ಜೂ.1 ರಿಂದ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶಬೆಳ್ತಂಗಡಿ: ಕೊರೊನಾ ವೈರಸ್ ಅಟ್ಟಹಾಸ ಬಳಿಕ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ  ಸರಕಾರದ ನಿರ್ದೇಶನದಂತೆ ಜೂ.1 ರಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ.

ಈ ಬಗ್ಗೆ  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ  ತಿಳಿಸಿದ್ದಾರೆ.

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಳಗಳಲ್ಲಿ ಕೆಲ ನಿಬಂಧನೆಗಳನ್ನು ಪಾಲಿಸಿಕೊಂಡು ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭೆಯಲ್ಲಿ ಘೋಷಿಸಿದಂತೆ ಸರಕಾರದ ನಿಯಾಮವಳಿ ಪಾಲಿಸುವ ಜತೆಗೆ ಕ್ಷೇತ್ರದ ವತಿಯಿಂದ ಕೊರೊನಾ ಹರಡದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗುತ್ತಿದ್ದು ಕೊರೊನಾ ನಿಯಂತ್ರಣಕ್ಕೆ ಸಂಪೂರ್ಣ ಒತ್ತು ನೀಡಲಾಗುತ್ತಿದೆ.
ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಕಡ್ಡಾಯ ಒಳಗೊಂಡಂತೆ ಭಕ್ತರ ಸಂಖ್ಯೆಯಲ್ಲಿ ನಿಯಂತ್ರಣ ಕಾಪಾಡಲಾಗುವುದು. ಅಂತರ ಕಾಯ್ದುಕೊಳ್ಳಲು ಪೂರ್ವ ತಯಾರಿ ಮಾಡಲಾಗುವುದು  ಎಂದು ತಿಳಿಸಿದ್ದಾರೆ.

Comments