ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಯಡಿಯೂರಪ್ಪ ಅವರೆ ಪೂರ್ಣಾವಧಿ ಸಿಎಂ; ನಳಿನ್ ಕುಮಾರ್ ಕಟೀಲ್ ಹೇಳಿಕೆ


ಮಂಗಳೂರು: ನಮ್ಮ ಸರಕಾರ ಸುಭದ್ರವಾಗಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ವ್ಯಕ್ತವಾಗಿಲ್ಲ. ಆದ್ದರಿಂದ ಬಿಜೆಪಿ ಪೂರ್ಣಾವಧಿ ಆಡಳಿತ ನಡೆಸಲಿದ್ದು, ಯಡಿಯೂರಪ್ಪ ನವರೇ ಪೂರ್ಣಾವಧಿ ಸಿಎಂ ಆಗಲಿದ್ದಾರೆ.

ತಮ್ಮ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಎಲ್ಲಾ ಶಾಸಕರು ಕೋವಿಡ್ ಸೋಂಕಿನ ವಿರುದ್ಧ ಹೋರಾಟದಲ್ಲಿ ಸದಾ ಪರಿಶ್ರಮ  ವಹಿಸುತ್ತಿದ್ದಾರೆ. ಆದರೆ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ ಎಂದು ಡಿಕೆಶಿ ಹಗಲುಗನಸು ಕಾಣುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನು ಗಮನಿಸಿದ ಹಾಗೆ ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷದಲ್ಲಿ ಯಾವುದೇ ಅಶಿಸ್ತನ್ನು ನಾವು ಸಹಿಸೋದಿಲ್ಲ. ಅಶಿಸ್ತು ಕಂಡಲ್ಲಿ ಹೈಕಮಾಂಡ್ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂದು ನಳಿನ್ ಕುಮಾರ್ ಹೇಳಿದರು.

Comments