ಕೆಪಿಸಿಸಿ ಅಧ್ಯಕ್ಷರ ಚುನಾವಣೆ 21ಕ್ಕೆ ಮುಂದೂಡಿಕೆ |
ಪ್ರಕಟಿಸಿದ ದಿನಾಂಕ : 2010-09-11
ಬೆಂಗಳೂರು : ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸಾಂಸ್ಥಿಕ ಚುನಾವಣೆ ಈ ತಿಂಗಳ 21ಕ್ಕೆ ಮುಂದೂಡಲ್ಪಟ್ಟಿದೆ.
ಕೆಪಿಸಿಸಿ ಅಧ್ಯಕ್ಷ, ಕಾರ್ಯಕಾರಿ ಸಮಿತಿ ಹಾಗೂ ಎಐಸಿಸಿ ಸದಸ್ಯ ಸ್ಥಾನಗಳಿಗೆ ಈ ತಿಂಗಳ 17 ರಂದು ಚುನಾವಣೆ ನಡೆಯಬೇಕಿತ್ತು . ಕಡೂರು ಹಾಗೂ ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿದೆ.
ಕೆಪಿಸಿಸಿ ಚುನಾವಣಾ ಸಮಿತಿಯ ಅಧ್ಯಕ್ಷ ಹಾಗೂ ಸಂಸದ ಬಿ.ಎಸ್. ಜ್ಞಾನದೇಶಿಕನ್ ಹಾಗೂ ಸಮಿತಿಯ ಸದಸ್ಯ ನಂದಿ ಈಳಯ್ಯ ಅವರು ಶುಕ್ರವಾರ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಪರಿಷ್ಕೃತ ವೇಳಾಪಟ್ಟಿಯಂತೆ ಸೆ.17 ರಂದು ನಾಮಪತ್ರ ಸಲ್ಲಿಸಬಹುದು. ಸೆ.18 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು , ಸೆ.19 ರಂದು ನಾಮಪತ್ರಗಳನ್ನು ವಾಪಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಸೆ.21 ರಂದು ಚುನಾವಣೆ ನಡೆಯಲಿದೆ.
ವರದಿಯ ವಿವರಗಳು |
 |
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-09-11 00:00:00
|
|
|