ಬೆಳ್ಮಣ್ : ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮೂಡುಗಿಳಿಯಾರು ಸರಕಾರಿ ಪ್ರೌಢಶಾಲೆಗೆ ಪ್ರಶಸ್ತಿ |
ಪ್ರಕಟಿಸಿದ ದಿನಾಂಕ : 2010-09-10
ಬೆಳ್ಮಣ್, ಸೆ.9: ಉಡುಪಿ ಜಿಲ್ಲಾ ಸಾರ್ವಜ ನಿಕ ಶಿಕ್ಷಣ ಇಲಾಖೆ, ಕಾರ್ಕಳ ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಮತ್ತು ಬೆಳ್ಮಣ್ ಸಂತ ಜೋಸೆಫರ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಶಾಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಬ್ರಹ್ಮಾವರ ವಲಯದ ಕೋಟ ಮೂಡುಗಿಳಿಯಾರು ಸಂಯುಕ್ತ ಸರಕಾರಿ ಪ್ರೌಢಶಾಲೆ ಪ್ರಶಸ್ತಿ ಗೆದ್ದುಕೊಂಡಿದೆ.
ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಕಾರ್ಕಳ ಪೆರ್ವಾಜೆ ಸುಂದರ ಪುರಾಣಿ ಕ್ ಪ್ರೌಢ ಶಾಲೆ ಪಡೆದುಕೊಂಡಿದೆ.
ಪಂದ್ಯಾಟವನ್ನು ಶಾಲಾ ಸಂಚಾಲಕ ರೆ.ಫಾ.ಲಾರೆನ್ಸ್ ಡಿಸೋಜ ಉದ್ಘಾಟಿಸಿದರು. ಮುಖ್ಯ ಅತಿ ಥಿಗಳಾಗಿ ಸತೀಶ್ ಶೆಟ್ಟಿ, ಕ್ಸೇವಿಯರ್ ಡಿಮೆಲ್ಲೊ, ಸಿಲ್ವೆಸ್ಟರ್ ಡಿಮೆಲ್ಲೊ, ಉರ್ಬನ್ ಡಿಸೋಜ, ಮುಖ್ಯೋಪಾಧ್ಯಾಯಿನಿ ರೆನಿಲ್ಡಾ ಪಿರೇರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಹರಿದಾಸ ಪ್ರಭು ಪಂದ್ಯಾಟ ನಡೆಸಿಕೊಟ್ಟರು. ನಿಖಿಲ್ ಮೆಂಡೊನ್ಸ ಸ್ವಾಗತಿಸಿದರು. ಭರತ್‌ರಾಜ್ ವಂದಿಸಿದರು. ರೋಹನ್ ಕಾರ್ಯಕ್ರಮ ನಿರೂಪಿಸಿದರು.
ವರದಿಯ ವಿವರಗಳು |
 |
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-09-10 00:00:00
|
|
|