ ಇಲ್ಲ.ಇಂತಹ ಸನ್ನಿವೇಶದಲ್ಲಿ ಭ್ರಷ್ಟಾಚಾರದ ಪ್ರಕರಣಗಳಲ್ಲಿ ಸಿಕ್ಕಿ ಬಿದ್ದವರ ವಿರುದ್ಧದ ಆರೋಪಗಳ ತನಿಖೆ ಶೀಘ್ರವಾಗಿ ಮುಗಿಯುವ ವ್ಯವಸ್ಥೆ ರೂಪಗೊಳ್ಳದಿದ್ದರೆ, ಲೋಕಾಯುಕ್ತರ ಆಯೋಗ ಇದ್ದರೂ ಒಂದೇ, ಇಲ್ಲದಿದ್ದರೂ ಒಂದೇ ಎನ್ನುವ ಸ್ಥಿತಿ ನಿರ್ಮಾಣವಾಗಬಹುದು.

ಭ್ರಷ್ಟಾಚಾರವನ್ನು ತಡೆಗಟ್ಟುವ ದಿಕ್ಕಿನಲ್ಲಿ ಯಡಿಯೂರಪ್ಪ ಸರ್ಕಾರ ತನ್ನ ೨೧ ತಿಂಗಳ ಆಳ್ವಿಕೆ ಯಲ್ಲಿ ಹೇಳಿಕೊಳ್ಳುವಂತಹ ದಿಟ್ಟ ಹೆಜ್ಜೆಯನ್ನೇನೂ ಇಟ್ಟಿಲ್ಲ. ಈಗ ಲೋಕಾಯುಕ್ತರು ಮಾಡಿರುವ ಹಲವಾರು ಸಲಹೆಗಳು, ಸಲ್ಲಿಸಿರುವ ಅನೇಕ ವರದಿಗಳು ಸರ್ಕಾರದ ಮುಂದಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಂದೆರಡು ದಿನಗಳ ಕಾಲ ಭೂಗತರಾಗಿ, ಆ ಎಲ್ಲ ಸಲಹೆಗಳ ವಿಚಾರ ದಲ್ಲಿ ತಮ್ಮ ಅಭಿಪ್ರಾಯವನ್ನು ದಾಖಲಿಸಿದರೆ, ಭ್ರಷ್ಟಾಚಾರದ ವಿರುದ್ಧದ ಹೋರಾಟ ಬಿರುಸಿನಿಂದ ಸಾಗುವುದು ಸಾಧ್ಯ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕನ್ನಡಪ್ರಭ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-22 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
»ಈ ಗುಲಾಬಿ ಇರುವುದು ನಿನಗಾಗಿ...
»ನಿಮ್ಮ ಪ್ರೇಮ ಚಿರಾಯುವಾಗಲಿ...
»ಶಂಕರ್ ಸಾವಿಗೆ ಕಾರಣಳಾದ ಆ ಮಾಯಾವಿ ಯಾರು?
»ಮನಃಶಾಸ್ತ್ರಕ್ಕೆ ವೇದಾಂತದ ಅಡಿಗಲ್ಲು...
»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri