ಬಾಗಲಕೋಟೆ: ಆಲಮಟ್ಟಿ ಜಲಾಶಯದ 14 ಗೇಟ್ಗಳ ಮೂಲಕ 91000 ಕ್ಯೂಸೆಕ್ಸ್ ನೀರು ಹೊರಕ್ಕೆ : ವಿದ್ಯುತ್ ಉತ್ಪಾದನೆಯೂ ಆರಂಭ |
ಪ್ರಕಟಿಸಿದ ದಿನಾಂಕ : 2010-07-29
ಬಾಗಲಕೋಟೆ, ಜು. 28: ಕಳೆದ ಮೂರ್ನಾಲ್ಕು ದಿನಗಳಿಂದ ಬೆಳಗಾವಿ ಜಿಲ್ಲೆಯ ಕೃಷ್ಣಾ ಜಲಾನ ಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಕೃಷ್ಣಾ ನದಿ ಮೂಲಕ ಆಲಮಟ್ಟಿ ಜಲಾಶಯಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ.
ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ನೀರನ್ನು ಹೊರ ಬಿಡುವ ಕಾರ್ಯ ಇಂದಿನಿಂದ ಆರಂಭವಾಗಿದೆ. ಬುಧವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ಜಲಾಶಯದ 14 ಗೇಟ್ಗಳನ್ನು ತೆರೆದು 43 ಸಾವಿರ ಕ್ಯೂಸೆಕ್ಸ ನೀರನ್ನು ಹೊರಬಿಡಲು ಪ್ರಾರಂಭಿ ಸಲಾಗಿದೆ.
ಇದರ ಜೊತೆಗೆ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸಹ ಆರಂಭಿಸಲಾಗಿದ್ದು ಇದಕ್ಕಾಗಿ 48 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತಿದ್ದು, ಒಟ್ಟಾರೆ ಇಂದು ಜಲಾಶಯದಿಂದ 91 ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ.
ಜಲಾಶಯದ ಒಳ ಹರಿವು 1,50,000 ಕ್ಯೂಸೆಕ್ಸ್ ಇದ್ದು, ಜಲಾಶಯದಲ್ಲಿ 518.6 ಮೀಟರ್ನಷ್ಟು ನೀರು (105 ಟಿ.ಎಂ.ಸಿ) ಸಂಗ್ರಹವಾಗಿದೆ.
ಈಗಲೂ ಸಹ ಬೆಳಗಾವಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿದ್ದು ಜಲಾಶಯಕ್ಕೆ ಹರಿದು ಬರುತ್ತಿ ರುವ ನೀರಿನ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ವಿದ್ಯುತ್ ಉತ್ಪಾದನೆ ಆರಂಭ : ಜಲಾಶಯಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಎಲ್ಲ ಆರೂ ವಿದ್ಯುತ್ ಘಟಕಗಳಿಂದ ಉತ್ಪಾದನೆ ಕಾರ್ಯವನ್ನು ಇಂದಿನಿಂದಲೇ ಆರಂಭಿಸಲಾಗಿದೆ.
ವಿದ್ಯುತ್ ಉತ್ಪಾದನೆಗಾಗಿ 6 ಘಟಕಗಳಿಗೆ ಸೇರಿ 48 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಲಾಗು ತ್ತಿದೆ. ಕಳೆದ ಮಾರ್ಚ್ನಿಂದ ಸ್ಥಗಿತಗೊಂಡಿದ್ದ ವಿದ್ಯುತ್ ಉತ್ಪಾದನಾ ಘಟಕಗಳು ಮೂದಲ ಬಾರಿಗೆ ಬುಧವಾರ ಕಾರಾಯರಂಭ ಮಾಡಿದವು.
ಎಲ್ಲ 6 ಘಟಕಗಳಿಂದ ನಿತ್ಯ 290 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು ಇದ ರಿಂದ ವಿಜಾಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿದ್ಯುತ್ ಸಮಸ್ಯೆ ಸ್ವಲ್ಪ ಮಟ್ಟಿಗೆ ನಿವಾರಣೆ ಯಾಗಲಿದೆ. ಇಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ವಿಜಾಪೂರ ಜಿಲ್ಲೆಯ ಬಸವನಬಾಗೇವಾಡಿ ಹಾಗೂ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಸ್ವೀಕೃತಿ ಗ್ರಿಡ್ಗಳಿಗೆ ವಿತರಿಸಲಾಗುತ್ತದೆ.
ನಗರದಲ್ಲೂ ಹಿನ್ನೀರು: ಆಲಮಟ್ಟಿ ಜಲಾಶಯಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರು ತ್ತಿರುವ ಹಿನ್ನೆಲೆಯಲ್ಲಿ ಹಿನ್ನೀರು ವ್ಯಾಪಿಸಿದ್ದು ಬಾಗಲಕೋಟೆ ನಗರದತ್ತ ಹಿನ್ನೀರು ವ್ಯಾಪಿಸಿದೆ.
ಸಿಮೆಂಟ ಕ್ವಾರಿಯ ಸೇತುವೆ ಮೇಲೆ ಇನ್ನೇನು ನೀರು ಬರಲಿದ್ದು ನಾಳೆಯ ಹೊತ್ತಿಗೆ ಇಲ್ಲಿ ರಸ್ತೆ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ. ಕಾರಿಹಳ್ಳದತ್ತ ಸಹ ಹಿನ್ನೀರು ವ್ಯಾಪಿಸುತ್ತಿದೆ.
ಜಿಲ್ಲೆಯಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಜಡಿ ಮಳೆ ಪ್ರಾರಂಭವಾಗಿದ್ದು ಕೆಲವು ಬಾರಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುತ್ತಿದೆ. ಜನಜೀವನ ಅಸ್ತವ್ಯಸ್ತವಾಗಿದೆ.
ವರದಿಯ ವಿವರಗಳು |
 |
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-07-29 00:00:00
|
|
|