ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು: ಸೋಂಕಿತರ ಸಂಖ್ಯೆ 52 ಕ್ಕೆ ಏರಿಕೆಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 52 ಕ್ಕೆ ಏರಿಕೆಯಾಗಿದೆ.
 ಇಬ್ಬರಲ್ಲಿ ಓರ್ವರು ಮುಂಬೈನಿಂದ ಮಂಗಳೂರಿಗೆ ಬಂದ ಪ್ರಯಾಣದ ಹಿನ್ನೆಲೆ ಹೊಂದಿದ್ದು ಮತ್ತೊಬ್ಬರ ಸಂಪರ್ಕವನ್ನು ಪತ್ತೆಹಚ್ಚಲಾಗುತ್ತಿದೆ.
35  ವರ್ಷದ ಮಹಿಳೆ ಮುಂಬೈನಿಂದ ಮಂಗಳೂರಿಗೆ ಬಂದ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇವರು ಮಂಗಳೂರಿನ ಯೆಯ್ಯಾಡಿ ನಿವಾಸಿಯಾಗಿದ್ದಾರೆ. 31  ವರ್ಷದ ಪುರುಷ ನ ಪ್ರಯಾಣದ ಹಿಸ್ಟರಿಯನ್ನು ಇಲಾಖೆ ಹುಡುಕಾಟ ನಡೆಸುತ್ತಿದೆ.ಇವರು ಮಂಗಳೂರಿನ ಜೆಪ್ಪಿನಮೊಗರು ನಿವಾಸಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ  52  ಪ್ರಕರಣಗಳು ಪತ್ತೆಯಾಗಿದ್ದು ಇದರಲ್ಲಿ  16  ಮಂದಿ ಗುಣಮುಖರಾಗಿದ್ದಾರೆ. ಐವರು ಸಾವನ್ನಪ್ಪಿದ್ದು  31   ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

Comments