ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣ: ಅಮಿತ್ ಶಾ ಬಂಧನ್ಕೆ ಕ್ಷಣಗಣನೆ; ನಿರೀಕ್ಷಣಾ ಜಾಮೀನು ಹಾಗೂ ಕಾಲಾವಕಾಶ ಕೋರಿದ ಶಾ: ಮನವಿ ತಿರಸ್ಕರಿಸಿದ ಸಿಬಿಐ ಕೋರ್ಟ್ | ‘ಇದು ರಾಜಕೀಯ ಹಗೆತನ - ಬಿಜೆಪಿ; ದುರದೃಷ್ಟಕರ- ಕಾಂಗ್ರೆಸ್

ಗುಜರಾತಿನ ಗೃಹ ರಾಜ್ಯ ಸಚಿವ ಅಮಿತ್ ಶಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿತು.   

ಅಹಮದಾಬಾದ್ (ಐಎಎನ್ಎಸ್): ಗುಜರಾತಿನ ಗೃಹ ರಾಜ್ಯ ಸಚಿವ ಅಮಿತ್ ಶಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿತು.

ಎರಡನೇ ದಿನವೂ ಸಿಬಿಐ ತನಿಖಾ ತಂಡದ ಎದುರು ವಿಚಾರಣೆಗೆ ಹಾಜರಾಗಲು ವಿಫಲರಾದ ಬಳಿಕ ಶಾ ಅವರು ಸಿಬಿಐ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಸೊಹ್ರಾ ಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದ ಆರೋಪಿ ಗುಜರಾತ್‌ನ ಸಹಾಯಕ ಗೃಹ ಸಚಿವ ಅಮಿತ್ ಶಾರ ನಿರೀಕ್ಷಣಾ ಜಾಮೀನು ಮನವಿಯನ್ನು ಸಿಬಿಐ ನ್ಯಾಯಾಲಯವಿಂದು ತಿರಸ್ಕರಿಸಿದೆ. ಶಾರ ವಿರುದ್ಧ ಸಿಬಿಐ, ಸೊಹ್ರಾಬುದ್ದೀನ್‌ ನನ್ನು ಅಪಹರಿಸುವ ಹಾಗೂ ಹತ್ಯೆ ನಡೆಸುವ ಕ್ರಿಮಿನಲ್ ಪಿತೂರಿ ನಡೆಸಿದ ಆರೋಪವನ್ನು ಹೊರಿಸಿದ್ದು, ಅವರನ್ನು ಯಾವುದೇ ಸಮಯ ಬಂಧಿಸುವ ಸಾಧ್ಯತೆಯಿದೆ. 

ಇದೇ ವೇಳೆ, ಸೊಹ್ರಾಬುದ್ದೀನ್ ಶೇಕ್ ನಕಲಿ ಎನ್‌ಕೌಂಟರ್ ಪ್ರಕರಣದ ಸಂಬಂಧ ವಿಚಾರಣೆಗಾಗಿ ಸಿಬಿಐಯ ಮುಂದೆ ಹಾಜರಾಗಲು ತನಗೆ ಇನ್ನಷ್ಟು ಕಾಲಾವಕಾಶ ನೀಡುವಂತೆ ಅಮಿತ್ ಶಾ ಕೋರಿದ್ದಾರೆ. ಆದರೆ ಅವರ ಮನವಿಯನ್ನು ಸಿಬಿಐ ತಿರಸ್ಕರಿಸಿದೆ. ಸಿಬಿಐ ಕಳುಹಿಸಿದ್ದ ಮೊದಲ ಸಮನ್ಸ್‌ಗೆ ಗುರುವಾರ ಶಾ ಪ್ರತಿಕ್ರಿಯೆ ನೀಡದ ಕಾರಣ, ಅವರಿಗೆ ಶುಕ್ರವಾರ ಮಧ್ಯಾಹ್ನ 1 ಗಂಟೆಯೊಳಗಾಗಿ ತನ್ನ ಮುಂದೆ ಹಾಜರಾಗುವಂತೆ ಸಿಬಿಐ ಎರಡನೆ ಬಾರಿ ಸಮನ್ಸ್ ಕಳುಹಿಸಿತ್ತು.

ಗಾಂಧಿನಗರದ ಸಿಬಿಐ ಕಚೇರಿಗೆ ಹೋಗಿದ್ದ ಶಾರ ವಕೀಲ ಮಿತೀಶ್ ಅಮೀನ್, ಸಚಿವರಿಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶ ನೀಡುವಂತೆ ಹಾಗೂ ಅವರಿಗೆ ಪ್ರಶ್ನಾವಳಿಯೊಂದನ್ನು ಕಳುಹಿಸಿ ಉತ್ತರ ಪಡೆಯುವ ಆಯ್ಕೆಯನ್ನು ಪರಿಗಣಿಸುವಂತೆ ಸಿಬಿಐಗೆ ತಾನು ಮನವಿ ಸಲ್ಲಿಸಿದ್ದೆನೆಂದು ತಿಳಿಸಿದರು. ಆದರೆ, ಸಿಬಿಐ ಈ ಮನವಿಯನ್ನು ತಳ್ಳಿ ಹಾಕಿತೆಂದು ಅವರು ಹೇಳಿದರು. ಅವರು ಸಚಿವರಿಗೆ ಪ್ರಶ್ನಾವಳಿ ಕಳುಹಿಸುವ ವಿಚಾರ ಯೋಚಿಸಲೇ ಇಲ್ಲ. ತಾನೀಗ ಈ ಬಗ್ಗೆ ಶಾರೊಂದಿಗೆ ಚರ್ಚಿಸಲಿದ್ದೇನೆಂದು ಅಮೀನ್ ತಿಳಿಸಿದರು.

ಈ ಮಧ್ಯೆ ಸಿಬಿಐ ಮಾಜಿ ಪೊಲೀಸ್ ಉಪ ಕಮೀಷನರ್ ಅಭಯ್ ಚುಡಾಸಮ ವಿರುದ್ಧು 2005ರ  ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಿದೆ. 

ದೋಷಾರೋಪ ಪಟ್ಟಿಯಲ್ಲಿ 18 ಜನರ ಹೆಸರಿದ್ದು, ಅವರ ಪೈಕಿ 15 ಜನ ಈಗಾಗಲೇ ಸೆರೆಮನೆಯಲ್ಲಿದ್ದಾರೆ. ಮೂವರನ್ನು ಇನ್ನೂ ಬಂಧಿಸಬೇಕಾಗಿದೆ. ಈ ಮೂವರಲ್ಲಿ ಅಮಿತ್ ಶಾ ಅವರ ಹೆಸರು ಕೂಡಾ ಇದೆ ಎಂದು ಹೇಳಲಾಗುತ್ತಿದೆ.

ಕಾಲಾವಕಾಶ ಕೋರಿದ ಶಾ, ಮನವಿ ತಿರಸ್ಕರಿಸಿದ ಸಿಬಿಐ

ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಕಾಲಾವಕಾಶ ನೀಡುವಂತೆ ನರೇಂದ್ರ ಮೋದಿ ಅವರ ನಿಕಟವರ್ತಿ, ಗುಜರಾತಿನ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಸಿಬಿಐ ಮುಂದೆ ಕೋರಿಕೆ ಮಂಡಿಸಿ ದ್ದಾರೆ. ಆದರೆ ಸಿಬಿಐ ಅವರ ಕೋರಿಕೆಯನ್ನು ತಳ್ಳಿ ಹಾಕಿದೆ.   

ಗಾಂಧಿನಗರ (ಪಿಟಿಐ): ಸೊಹ್ರಾಬುದ್ದೀನ್ ಶೇಕ್ ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಕಾಲಾವಕಾಶ ನೀಡುವಂತೆ ನರೇಂದ್ರ ಮೋದಿ ಅವರ ನಿಕಟವರ್ತಿ, ಗುಜರಾತಿನ  ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಸಿಬಿಐ ಮುಂದೆ ಕೋರಿಕೆ ಮಂಡಿಸಿದ್ದಾರೆ. ಆದರೆ ಸಿಬಿಐ ಅವರ ಕೋರಿಕೆಯನ್ನು ತಳ್ಳಿ ಹಾಕಿದೆ.

ಶಾ ಅವರಿಗೆ ಸಿಬಿಐ ಮುಂದೆ ಹಾಜರಾಗಲು ಶುಕ್ರವಾರ ಮಧ್ಯಾಹ್ನ ಒಂದು ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು. ಮೊದಲ ಸಮನ್ಸ್ ಪ್ರಕಾರ ಗುರುವಾರ ಸಿಬಿಐ ಮುಂದೆ ಹಾಜರಾಗಲು ಶಾ ಅವರು ವಿಫಲರಾದ ಬಳಿಕ ಎರಡನೇ ಸಮನ್ಸ್ ಕಳುಹಿಸಿ ಶುಕ್ರವಾರ ಮಧ್ಯಾಹ್ನದವರೆಗೆ ಕಾಲಾವಕಾಶ ನೀಡಲಾಗಿತ್ತು.

ಸಿಬಿಐ ಕಚೇರಿಗೆ ಭೇಟಿ ನೀಡಿದ್ದ ಶಾ ಅವರ ವಕೀಲ ಮಿತಿಶ್ ಅಮಿನ್ ಅವರು 'ಹೆಚ್ಚಿನ ಕಾಲಾವಕಾಶ ನೀಡುವಂತೆ ಮತ್ತು ಉತ್ತರಿಸಲು ಅನುಕೂಲವಾಗುವಂತೆ ಸಚಿವರಿಗೆ ಪ್ರಶ್ನಾವಳಿಯನ್ನು ಕೊಡುವಂತೆ ಸಿಬಿಐಗೆ ಮನವಿ ಮಾಡಲಾಯಿತು' ಎಂದು ಹೇಳಿದರು.

ಆದರೆ ಪ್ರಶ್ನಾವಳಿ ನೀಡಬೇಕೆಂಬ ಮನವಿಯನ್ನು ಸಿಬಿಐ ತಳ್ಳಿ ಹಾಕಿತು. 'ನಮಗೆ ಪ್ರಶ್ನಾವಳಿ ನೀಡುವ ಅಗತ್ಯ ಇದೆ ಎಂದು ಅವರಿಗೆ ಅನ್ನಿಸಿದಂತಿಲ್ಲ' ಎಂದು ಅಮಿನ್ ಸಿಬಿಐ ಕಚೇರಿಯಿಂದ ಹೊರಬರುತ್ತಾ ಪತ್ರಕರ್ತರಿಗೆ ತಿಳಿಸಿದರು.

'ಈಗ ನಾನು ಈ ವಿಷಯವನ್ನು ಅವರೊಂದಿಗೆ (ಶಾ) ಚರ್ಚಿಸುವೆ' ಎಂದು ಅಮಿನ್ ಹೇಳಿದರು.

ಈಗ ನಿಮ್ಮ ಮುಂದೆ ಕಾನೂನುಬದ್ಧ ಆಯ್ಕೆಗಳು ಏನಿವೆ ಎಂಬ ಪ್ರಶ್ನೆಗೆ ಹಲವಾರು ಆಯ್ಕೆಗಳಿವೆ. ನಿರೀಕ್ಷಣಾ ಜಾಮೀನು ಪಡೆಯುವುದು ಅವುಗಳಲ್ಲಿ ಒಂದು. ಏನಿದ್ದರೂ ಮೊದಲು ನಾನು ನನ್ನ ಕಕ್ಷಿದಾರರ ಜೊತೆಗೆ ಚರ್ಚಿಸಬೇಕು' ಎಂದು ಅವರು ನುಡಿದರು

‘ಇದು ರಾಜಕೀಯ ಹಗೆತನ’  
 
ಗುಜರಾತ್ ಗೃಹ ಸಚಿವ ಅಮಿತ್ ಷಾ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿರುವುದು ಕೇಂದ್ರ ಸರ್ಕಾರದ ರಾಜಕೀಯ ಹಗೆತನದ ಕ್ರಮವೇ ಹೊರತು ಬೇರೇನೂ ಅಲ್ಲ ಎಂದು ಬಿಜೆಪಿ ಟೀಕಿಸಿದೆ.
   

ನವದೆಹಲಿ: ಸೊಹ್ರಾಬುದ್ದೀನ್ ಶೇಖ್ ಶೂಟೌಟ್ ಪ್ರಕರಣದಲ್ಲಿ ಗುಜರಾತ್ ಗೃಹ ಸಚಿವ ಅಮಿತ್ ಷಾ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿರುವುದು ಕೇಂದ್ರ ಸರ್ಕಾರದ ರಾಜಕೀಯ ಹಗೆತನದ ಕ್ರಮವೇ ಹೊರತು ಬೇರೇನೂ ಅಲ್ಲ ಎಂದು ಬಿಜೆಪಿ ಟೀಕಿಸಿದೆ.

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಪೂರ್ವಭಾವಿಯಾಗಿ ವಿರೋಧ ಪಕ್ಷಗಳಿಗೆ ಪ್ರಧಾನಿ ಏರ್ಪಡಿಸಿದ್ದ ಔತಣಕೂಟವನ್ನು ಬಹಿಷ್ಕರಿಸಿದ ಬಳಿಕ, ಲೋಕಸಭೆಯಲ್ಲಿನ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹಾಗೂ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಅರುಣ್ ಜೇಟ್ಲಿ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಆಡಳಿತಾರೂಢ ಪಕ್ಷವು ಅನುಕೂಲಕ್ಕೆ ತಕ್ಕ ಅಸ್ತ್ರದಂತೆ ಸಿಬಿಐ ಅನ್ನು ಬಳಸಿಕೊಳ್ಳುತ್ತಿದೆ. ಇದೊಂದು ನಾಚಿಕೆಗೇಡಿನ ದುರ್ಬಳಕೆ. ಈ ವಿಷಯ ವನ್ನು ಪಕ್ಷದ ಹಿರಿಯ ನಾಯಕ ಅಡ್ವಾಣಿ ಅವರು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ ಎಂದು ಜೇಟ್ಲಿ ದೂರಿದರು.

 
ಪರಿಸ್ಥಿತಿ ಅತ್ಯಂತ ಕಹಿಯಾಗಿ ರುವುದರಿಂದ ಪ್ರಧಾನಿ ಅವರೊಂದಿಗೆ  ಔತಣ ಕೂಟದಲ್ಲಿ ಪಾಲ್ಗೊಳ್ಳಲು ನಮಗೆ ಮನಸ್ಸಾಗುತ್ತಿಲ್ಲ ಎಂದು ಸುಷ್ಮಾ ಸಮರ್ಥಿಸಿಕೊಂಡರು.

ದುರದೃಷ್ಟಕರ- ಕಾಂಗ್ರೆಸ್  
 
‘ಸಂಸತ್ತಿನ ಪ್ರತಿ ಅಧಿವೇಶನದ ಸಂದರ್ಭದಲ್ಲೂ ಪ್ರಧಾನಿ ಔತಣಕೂಟ ಏರ್ಪಡಿಸುತ್ತಾರೆ. ಇದನ್ನು ಬಹಿಷ್ಕರಿಸುವ ಮೂಲಕ ಬಿಜೆಪಿ ತನ್ನ ನಿಜವಾದ ನಡವಳಿಕೆಯನ್ನು ಪ್ರದರ್ಶಿಸಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಶುಕ್ರವಾರ ಸುದ್ದಿಗಾರರೊಂದಿಗೆ ದೂರಿದ್ದಾರೆ.   

ನವದೆಹಲಿ (ಪಿಟಿಐ): ‘ಪ್ರಧಾನಿ ಅವರು ಏರ್ಪಡಿಸಿದ್ದ ಔತಣಕೂಟವನ್ನು ಬಹಿಷ್ಕರಿಸಿದ ಬಿಜೆಪಿ ನಿಲುವು ಜವಾಬ್ದಾರಿಯುತ ರಾಜಕೀಯ ಪಕ್ಷವೊಂದರ ಅತ್ಯಂತ ದುರದೃಷ್ಟಕರ ಮತ್ತು ಅನುಚಿತ ವರ್ತನೆ’ ಎಂದು ಕಾಂಗ್ರೆಸ್ ಬಣ್ಣಿಸಿದೆ.

‘ಸಂಸತ್ತಿನ ಪ್ರತಿ ಅಧಿವೇಶನದ ಸಂದರ್ಭದಲ್ಲೂ ಪ್ರಧಾನಿ ಔತಣಕೂಟ ಏರ್ಪಡಿಸುತ್ತಾರೆ. ಇದನ್ನು ಬಹಿಷ್ಕರಿಸುವ ಮೂಲಕ ಬಿಜೆಪಿ ತನ್ನ ನಿಜವಾದ ನಡವಳಿಕೆಯನ್ನು ಪ್ರದರ್ಶಿಸಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಶುಕ್ರವಾರ ಸುದ್ದಿಗಾರರೊಂದಿಗೆ ದೂರಿದ್ದಾರೆ.

ಕೇಂದ್ರ ಸರ್ಕಾರ ಸಿಬಿಐನ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ವಿರೋಧ ಪಕ್ಷದ ಆರೋಪವನ್ನು ಅವರು ತಳ್ಳಿಹಾಕಿದರು. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ ಎಂಬ ವಿಷಯ ಇಡೀ ಪ್ರಪಂಚಕ್ಕೇ ತಿಳಿದಿದೆ. ಕಾನೂನು ಅವರನ್ನು ಸುತ್ತುವರಿಯುತ್ತಿದೆ, ಅದಕ್ಕೇ ಅವರು ಈ ರೀತಿ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮಿತ್ ಷಾ ಸಿಬಿಐ ಎದುರು ಹಾಜರಾಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಕಾನೂನು ತನ್ನದೇ ಕ್ರಮ ಕೈಗೊಳ್ಳುತ್ತದೆ ಎಂದ ಪ್ರಸಾದ್, ಸೂಕ್ತ ರೀತಿಯಲ್ಲಿ ತನಿಖೆ ನಡೆದರೆ ಬಹಳಷ್ಟು ರಹಸ್ಯ ವಿಷಯಗಳು ಹೊರಬೀಳಲಿವೆ ಎಂದಿದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-07-24 00:00:00

Tell a Friend
ಇತರ ಸಂಭಂದಪಟ್ಟ ವರದಿಗಳು
»ಕಾಲಾವಕಾಶ ಕೋರಿದ ಶಾ, ಮನವಿ ತಿರಸ್ಕರಿಸಿದ ಸಿಬಿಐ
»
»ಸಿಬಿಐ ಸಮನ್ಸ್: ಪ್ರಧಾನಿ ಔತಣ ಆಹ್ವಾನ ನಿರಾಕರಿಸಿದ ಬಿಜೆಪಿ
»ಸೊಹ್ರಬುದ್ದೀನ್ ಶೇಕ್ ನಕಲಿ ಎನ್‌ಕೌಂಟರ್; ಮೋದಿ ಸರಕಾರದ ಗೃಹಸಚಿವ ಅಮಿತ್ ಶಾಹ್ ರವರಿಗೆ ಸಿಬಿಐ ಸಮನ್ಸ್

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಭಾರತ]

»ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರಗಿಸಲು ಅನುಮತಿ ಕೋರಿ ಸಿವಿಸಿಯಿಂದ ಸರಕಾರಕ್ಕೆ ಮನವಿ
»ವಾರಣಾಸಿ: ಕುಸಿದ ನಿತಿನ್ ಗಡ್ಕರಿ ವೇದಿಕೆ
»ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣ: ಆಂಧ್ರ ಪೊಲೀಸರಿಗೆ ಸಮನ್ಸ್ ಜಾರಿಗೊಳಿಸಿದ ಸಿಬಿಐ
»ಆಂಧ್ರ ಅಬಕಾರಿ ಸಚಿವ ಮದ್ಯ ಲಾಬಿಯ ಕೈಗೊಂಬೆ: ಎಸಿಬಿ ವರದಿ ಆರೋಪ
»ಶೀಘ್ರವೇ ಅಡ್ಡ ಹಾಯ್ಕೆ ಕ್ಷಿಪಣಿಯ ಪುನಃ ಪರೀಕ್ಷೆ
»‘ಲಕ್ಷ-1’ ಪರೀಕ್ಷೆ ಯಶಸ್ವಿ
»ದಯಾನಿಧಿ ಮಾರನ್ ವಿರುದ್ಧ ಇನ್ನೊಂದು ಪ್ರಕರಣ ದಾಖಲು
»ಸಬ್ಸಿಡಿ ಭೂತ ನಿದ್ದೆಗೆಡಿಸುತ್ತಿದೆ: ಪ್ರಣವ್
»ಗೋಧ್ರಾ ಗಲಭೆ: ಧಾರ್ಮಿಕ ಕಟ್ಟಡಗಳ ಹಾನಿ ಬಗ್ಗೆ ನಿರ್ಲಕ್ಷ್ಯ- ಮೋದಿ ಸರ್ಕಾರಕ್ಕೆ ತರಾಟೆ
» ಜೀವವೈವಿಧ್ಯ ತಾಣ: `ಪಶ್ಚಿಮ ಘಟ್ಟದಲ್ಲಿ ಬೇಡ ಗಣಿಗಾರಿಕೆ’
»ರೈಲ್ವೆ ಟಿಕೆಟ್ ಕಾದಿರಿಸುವಿಕೆ ಅವಧಿ 120 ದಿನಗಳವರೆಗೆ ವಿಸ್ತರಣೆ
»ಚುನಾವಣೋತ್ತರ ಸಮೀಕ್ಷೆ, ಅಭಿಪ್ರಾಯ ಸಂಗ್ರಹ ಸಮೀಕ್ಷೆ ನಿಷೇಧಕ್ಕೆ ಚುನಾವಣಾ ಆಯೋಗದ ಸುತ್ತೋಲೆ
»ಚಿಕಿತ್ಸೆ ವೆಚ್ಚ ಭರಿಸಲಾಗದ ತಾಯಿಯಿಂದ ಮಗನಿಗೆ ದಯಾ ಮರಣ ಕೋರಿ ಅರ್ಜಿ
»ಪತ್ರಕರ್ತೆಯ ಮೇಲೆ ದಾಳಿ: ಚುನಾವಣಾಧಿಕಾರಿ, ಪೊಲೀಸರ ವಿರುದ್ಧ ಕ್ರಮಕ್ಕೆ ಶಿಫಾರಸು
»ರಾಬರ್ಟ್ ವಾದ್ರಾರನ್ನು ತಡೆದ ಚುನಾವಣಾಧಿಕಾರಿಯ ವರ್ಗಾವಣೆ
»ಪ್ರಾಥಮಿಕ ಶಾಲೆಗಳ ಕಾರ್ಯ ನಿರ್ವಹಿಸುತ್ತಿರುವ ಅಝಂಗಡದ ಮಸೀದಿಗಳು
»ಆಂಧ್ರ ಪ್ರದೇಶ: ಸಚಿವರ ವಿರುದ್ಧ ಒಂದಾದ ಐಎಎಸ್ ಅಧಿಕಾರಿಗಳು
»ಅಂತರ್ಜಾಲಾಧಾರಿತ ಔಷಧಿ ವ್ಯಾಪಾರ ತಡೆಗೆ ಸಮಿತಿ
»ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ: ಆರೋಪಿ ಘೋಷ್ ಜಾಮೀನು ಬಿಡುಗಡೆ
»ಮಾ. 16ಕ್ಕೆ ಕೇಂದ್ರ ಬಜೆಟ್
»ಕಚ್ಚಾ ತೈಲ ಆಮದು: ಭಾಗಶಃ ಪಾವತಿ ವ್ಯವಸ್ಥೆಗೆ ಇರಾನ್ ಸಮ್ಮತಿ
»2ಜಿ: ಸೋನಿಯಾ ತಂಗಿಯರಿಗೆ ಸಿಕ್ಕಿದ್ದು 18000ಕೋಟಿ - ಸ್ವಾಮಿ ಆರೋಪ
»ದುಡಿಯದ' ಅಧಿಕಾರಿಗಳಿಗೆ 15 ವರ್ಷದಲ್ಲೇ ನಿವೃತ್ತಿ: ಕೇಂದ್ರದ ಹೊಸ ನಿಯಮಾವಳಿ
»ಕಪ್ಪುಹಣ; ಕೈ, ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುತ್ತಿವೆ: ಮಾಯಾವತಿ
»ಆಕ್ಷೇಪಾರ್ಹ ವಿಷಯ ಅಳಿಸಲು ಜಾಲತಾಣಗಳಿಗೆ ಇನ್ನೂ 15 ದಿನ ಕಾಲಾವಕಾಶ
»ಬಜೆಟ್‌ಗೆ ಗಣಿ ಬಂಪರ್: 49 ಕಂಪೆನಿಗಳ ಗುತ್ತಿಗೆ ರದ್ದು. ಗಣಿ ಧಣಿಗಳತ್ತ ಸಿಇಸಿ ಕೆಂಗಣ್ಣು
»ಅಕ್ರಮ ಗಣಿಗಾರಿಕೆ: ಜಾರ್ಖಂಡ್ ಸರಕಾರಕ್ಕೆ ಎನ್‌ಎಚ್‌ಆರ್‌ಸಿ ನೋಟಿಸ್
»3000 ಬೆಲ್ಜಿಯಂ ಶೆಫರ್ಡ್ಸ್‌ಗಳಿಗೆ ತರಬೇತಿಗೆ ಸಿಆರ್‌ಪಿಎಫ್ ನಿರ್ಧಾರ
»ಪೊಲೀಸ್ ಅಧಿಕಾರಿ ಸಹಿತ ಇಬ್ಬರು ಹಿಮಪಾತದಲ್ಲಿ ಸಮಾಧಿ
»ಮಧ್ಯಪ್ರದೇಶದ ಬಿಜೆಪಿ ಸರಕಾರದಿಂದ ರೂ. 250 ಕೋಟಿ ಗೋ ಹಗರಣ: ಕಾಂಗ್ರೆಸ್
»ಜೀವಂತವಾಗಿ ಬಂದ ‘ಸಾವನ್ನಪ್ಪಿದ’ ಮಹಿಳೆ!
»ಹರೇನ್ ಪಾಂಡ್ಯ ಹತ್ಯೆ ಪ್ರಕರಣ: ಮರು ತನಿಖೆಗೆ ಗುಜರಾತ್ ಹೈಕೋರ್ಟ್ ನಕಾರ
»ಮೊಬೈಲ್ ಸಂಪರ್ಕ ಮಾರ್ಗಸೂಚಿ ಟ್ರಾಯ್‌ಗೆ ಕಡೆಯ ಅವಕಾಶ
»ರೂ. 36,900 ಕೋಟಿ ಇಂಧನ ಸಬ್ಸಿಡಿ ನೀಡಲು ಮುಂಚೂಣಿ ತೈಲ ಸಂಸ್ಥೆಗಳಿಗೆ ಕೇಂದ್ರದ ಮನವಿ
»2ಜಿ ಪರವಾನಿಗೆ ರದ್ದತಿ ತೀರ್ಪು ಸರಕಾರಿ ಮಟ್ಟದಲ್ಲಿ ಚರ್ಚಿಸಲು ನಾರ್ವೆಯ ಇಚ್ಛೆ
»ಕಾನೂನು ಬಾಹಿರ ಔಷಧಿ ಪ್ರಯೋಗ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
»ಪ್ರಧಾನಿ ಪದದ ಹೆಬ್ಬಯಕೆಯಿಲ್ಲ: ರಾಹುಲ್
»ಅಂತರಿಕ್ಷ್- ದೇವಾಸ್ ಲೋಪ: ವರದಿಯಲ್ಲಿ ವೈಯಕ್ತಿಕವೇನೂ ಇಲ್ಲ- ರಾಧಾಕೃಷ್ಣನ್
»ಕೋರ್ಟ್ ಗೆ ಬಗ್ಗಿದ ಗೂಗಲ್, ಫೇಸ್‌ಬುಕ್‌: ಆಕ್ಷೇಪಾರ್ಹ ಮಾಹಿತಿಗೆ ಕತ್ತರಿ
»ಬಿಜೆಪಿ ರಾಜಕೀಯ ದುರುದ್ದೇಶಗಳಿಗಾಗಿ ಧರ್ಮವನ್ನು ಬಳಸುತ್ತಿದೆ: ಫಾರುಕ್
»ಅಕ್ರಮ ಗಣಿ: ಸುಪ್ರೀಂಗೆ ಸಿ‌ಇಸಿ ಅಂತಿಮ ವರದಿ
»ಸೋನಿಯಾ ಅಳಿಯ ರಾಬರ್ಟ್ ವಾದ್ರಾ ಸಕ್ರಿಯ ಪಾಲಿಟಿಕ್ಸ್‌ಗೆ ಎಂಟ್ರಿ?
»ಅಕ್ರಮ ಗಣಿಗಾರಿಕೆ: ಸಕ್ರಮ ಗಣಿಗೆ ಪರವಾನಗಿ
»ಇಸ್ರೋ ವರದಿ ಏಕಪಕ್ಷೀಯ: ಮಾಧವನ್ ನಾಯರ್
»ರಜಪೂತರು-ದಲಿತರ ಸಂಘರ್ಷ: ದಲಿತ ಯುವಕನ ಭೀಕರ ಹತ್ಯೆ; ಎಂಟು ಮಂದಿಯ ಬಂಧನ
»ಅಪಘಾತ: ಉದ್ರಿಕ್ತರಿಂದ ಪೊಲೀಸರ ಮೇಲೆ ದಾಳಿ; ಬಸ್‌ಗಳಿಗೆ ಬೆಂಕಿ
»ಗ್ರಾಮಸ್ಥರ ಮೇಲೆ ಮುಖ್ಯೋಪಾಧ್ಯಾಯರ ಮಕ್ಕಳಿಂದ ಬಾಂಬ್ ಎಸೆತ: ಆರೋಪ
»ಅಯೋಧ್ಯೆಯಲ್ಲಿ ಅಡ್ವಾಣಿಯ ರಾಮ ಮಂದಿರದ ಬೇಡಿಕೆಗೆ ಜನರ ನಿರಾಸಕ್ತಿ!
»500 ಮಿಲಿಯನ್ ಭಾರತೀಯರಿಗೆ ಹೊಸ ಮನೆಗಳ ಆವಶ್ಯಕತೆಯಿದೆ: ಫಿಕ್ಕಿ
»ಅಂಡಮಾನ್ ಆದಿವಾಸಿಗಳ ಮತ್ತೆರಡು ವೀಡಿಯೊ ಪತ್ತೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri