ಮೇ 18 ರಂದು ಮಂಗಳೂರಿಗೆ ಮತ್ತೊಂದು ವಿಮಾನ; ದ.ಕ ಜಿಲ್ಲಾಧಿಕಾರಿಮಂಗಳೂರು: ದುಬೈನಿಂದ ಕನ್ನಡಿಗರನ್ನು ಹೊತ್ತ ಎರಡನೇ ವಿಮಾನ ಮೇ 18ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಜಿಲ್ಲಾಧಿಕಾರಿ, ಅವರೆಲ್ಲಾ ಯಾವ ಜಿಲ್ಲೆಯವರು, ಎಷ್ಟು ಮಂದಿ ಪ್ರಯಾಣಿಕರಿದ್ದಾರೆ ಎಂಬ ಬಗ್ಗೆ ನಿಖರವಾದ ಮಾಹಿತಿ ಲಭಿಸಿಲ್ಲ. ಆದರೆ ಕೇಂದ್ರ ಹಾಗೂ ರಾಜ್ಯ ಆರೋಗ್ಯ ಇಲಾಖೆಯ ನಿಯಮಗಳಂತೆ ಅವರೆಲ್ಲರೂ ತಮ್ಮದೇ ಸ್ವಂತ ಖರ್ಚಿನಲ್ಲಿ ಕ್ವಾರಂಟೈನ್‌ಗೊಳಪಡುವ ಷರತ್ತಿಗೆ ಒಪ್ಪಿಕೊಂಡೇ ಆಗಮಿಸುತ್ತಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದ ಪ್ರಥಮ ವಿಮಾನದಲ್ಲಿ ಬಂದ ಪ್ರಯಾಣಿಕರಿಗೆ ತೊಂದರೆಗಳಾಗಿರುವ ಬಗ್ಗೆ ದೂರುಗಳ ಹಿನ್ನೆಲೆಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ದೇಶಕರ ಜತೆ ಚರ್ಚಿಸಲಾಗಿದೆ. ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಪ್ರಯಾಣಿಕರು ಕೂಡಾ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

Comments