ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಏಕವಚನ ಪ್ರಯೋಗ; ವೈಷಮ್ಯಕ್ಕೆ ತಿರುಗುತ್ತಿರುವ ಕಾಂಗ್ರೆಸ್ ರೆಡ್ಡಿ ಬಳಗದ ಸಮರ; ಅಕ್ರಮ ಸಾಬೀತಾದರೆ ಜನರೆದುರೇ ನೇಣು!- ಜನಾರ್ದನ ರೆಡ್ಡಿ

ವೈಷಮ್ಯಕ್ಕೆ ತಿರುಗುತ್ತಿರುವ ಕಾಂಗ್ರೆಸ್ ರೆಡ್ಡಿ ಬಳಗದ ಸಮರ

ಬೆಂಗಳೂರು, ಜು. 19: ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಪಕ್ಷ ಆರಂಭಿಸಿರುವ ಬಳ್ಳಾರಿ ಪಾದಯಾತ್ರೆ 5ನೇ ದಿನವಾದ ಇಂದಿಗೆ ನೂರು ಕಿ.ಮೀ. ಕ್ರಮಿಸಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯನ್ನೂ ಲೆಕ್ಕಿಸದೆ ಕಾಂಗ್ರೆಸ್ ನಾಯಕರು ಪಾದ ಬೆಳೆಸಿದ್ದಾರೆ.

ಆಗಸ್ಟ್ 9 ರಂದು ಬಳ್ಳಾರಿ ತಲುಪಲು ಇನ್ನೂ 11ದಿನಗಳ ಪಾದಯಾತ್ರೆಯಲ್ಲಿ 110 ಕಿ.ಮೀ. ಸಾಗಬೇಕಿದೆ. ಸಾಕಷ್ಟು ಬೆವರು ಸುರಿಸಬೇಕಿದೆ, ಚಪ್ಪಲಿ, ಷೂ ಸವೆಸಬೇಕಿದೆ. ಮಳೆ ಸುರಿದರೆ ಮಳೆಯಲ್ಲೂ ತೊಯ್ಯಬೇಕಿದೆ. ತಣ್ಣನೆಯ ವಾತಾವರಣದಲ್ಲೂ ಪಾದಯಾತ್ರೆ ದಿನೇ ದಿನೇ ಕಾವೇರತೊಡಗಿದೆ.ಜತೆಗೆ ಹೊಸ ಹೊಸ ರಂಗು ಪಡೆದುಕೊಂಡು ಪಾದಯಾತ್ರೆ ಜನ ಜಾತ್ರೆ ರೂಪ ಪಡೆದುಕೊಳ್ಳುತ್ತಿದೆ. ಯಾತ್ರೆಯಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಬಳ್ಳಾರಿಯತ್ತ ಕಾಂಗ್ರೆಸ್ಸಿಗರು ಇಟ್ಟ ದಿಟ್ಟ ಹೆಜ್ಜೆ ಭರದಿಂದ ಸಾಗಿದೆ.

ಈ ಮಧ್ಯೆ ಕಾಂಗ್ರೆಸ್ ಪಾದಯಾತ್ರೆಗೆ ಪರ್ಯಾಯವಾಗಿ ಬಳ್ಳಾರಿ ಗಣಿಧಣಿ ಸಚಿವರಾದ ಕರುಣಾಕರ ರೆಡ್ಡಿ , ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರು ಬುಧವಾರದಿಂದ ಬಳ್ಳಾರಿ ಜಿಲ್ಲೆಗೆ ಸೀಮಿತವಾಗಿ ಆರಂಭಿಸಿರುವ ಸ್ವಾಭಿಮಾನ ಸಮಾವೇಶ ಕಾಂಗ್ರೆಸ್­ಗೆ ತಿರುಗೇಟು ನೀಡುವುದೇ ಆಗಿದೆ. ಆದರೆ, ಪಾದಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷವಿರಲಿ ಹಾಗೂ ರೆಡ್ಡಿ ಬಳಗದ ಸ್ವಾಭಿಮಾನಿ ಸಮಾವೇಶವಿರಲಿ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಬದಲಿಗೆ ವೈಯಕ್ತಿಕ ದ್ವೇಷಕ್ಕೆ ತಿರುಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ .

ಕಾಂಗ್ರೆಸ್ ಪಾದಯಾತ್ರೆ ವೈಖರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಳ್ಳಾರಿ ಸಚಿವರು ನೀಡಿರುವ ಹೇಳಿಕೆಗಳು, ಅದಕ್ಕೆ ಪ್ರತಿಯಾಗಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯ , ಮೋಟಮ್ಮ , ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮೇಲ್ಮನೆ ಪ್ರತಿ ಪಕ್ಷದ ಮಾಜಿ ನಾಯಕ ವಿ.ಎಸ್. ಉಗ್ರಪ್ಪ ಅವರು ನೀಡುತ್ತಿರುವ ಹೇಳಿಕೆಗಳು ಈಗ ಕಾಂಗ್ರೆಸ್ ಹಾಗೂ ರೆಡ್ಡಿ ಬಳಗದ ನಡುವೆ ವೈಯಕ್ತಿಕ ದ್ವೇಷವನ್ನು ಹುಟ್ಟು ಹಾಕಿದೆ.

ಕಾಂಗ್ರೆಸ್ ಹಾಗೂ ರೆಡ್ಡಿ ಬಳಗದ ನಡುವೆ ವಿಧಾನಮಂಡಲದ ಒಳಗೆ ಆರಂಭವಾಗಿರುವ ಜಟಾಪಟಿ ಈಗ ಸದನದ ಹೊರಗಡೆಯೂ ಮುಂದುವರಿದಿದೆ. ಆರೋಗ್ಯ ಸಚಿವ ಶ್ರೀರಾಮುಲು ಅವರು ತಮ್ಮ ಕೇಶಮುಂಡನಕ್ಕೆ ನೀಡಿರುವ ಕಾರಣ ಕಾಂಗ್ರೆಸ್ಸಿಗರನ್ನು ಕೆರಳಿಸಿದೆ, ಪ್ರತಿಯಾಗಿ ಕಾಂಗ್ರೆಸ್ ನಾಯಕರು ಪಾಪದ ಕೊಡ ತುಂಬಿರುವುದಕ್ಕೆ ತಲೆ ಬೋಳಿಸಿಕೊಂಡಿ ದ್ದಾರೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡುವ ಮೂಲಕ ವಾಕ್ಸಮರ ಮುಂದುವರಿಸಿದ್ದಾರೆ.

ತಮ್ಮನ್ನು ಟಾರ್ಗೆಟ್ ಮಾಡಿಯೇ ಕಾಂಗ್ರೆಸ್ಸಿಗರು ಪಾದಯಾತ್ರೆ ಆರಂಭಿಸಿದ್ದಾರೆ ಎಂಬುದನ್ನು ಅರಿತಿರುವ ರೆಡ್ಡಿ ಬಳಗ ಹತಾಶ ರಾದವರಂತೆ, ತಮ್ಮ ಕೋಟೆಗೆ ನುಗ್ಗುತ್ತಿದ್ದಾರೆ ಎಂಭ ಭಯ ಹಾಗೂ ಅಭದ್ರತೆ ಕಾಡತೊಡಗಿ ಅವರ ಮಾತಿನ ಧಾಟಿ ಬದ ಲಾಗುತ್ತಿದೆ. ವೈಯಕ್ತಿಕ ಮಟ್ಟಕ್ಕೆ ಅದರಲ್ಲೂ ತೀರ ಕೆಳಮಟ್ಟದ ಭಾಷೆಯಲ್ಲಿ ಏಕ ವಚನಗಳನ್ನು ಪ್ರಯೋಗಿಸುವ ಮೂಲಕ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಕೆರಳಿಸಿದ್ದಾರೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಎಲ್ಲಾ ಲಕ್ಷಣಗಳಿವೆ.

ಇನ್ನು 11 ದಿನದ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹಾಗೂ ರೆಡ್ಡಿ ಬಳಗದ ವಿರುದ್ಧ ಕಾಂಗ್ರೆಸ್ ನಾಯಕರು ಮತ್ತಷ್ಟು ವಾಗಾœಳಿ ನಡೆಸಲಿದ್ದಾರೆ. ಜತೆಗೆ ಹತ್ತು ಹಲವು ವಿಷಯಗಳ ಬಗ್ಗೆ ವಾದ- ಪ್ರತಿವಾದ ನಡೆಯುತ್ತಲೇ ಇರುತ್ತವೆ. ಇದು ಆಡಳಿತ ಮತ್ತು ವಿಪಕ್ಷದ ನಡುವೆ ಮಾತಿನ ಕಿಡಿಗಳು ನಡೆದು ಬೆಂಕಿ ಕಾಣಿಸಿಕೊಳ್ಳುವ ಲಕ್ಷಣಗಳಿವೆ. ಕಾಂಗ್ರೆಸ್ ಪಾದಯಾತ್ರೆ ಬಳ್ಳಾರಿ ತಲುಪುವ ಮುನ್ನವೇ ಜಿಲ್ಲೆಯಲ್ಲಿ ರೆಡ್ಡಿ ಬಳಗ ನಡೆಸಲಿರುವ ಸ್ವಾಭಿಮಾನ ಸಮಾವೇಶಗಳು ಕಾಂಗ್ರೆಸ್ ವಿರುದ್ಧ ಜನರನ್ನು ಎತ್ತಿಕಟ್ಟುವ ಕೆಲಸ ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ. ಇದು ಕಾಂಗ್ರೆಸ್ ಸಮಾವೇಶದ ವೇಳೆಗೆ ಕಾನೂನು ಸುವ್ಯವಸ್ಥೆಯ ಸಮಸ್ಯೆ ಸೃಷ್ಟಿ ಆಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ .

ಅಕ್ರಮ ಸಾಬೀತಾದರೆ ಜನರೆದುರೇ ನೇಣು!

ಬಳ್ಳಾರಿ, ಜು. 29 : ಕೇಶಮುಂಡನ ಮಾಡಿಕೊಂಡು ಕಪ್ಪು ಬಟ್ಟೆ ಧರಿಸಿ ವರಮಹಾಲಕ್ಷ್ಮಿ ಪೂಜಾದಿನದವರೆಗೆ ಕಾಳುಕಡಿ ಗಳನ್ನಷ್ಟೇ ತಿನ್ನುವ ವ್ರತ ತೊಟ್ಟಿರುವ ಶ್ರೀರಾಮುಲು ಅವರ ಸ್ವಾಭಿಮಾನಿ ಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಶ್ರೀರಾಮುಲು ನೇತೃತ್ವದಲ್ಲಿ ನಡೆಯುತ್ತಿರುವ ಸ್ವಾಭಿಮಾನಿ ಯಾತ್ರೆಯ ಎರಡನೇ ದಿನ ಚೆಳ್ಳಗುರ್ಕಿ ಗ್ರಾಮದ ಆರಾಧ್ಯದೈವ ಶ್ರೀ ಎರ್ರಿತಾತನವರ ಜೀವಸಮಾಧಿ ಕ್ಷೇತ್ರದ ಮುಂಭಾಗದಲ್ಲಿ ಅವರು ಎರಡು ಸಾವಿರ ಅಭಿಮಾನಿಗಳೆದಿರು ಶ್ರೀರಾಮುಲು, ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

ನಮ್ಮನ್ನು ವಿರೋಧಿಸುತ್ತಿರುವ ಕಾಂಗ್ರೆಸ್ಸಿಗರು ತಾಕತ್ತಿದ್ದರೆ ಅಕ್ರಮ ಗಣಿಗಾರಿಕೆಯ ದಾಖಲಾತಿಗಳನ್ನು ಹೊತ್ತು ಬಳ್ಳಾರಿಗೆ ಬರಲಿ. ಅಕ್ರಮ ಗಣಿಗಾರಿಕೆ ನಡೆಸಿದ್ದು ಸಾಬೀತಾದಲ್ಲಿ ಜನರೆದುರಿಗೇ ನೇಣು ಹಾಕಿಕೊಳ್ಳುತ್ತೇನೆ ಎಂದು ಗುಡುಗಿರುವ ಜಿ. ಜನಾರ್ದನ ರೆಡ್ಡಿ ಸಿದ್ದರಾಮಯ್ಯನವರನ್ನು ಏಕವಚನದಲ್ಲಿ ಜರಿದಿದರು.

ಏಕವಚನ ಪ್ರಯೋಗ :

 "ನಮ್ಮ ವಿರುದ್ಧ ಸಿದ್ಧರಾಮಯ್ಯ, ದೇವೇಗೌಡರಂಥಹ ನೂರಾರು ಜನರು ಬಂದರೂ ಕೂಡ ನಮ್ಮನ್ನು ಏನೇನೂಮಾಡಿಕೊಳ್ಳಲು ಸಾಧ್ಯವಿಲ್ಲ. ಸಿದ್ಧರಾಮಯ್ಯಾ ನಿನ್ನ 60 ವರ್ಷ ವಯಸ್ಸಿನಲ್ಲಿ 30 ವರ್ಷ ರಾಜಕೀಯ ಅನುಭವ ಹೊಂದಿದ್ದೀಯ. ಇನ್ನು ನೀನೇ ತೋಳ್ತಟ್ಟಿದಲ್ಲಿ 27 ವರ್ಷದ ಸುರೇಶ್‌ಬಾಬು ಉದ್ವೇಗಕ್ಕೆ ಒಳಗಾಗುವುದರಲ್ಲಿ ತಪ್ಪಿಲ್ಲ" ಎಂದು ಜನಾರ್ದನ ರೆಡ್ಡಿ ಸಿದ್ದರಾಮಯ್ಯ ನವರನ್ನು ಮೂದಲಿಸಿದರು.

ಜಿಲ್ಲೆಯಲ್ಲಿ ರೆಡ್ಡಿ ಸಹೋದರರು ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗನ್ನು ನೋಡಿ ಕಾಂಗ್ರೆಸ್ ನಾಯಕರೇ ನೇಣು ಹಾಕಿಕೊಳ್ಳ ಬೇಕು. ಜಿಲ್ಲೆಯ ಜನತೆಯ ಸ್ವಾಭಿಮಾನಕ್ಕೆ ಧಕ್ಕೆ ತರುವ ರೀತಿಯಲ್ಲಿ ಕೆಲ ಪದಗಳನ್ನು ಬಳಕೆ ಮಾಡಿದ್ದಾರೆ. ಬಳ್ಳಾರಿ ಜನರನ್ನು ಅವಮಾನಿಸಿದ್ದಾರೆ. ಕಾಂಗ್ರೆಸ್‌ನ ಈ ವರ್ತನೆಯಿಂದ ಬೇಸತ್ತ ಶ್ರೀರಾಮುಲು ಕಠಿಣವ್ರತವನ್ನು ಪಾಲಿಸುತ್ತಿದ್ದಾರೆ. ನಾವು ಜನಪರರು, ಅಪರಂಜಿಗಳು ಎಂದು ಹೇಳಿದರು.

ಸಿಬಿಐ ಕಾಂಗ್ರೆಸ್ ಏಜೆಂಟ್ :

ಆರೋಗ್ಯ ಸಚಿವ ಶ್ರೀರಾಮುಲು ಮಾತನಾಡಿ, ನಮ್ಮನ್ನು ಹಾಳುಮಾಡಲಿಕ್ಕಾಗಿಯೇ ಕಾಂಗ್ರೆಸ್ ಸಾಕಷ್ಟು ಹುನ್ನಾರ ನಡೆಸುತ್ತಿದೆ. ನಮ್ಮನ್ನು ದಿವಾಳಿ ಎಬ್ಬಿಸಲಿಕ್ಕಾಗಿ `ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್' ತನಿಖೆ ಆಗಬೇಕು ಎಂದು ಕಾಂಗ್ರೆಸ್ಸಿಗರು ಪಟ್ಟುಹಿಡಿದಿದ್ದಾರೆ. ಸಿಬಿಐ ಎಂಬ ತನಿಖಾ ಸಂಸ್ಥೆ ಕೇಂದ್ರದಲ್ಲಿ ಅಧಿಕಾರಕ್ಕೆ ಇರುವ ಪಕ್ಷಗಳ ಏಜೆಂಟರಂತೆ ಕಾರ್ಯನಿರ್ವಹಿಸುತ್ತದೆ. ಈ ದೇಶದ ಜನರು ಬ್ರಿಟೀಷರ ವಿರುದ್ಧ ಹೋರಾಡಿದಂತೆ ನಾನು ಕಾಂಗ್ರೆಸ್ ವಿರುದ್ಧ ಹೋರಾಡುತ್ತೇನೆ ಎಂದರು.

ರಾಜ್ಯಪಾಲ ಹಂಸರಾಜ್ ಭಾರಧ್ವಾಜ್ ಅವರ ಮೇಲೆ ಮತ್ತೊಮ್ಮೆ ಟೀಕಾಪ್ರಹಾರ ಮುಂದುವರೆಸಿದ ಬಿ. ಶ್ರೀರಾಮುಲು, ರಾಜ್ಯಪಾಲರು ಕಾಂಗ್ರೆಸ್‌ನ ಏಜೆಂಟರು. ಅವರು ತಮ್ಮ ಕಾನೂನಿನ ವ್ಯಾಪ್ತಿ - ಮಿತಿಯನ್ನು ಮೀರಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಹೋರಾಟ ಇಲ್ಲಿಗೇ ಮುಗಿಯುವುದಿಲ್ಲ. ಇದು ಆರಂಭ ಅಷ್ಟೇ ಎಂದು ಹೇಳಿದರು. ಶುಕ್ರವಾರ ಸಿರುಗುಪ್ಪ ಮತ್ತು ತೆಕ್ಕಲಕೋಟೆಯಲ್ಲಿ ಬಹಿರಂಗ ಸಭೆ ನಡೆಯಲಿವೆ.

ಅಭಿಮಾನಿಗಳೂ ಬೋಳು ಬೋಳು:

ಕಾಂಗ್ರೆಸ್ ಪಾದಯಾತ್ರೆಗೆ ಪ್ರತಿಯಾಗಿ ಜಿಲ್ಲೆಯಾದ್ಯಂತ ಪಾದಯಾತ್ರೆ ಮಾಡುತ್ತಿರುವ ರೆಡ್ಡಿ ಸಹೋದರರು ಜನರ ಬೆಂಬಲ ಪಡೆಯಲು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ. ನಾಯಕ ನಿಷ್ಠೆ ತೋರಿರುವ ಶ್ರೀರಾಮುಲು ಹಿಂಬಾಲಕರು ಕೂಡ ಶ್ರೀರಾಮುಲು ವಂತೆ ಕೇಶಮುಂಡನ ಮಾಡಿಕೊಂಡು, ಕಪ್ಪು ಬಟ್ಟೆ ಧರಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಶ್ರೀರಾಮುಲುಗೆ ಹೋದಲ್ಲೆಲ್ಲ ಹೆಂಗಳೆಯರು ಆರತಿ ಎತ್ತಿ ಸ್ವಾಗತಿಸಿದರು.

ಕಬ್ಬಿಣ ಅದಿರು ರಫ್ತಿಗೆ ನಿಷೇಧ :

ಕರ್ನಾಟಕದ ಬಂದರುಗಳಿಂದ ಕಬ್ಬಿಣ ಅದಿರು ರಫ್ತು ಮಾಡುವುದನ್ನು ನಿಷೇಧಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ. ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟಲು ಇರುವುದು ಇದೊಂದೇ ಮಾರ್ಗ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ಕೈಗೊಂಡಿರುವ ಈ ದಿಟ್ಟ ಕ್ರಮ ರೆಡ್ಡಿ ಸಹೋದರರಿಗೆ ಇರುಸು ಮುರುಸು ಮಾಡುವುದರಲ್ಲಿ ಸಂಶಯವಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಮೇಲ್ನೋಟಕ್ಕೆ ಪಾದಯಾತ್ರೆಯ ಪ್ರಹಸನ ಕಾಂಗ್ರೆಸ್ ಮತ್ತು ರೆಡ್ಡಿ ಸಹೋದರರ ನಡುವಿನ ಕದನ ಎಂಬಂತೆ ಕಂಡರೂ, ರೆಡ್ಡಿ ಸಹೋದರರು ಮತ್ತು ಯಡಿಯೂರಪ್ಪನವರ ನಡುವಿನ ವೈಮನಸ್ಸು ಬೂದಿ ಮುಚ್ಚಿದ ಕೆಂಡದಂತೆ ಉರಿಯುತ್ತಲೇ ಇದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ| ದಟ್ಸ್ ಕನ್ನಡ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-07-30 00:00:00

Tell a Friend
ಇತರ ಸಂಭಂದಪಟ್ಟ ವರದಿಗಳು
»ಗಣಿ ಧೂಳಿನಲ್ಲಿ ಸಚಿವ ರಾಮುಲು....
»ಕಾಂಗ್ರೆಸ್ ಹೇಳಿದಂತೆ ಕುಣಿಯಲು ಆಗಲ್ಲ: ಯಡಿಯೂರಪ್ಪ
»ಅದಿರು ಸಾಗಾಣಿಕೆ ನಿಷೇಧ: ಹೊರಬಿದ್ದ ಸರ್ಕಾರಿ ಆದೇಶ
»ಬೆ೦ಗಳೂರು: ಕಾ೦ಗ್ರೆಸ್ ನ ಪಾದಯಾತ್ರೆಯ ಪ್ರತಿಯಾತ್ರೆಯಾಗಿ ಇಡೀ ರಾಜ್ಯ ಸುತ್ತಲು ಬಿ‌ಎಸ್‌ವೈ ಚಿಂತನೆ
»ತುಮಕೂರು: ರಾಜಿ ಪ್ರಶ್ನೆಯೇ ಇಲ್ಲ: ಸಿದ್ದು : ಸಿಬಿ‌ಐ ತನಿಖೆಯಾದ್ರೆ ಮುಖ್ಯಮಂತ್ರಿ ಜೈಲಿಗೆ ಗ್ಯಾರಂಟಿ : ರೆಡ್ಡೀಗಳ ಉದ್ದಟತನಕ್ಕೆ ಇದು ಸರಿಯಾದ ಉತ್ತರ
»ಬಳ್ಳಾರಿಗೆ ಆದ ಅವಮಾನ-ತಲೆ ಬೋಳಿಸಿಕೊಂಡ ಶ್ರೀರಾಮುಲು!: ಕಾಲಿಗೆ ಚಪ್ಪಲಿ ಹಾಕಲಾರೆ, ಕಪ್ಪು ಬಟ್ಟೆ ಧರಿಸುವೆ...: ತಾಯಿಯ ಆಶೀರ್ವಾದ ಇರುವವರೆಗೆ ರಾಜಿನಾಮೆ ಕೊಡಲಾರೆ
»ಬಳ್ಳಾರಿ: ಅಸಮಾಧಾನ: ಸಚಿವ ಸ್ಥಾನಕ್ಕೆ ಶ್ರೀರಾಮುಲು ರಾಜೀನಾಮೆ?
»ಪಾದಯಾತ್ರೆ: ಡಾಬಸ್‌ಪೇಟೆಯ ಅರಳಿಕಟ್ಟೆಯಲ್ಲಿ ಪ೦ಚಾಯ್ತಿ : ಜನಾದೇಶಕ್ಕೆ ಬನ್ನಿ: ಯಡಿಯೂರಪ್ಪಗೆ ಸಿದ್ದು ಪಂಥಾಹ್ವಾನ
»‘ನಾಡ ರಕ್ಷಣಾ ನಡಿಗೆ’: 3ನೇ ದಿನವೂ ಕುಗ್ಗದ ಉತ್ಸಾಹ; ಜನಬೆಂಬಲದ ಹಿಗ್ಗಿನಲ್ಲಿ ಮರೆಯಾದ ‘ನೋವು’
»ಕ್ರಮ ಸಲ್ಲ: ರೆಡ್ಡಿ ಸಹೋದರು ಹೈಕೋರ್ಟ್‌ಗೆ - ಚುನಾವಣಾ ಆಯೋಗಕ್ಕೆ ಆದೇಶಿಸಲು ಮನವಿ
»ಅಕ್ರಮ ಗಣಿಗಾರಿಕೆ: ಕಬ್ಬಿಣ ಅದಿರು ರಪ್ತು ಪರ್ಮಿಟ್­ಗೂ ಕತ್ತರಿ; ಬುಧವಾರ ಮಹತ್ವದ ಆದೇಶ
»ಬೇಗೂರು: ಪಾದಯಾತ್ರೆಗೆ ಅಭೂತಪೂರ್ವ ಜನ ಬೆ೦ಬಲ: ಎರಡೇ ದಿನಗಳಲ್ಲಿ ಸರ್ಕಾರದ ಬಗ್ಗೆ ತೀವ್ರ ಅಸಮಧಾನ: ಕೇಳುಗರಿಗೆ ರ೦ಜನೆಯನ್ನು ನೀಡೀದ ಸಿದ್ದು ಅವರ ವೀರಗಾಸೆ, ಸುಬ್ಬಾ ಭಟ್ಟರ ಹಾಸ್ಯ
»ನೆಲಮ೦ಗಲ: ಅದಿರು ಕಣ್ಮರೆ: ಸಿ‌ಎಂ ಕೈ: ಬಿ‌ಎಸ್‌ವೈ, ರೆಡ್ಡಿಗಳೇ ನೇಣುಗಂಬ ಏರಲು ಸಿದ್ಧರಾಗಿ: ಸಿದ್ದು
»ಕಾಂಗ್ರೆಸ್ ಪಾದಯಾತ್ರೆ ವಿಫಲ: ಮೊದ್ಲು ಕಬ್ಬಿಣ ಅದಿರು ರಫ್ತು ನಿಷೇಧಿಸ್ಲಿ: ಕ್ರಿಮಿನಲ್ ಹಿನ್ನೆಲೆಯ ರೆಡ್ಡಿ ಬ್ರದರ್ಸ್ ಅಗತ್ಯವೇ?: - ಎಚ್‌ಡಿಕೆ
»ಟಾರ್ಗೆಟ್ ಬಳ್ಳಾರಿ ಪಾದಯಾತ್ರೆ ಎರಡನೇ ದಿನಕ್ಕೆ: ಬಿಸಿಲ ಝಳ-ಉತ್ಸಾಹಿ ಕಾರ್ಯಕರ್ತರು, ಬಸವಳಿದ ನೇತಾರರು; ಸಿದ್ದರಾಮಯ್ಯಗೆ ಕಾಲುನೋವು, ಡಿಕೆಶಿಗೆ ಜ್ವರ : ಇವರ ಕಚ್ಚಾಟದಲ್ಲಿ ಹುತಾತ್ಮರನ್ನು ಮರೆತು ಬಿಟ್ಟರೇ?
»ಅಕ್ರಮ ಗಣಿಗಾರಿಕೆ: ಕಾಂಗ್ರೆಸ್ ನಾಡರಕ್ಷಣೆ ನಡಿಗೆಗೆ ಚಾಲನೆ; ಕುಸಿದು ಬಿದ್ದ ಕಾರ್ಯಕರ್ತ ಸಾವು | ಕಾಂಗ್ರೆಸ್ ಪಕ್ಷದೊಳಗಿನ ಪೈಪೋಟಿ ಯಾತ್ರೆ: ಯಡ್ಡಿ; ಕಾಂಗ್ರೆಸಿಗರ ಅಂತಿಮ ಯಾತ್ರೆ: ರೆಡ್ಡಿ
»ಮದ್ದೂರು: ಕಾಂಗ್ರೆಸ್ ಪಾದಯಾತ್ರೆಗೆ ಪೊಲೀಸ್ ರಕ್ಷಣೆ; ವಿರೋಧ ಪಕ್ಷಗಳ ಗದ್ದಲದ ನಡುವೆ ಅಭಿವೃದ್ಧಿ ಕಾರ್ಯ: ಪೊಲೀಸ್ ಇಲಾಖೆಗೆ ಹೆಚ್ಚುವರಿಯಾಗಿ 253 ಕೋಟಿ ಬಿಡುಗಡೆ: ವಿ.ಎಸ್.ಆಚಾರ್ಯ
»ಬೆ೦ಗಳೂರು: ರಾಜ್ಯದಲ್ಲಿ ಯಾತ್ರಾಯುಗ: ಈಗ ಕಾಂಗ್ರೆಸ್ ನಡಿಗೆ ; ಬೆನ್ನಲ್ಲೇ ಕಮಲ ಮೇಳ : ಜತೆಗೆ ಜೆಡಿ‌ಎಸ್ ಆಂದೋಲನ : ಕೈ ‘ನಾಡ ರಕ್ಷಣಾ ನಡಿಗೆ’ ಇಂದು ಆರಂಭ
»ಪಾದಯಾತ್ರೆಗೆ ಸಿಎಂ ನಕಾರ; ರೆಡ್ಡಿ ಬ್ರದರ್ಸ್ ಗರಂ
»

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಕನ್ನಡ ಭಾಷೆ, ಸಾಹಿತ್ಯ ಪರಂಪರೆಗೆ ಐತಿಹಾಸಿಕ ಹಿನ್ನೆಲೆಗಳಿವೆ: ಮೂಡಿಗೆರೆ: 3ನೆ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಸಮ್ಮೇಳನಾಧ್ಯಕ್ಷ ಡಿ.ಬಿ.ಸುಬ್ಬೇಗೌಡ
»ಶಂಕಿತ ಮಂಗನ ಕಾಯಿಲೆ ಪ್ರಕರಣ ಪತ್ತೆ: ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ವ್ಯಕ್ತಿ ದಾಖಲು; ಡಿಎಚ್‌ಓ-ಜಿ.ಪಂ. ಸದಸ್ಯರ ಭೇಟಿ
»ಗುಜರಿ ಅಂಗಡಿಯಲ್ಲಿ ಗಿಲೆಟಿನ್ ಸ್ಫೋಟ: ಮಾಲಕನ ಸಾವು
»ಸರಕಾರಕ್ಕೆ ಆರು ತಿಂಗಳ ಆನಂದ: ಭ್ರಷ್ಟಾಚಾರ ಮುಕ್ತ ಆಡಳಿತವೇ ನನ್ನ ಗುರಿ: ಸದಾನಂದ ಗೌಡ
»ಎತ್ತಿನಹೊಳೆ ಯೋಜನೆಯಿಂದ ಪರಮಶಿವಯ್ಯ ವರದಿಗೆ ಹಿನ್ನಡೆಯಾದರೆ ಹೋರಾಟ: ಸಂಸದ ಬಸವರಾಜು ಎಚ್ಚರಿಕೆ
»ಹಾಸ್ಯನಟನ ಅಂತಿಮಯಾತ್ರೆಯುದ್ದಕ್ಕೂ ಕಣ್ಣೀರು: ಹುಟ್ಟೂರು ಕೊಡಿಗೆಹಳ್ಳಿಯಲ್ಲಿ ಕರಿಬಸವಯ್ಯ ಅಂತ್ಯ ಕ್ರಿಯೆ
»ಸ್ಥಾನ ನೀಡಿ, ಇಲ್ಲವೇ ಪರಿಣಾಮ ಎದುರಿಸಿ: ಹೈಕಮಾಂಡ್‌ಗೆ ಬಿಎಸ್‌ವೈ ಎಚ್ಚರಿಕೆ
»ಬಿಎಸ್‌ವೈ ಕುಟುಂಬವನ್ನು ಮತ್ತೆ ಬೆಂಬತ್ತಿದ ಸಮನ್ಸ್: ಲೋಕಾಯುಕ್ತ ಕೋರ್ಟ್ ಆದೇಶ, ಮಾ.3ಕ್ಕೆ ಮುಂದಿನ ವಿಚಾರಣೆ
»ಶಿಕ್ಷಕರಿಗೆ ಅನುದಾನ ನೀಡದಿದ್ದರೆ ಸತ್ಯಾಗ್ರಹ: ಬಸವರಾಜ್
»ನಾನು ಘೋಷಣೆ ಮಾಡುವ ಮುಖ್ಯಮಂತ್ರಿಯಲ್ಲ: ಸದಾನಂದಗೌಡ
»ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
»`ಐಷಾರಾಮಿ ಜೀವನ: ನಾಗರಿಕತೆ ನಾಶ’: ಸುರೇಶ್ ಹೆಬ್ಳೀಕರ್
»ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ: ಮಾಹಿತಿ ಆಹ್ವಾನ
»ಒಳಮೀಸಲಾತಿ ವಿರುದ್ಧ ಒಗ್ಗಟ್ಟು:ಬಿಜೆಪಿ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ(Updated)
»ಮಾಡು ಇಲ್ಲವೇ ಮಡಿ ಸ್ಥಿತಿ: ಯಡಿಯೂರಪ್ಪ ದಿಢೀರ್ ದೆಹಲಿಗೆ ದೌಡು
»ಜೈಲು ಗೋಡೆ ಎರಡು ಕೋಟಿ ನುಂಗಿತ್ತಾ..!
»ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
»ಮಡೆಸ್ನಾನ ನಿಷೇಧಕ್ಕೆ ಯತ್ನ: ಡಾ.ಆಚಾರ್ಯ
»ಹೈಕಮಾಂಡ್ ತುರ್ತು ಬುಲಾವ್: ದಿಲ್ಲಿಗೆ ದೌಡಾಯಿಸಿದ ಬಿಎಸ್‌ವೈ
»ಶಾಲಾ ಮಕ್ಕಳ ಮೇಲೆ ಲಾಠಿ ಪ್ರಹಾರ: ಬಜ್ಪೆ ಇನ್ಸ್‌ಪೆಕ್ಟರ್ ಮೇಲೆ ಕ್ರಮದ ಭರವಸೆ
»ಹಿಂದುಳಿದವರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಸಾವಿರ ಕೋಟಿ ರೂ. ಮೀಸಲು: ಸಿಎಂ
»ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ: ತಾಯಿ-ಮಗು ಮೃತ್ಯು
»ವಿರೋಧದ ಮಧ್ಯೆ ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ: ಮಹಿಳಾ ವಿವಿಗೆ ಎಲ್ಲ ಜಿಲ್ಲೆಗಳನ್ನು ಸೇರಿಸಿ: ಮಾತಿನ ಚಕಮಕಿ
»ಭದ್ರಾ, ಕುದುರೆಮುಖ ಆದಿವಾಸಿಗಳನ್ನು ಒಕ್ಕಲೆಬ್ಬಿಸುವುದಿಲ್ಲ: ಸಿಎಂ
»ಕೆಜಿಎಫ್ ತಾಲೂಕು ಕೇಂದ್ರಕ್ಕೆ ಆಗ್ರಹ: ಬಂದ್ ಯಶಸ್ವಿ
»ಕಳಪೆ ಬಿತ್ತನೆ ಬೀಜ ಪೂರೈಕೆ: ಕೈಗೆ ಬಂದ ತುತ್ತು ಬಾಯಿಗಿಲ್ಲ
»ರಾಜ್ಯದ ಆರ್ಥಿಕ ಸ್ಥಿತಿಯ ‘ಶ್ವೇತಪತ್ರ’ಕ್ಕೆ ಡಾ.ಜಿ.ಪರಮೇಶ್ವರ್ ಆಗ್ರಹ
»ಸುಬ್ರಹ್ಮಣ್ಯ ಸ್ವಾಮಿಗೆ ಡಾಕ್ಟರೇಟ್
»ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
»`ಕೆನೆಪದರ' ಮಿತಿ ರೂ 3.5 ಲಕ್ಷಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ತೀರ್ಮಾನ
»ಹಂಪಿ:ನಿಧಿ ಶೋಧ, ವಿಗ್ರಹಕ್ಕೆ ಕುತ್ತು
»ಡಿನೋಟಿಫಿಕೇಶನ್: ಮತ್ತೆ ಬಂಧನದ ಭೀತಿಯತ್ತ ಬಿ‌ಎಸ್‌ವೈ
»ಬೆಂಗಳೂರಿನಲ್ಲಿ ಸೀಟ್ ಬೆಲ್ಟ್ ನಿಯಮ ಜಾರಿ ...
»ಮೂಡಿಗೆರೆ ತಾಲೂಕು ಮೂರನೆ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ: ಆಡಳಿತ ಭಾಷೆಯಾಗಿ ಕನ್ನಡ ಜಾರಿಗೊಳಿಸುವಲ್ಲಿ ಸರಕಾರ ವಿಫಲ; ಸಮ್ಮೇಳನಾಧ್ಯಕ್ಷ ಡಿ.ಬಿ.ಸುಬ್ಬೇಗೌಡ
»ಅಕ್ರಮ ನಿವೇಶನ ಆರೋಪ: ಉ.ಲೋಕಾಯುಕ್ತರ ರಾಜೀನಾಮೆಗೆ ನಿವೃತ್ತ ನ್ಯಾ. ಸಲ್ಡಾನಾ ಆಗ್ರಹ
»ಗಣಿ ವರದಿ ಚರ್ಚೆಗೆ ಪಟ್ಟು: ಕೊನೆಗೂ ಮಣಿದ ಸ್ಪೀಕರ್
» ‘ಸ್ಪೀಕರ್’ ಗದ್ದಲ: ಪಕ್ಷೇತರರಿಂದ ಸಭಾತ್ಯಾಗ; ಮೇಲ್ಮನೆಯಲ್ಲಿ ಎರಡನೆ ದಿನವೂ ಪ್ರತಿಧ್ವನಿಸಿದ ‘ಲೋಕ’ ಗದ್ದಲ
»ಸಿದ್ದಗಂಗಾ ಶ್ರೀಗಳು ಸಾಯಿಬಾಬಾರ ಪ್ರತಿರೂಪ: ಬಿಎಸ್‌ವೈ
»ಆರೆಸ್ಸೆಸ್ ಕಪಿಮುಷ್ಟಿಯಲ್ಲಿ ರಾಜ್ಯ ಸರಕಾರ; ಆರೆಸ್ಸೆಸ್ ದೇಶದ್ರೋಹಿ ಸಂಘಟನೆ: ಸಂಸದ ವಿಶ್ವನಾಥ್ ಆತಂಕ
»ಕಳೆದ ಬಜೆಟ್ ಯೋಜನೆಗಳು ಇನ್ನೂ ಅನುಷ್ಠಾನಗೊಂಡಿಲ್ಲ: ಕುವಾರಸ್ವಾಮಿ
»ದಲಿತ ಶಾಸಕರಿಗೆ ರಕ್ಷಣೆ ಇಲ್ಲ: ನಮ್ಮ ಬೇಡಿಕೆಯನ್ನು ಕಡೆಗಣಿಸಲಾಗುತ್ತಿದೆ: ಗೂಳಿಹಟ್ಟಿ
»ಕೆಜಿಎಫ್: ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ
»ಬಿಳಿಗಿರಿರಂಗನಬೆಟ್ಟದಲ್ಲಿ ಹೆಚ್ಚುವರಿ ಯಾತ್ರಿ ನಿವಾಸಕ್ಕೆ 77ಲಕ್ಷ ರೂ. ಮಂಜೂರು: ಜಿ.ಎನ್.ನಂಜುಂಡಸ್ವಾಮಿ
»ಹಿಂದೂ ವಿರೋಧಿ ಮತಾಂತರವಾದಿಗಳನ್ನು ಸದೆಬಡೆಯಿರಿ: ಪೇಜಾವರ ಶ್ರೀ ಕರೆ
»‘ನಿಜವಾದ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ’: ಅಣ್ಣಾ ಹಜಾರೆ
»ಅಗತ್ಯ ಬಿದ್ದಲ್ಲಿ ಬಿಎಸ್‌ವೈ ಮತ್ತೆ ಮುಖ್ಯಮಂತ್ರಿ: ನಾಯ್ಡು
»ವಿಧಾನ ಸಭೆ ಕಲಾಪಕ್ಕೆ ಆಗಮಿಸಿದ ಬೋಪಯ್ಯ: ರಾಜೀನಾಮೆಗೆ ಒತ್ತಾಯಿಸಿ ಅನರ್ಹ ಶಾಸಕರಿಂದ ಸಭಾತ್ಯಾಗ
»ಹರಪನಹಳ್ಳಿ: ಪೇಜಾವರ ಶ್ರೀಗಳಿಗೆ ಕಪ್ಪು ಬಟ್ಟೆ ಪ್ರದರ್ಶನ
»ಬಿಎಸ್‌ವೈ ಬೆಂಬಲಿಗರ ಹೊಸ ಗೇಮ್‌: ಶಾಸಕರ ಸಹಿ ಸಂಗ್ರಹ...
»ಹಿಂದೂ ಸಮಾವೇಶದ ನೆಲದಲ್ಲಿ ತಲೆ ಎತ್ತಲಿದೆ ಟೌನ್‌ಶಿಪ್: ಹಿಂದೂಗಳನ್ನು ಒಗ್ಗೂಡಿಸಿದ ಶಕ್ತಿ ಸ್ಥಳದ ಭಾವನಾತ್ಮಕತೆ ಉಳಿಸುವ ಯತ್ನ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri