ಕೋವಿಡ್-19 ಸೋಂಕಿತ ಮಹಿಳೆ ಸಾವು


ಬೆಂಗಳೂರು ಗ್ರಾಮಾಂತರ ಜಿಲ್ಲೆ, :- ತುಮಕೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ,
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ವೀರಸಾಗರ ಗ್ರಾಮದ ನಿವಾಸಿ, 55 ವರ್ಷದ ಮಹಿಳೆ (P-1686), ಮೇ 24 ರಂದು ರಾತ್ರಿ 8 ಗಂಟೆಗೆ ಸಾವನ್ನಪ್ಪಿದ್ದಾರೆ.
ಕೋವಿಡ್-19ರ ಅಂತ್ಯಸಂಸ್ಕಾರದ ಮಾರ್ಗಸೂಚಿಯಂತೆ ತುಮಕೂರಿನಲ್ಲಿ ಮೃತ ಮಹಿಳೆಯ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments