ದ.ಕ ಜಿಲ್ಲೆಯಲ್ಲಿ ಇಬ್ಬರಿಗೆ ಕೊರೊನಾ ದೃಢ: 54 ಕ್ಕೇರಿದ ಸೋಂಕಿತರ ಸಂಖ್ಯೆ


ಮಂಗಳೂರುಳ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ದೃಢಪಟ್ಟಿದೆ. ಈವರೆಗೆ ದ.ಕ ಜಿಲ್ಲೆಯಲ್ಲಿ ಕೊರೊನಾ ದೃಢಪಟದಟವರ ಸಂಖ್ಯೆಯ  54  ಕ್ಕೆ ಏರಿಕೆಯಾಗಿದ್ದು  33  ಮಂದಿ ಇಕಿತ್ಸೆ ಪಡೆಯುತ್ತಿದ್ದಾರೆ.
 ಇಂದು ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ  30  ವರ್ಷದ ಯುವಕನಿಗೆ ಕೊರೊನಾ ದೃಢಪಟ್ಟಿದೆ. ಇವರು ಮಹಾರಾಷ್ಟ್ರದ ರಾಯಗಢದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣದ ಹಿಸ್ಟರಿ ಹೊಂದಿದ್ದಾರೆ. ಮತ್ತೊಬ್ಬರು ಮಂಗಳೂರಿ ಯೆಯ್ಯಾಡಿ ಯ  55  ವರ್ಷದ ಮಹಿಳೆಗೆ ಕೊರೊನಾ ದೃಢಟ್ಟಿದ್ದು ಇವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದಿನ ಎರಡು ಪ್ರಕರಣ ಸೇರಿದಂತೆ  54  ಪ್ರಕರಣ ಜಿಲ್ಲೆಯಲ್ಲಿ ದೃಢಪಟ್ಟಿದ್ದು ಇವರಲ್ಲಿ ಐವರು ಸಾವನ್ನಪ್ಪಿದ್ದಾರೆ. 16  ಮಂದಿ ಗುಣಮುಖರಾಗಿದ್ದು  33  ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

Comments