ಮ೦ಗಳೂರು : ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ‘ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ' |
ಪ್ರಕಟಿಸಿದ ದಿನಾಂಕ : 2010-09-08
ಮಂಗಳೂರು, ಸೆ.7: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಛಾಫು ಮೂಡಿಸಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) 12ನೆ ಬಾರಿಗೆ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್‌ನ ಪ್ರಥಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
2008-09ನೆ ಸಾಲಿನಲ್ಲಿ ವಿಶಿಷ್ಟ ಸಾಧನೆಗಳೊಂದಿಗೆ ಗುರುತಿಸಿಕೊಂಡಿರುವ ಎಸ್‌ಡಿಸಿಸಿ ಬ್ಯಾಂಕ್ ಲೆಕ್ಕಪರಿಶೋಧನೆಯಲ್ಲಿ ‘ಎ’ ವರ್ಗವನ್ನು ಪಡೆದು ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆಗೊಂ ಡಿದೆ.
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್, ಬೆಂಗಳೂರು ಇವರು ವರ್ಷಂಪ್ರತಿ ರಾಜ್ಯದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಳ ಕಾರ್ಯವೈಖರಿಯನ್ನು ಗುರುತಿಸಿ ರಾಜ್ಯ ಮಟ್ಟದ ಈ ಪ್ರಶಸ್ತಿಯನ್ನು ನೀಡುತ್ತಿದೆ.
ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್‌ರ ಸಮರ್ಥ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಹಲವು ಪ್ರಥಮ ಸಾಧನೆಗಳ ಮೂಲಕ ಗುರುತಿಸಿಕೊಂಡಿರುವ ಎಸ್‌ಸಿಡಿಸಿಸಿ ಬ್ಯಾಂಕ್, ಸಾಲ ವಸೂಲಾತಿಯಲ್ಲೂ ರಾಷ್ಟ್ರೀಯ ದಾಖಲೆ ಹೊಂದಿದೆ. ಬ್ಯಾಂಕ್ ಸತತ 15 ವರ್ಷಗಳಿಂದ ನಿರಂತರ ವಾಗಿ ಶೇ.100 ಕೃಷಿ ಸಾಲ ವಸೂಲಾತಿ ಮಾಡಿರುತ್ತದೆ.
ವರದಿ ವರ್ಷದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ 8.73 ಕೋಟಿ ರೂ. ಲಾಭ ಗಳಿಸಿರುವುದು ಈವರೆಗಿನ ಸಾರ್ವಕಾಲಿಕ ದಾಖಲೆ. 927.07 ಕೋ.ರೂ. ಠೇವಣಿ ಹೊಂದಿರುವ ಎಸ್‌ಸಿಡಿಸಿಸಿ ಬ್ಯಾಂಕ್ 738.37 ಕೋಟಿ ರೂ. ಸಾಲವನ್ನು ವಿತರಿಸಿದೆ. 1,665.44 ಕೋಟಿ ರೂ.ಗಳಷ್ಟು ಒಟ್ಟು ವ್ಯವಹಾರ ಸಾಧಿಸುವ ಮೂಲಕ ಗುರಿ ಮೀರಿದ ಸಾಧನೆಯನ್ನು ಬ್ಯಾಂಕ್ ಮಾಡಿದೆ.
2008-09ನೆ ಸಾಲಿನ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸೆ.20ರಂದು ಬೆಂಗಳೂರಿನಲ್ಲಿ ನಡೆಯುವ ಅಪೆಕ್ಸ್ ಬ್ಯಾಂಕ್‌ನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಸ್ವೀಕರಿ ಸುವರು ಎಂದು ಬ್ಯಾಂಕ್‌ನ ಪ್ರಕಟನೆ ತಿಳಿಸಿದೆ.
ವರದಿಯ ವಿವರಗಳು |
 |
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-09-08 00:00:00
|
|
|