ಊರಿಗೆ ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಿ; ಮಂಗಳೂರಿನಲ್ಲಿ ವಲಸೆ ಕಾರ್ಮಿಕರ‌ ಧರಣಿಮಂಗಳೂರು:  ಊರುಗಳಿಗೆ ತೆರಳಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಉತ್ತರ ಭಾರತದ ವಲಸೆ ಕಾರ್ಮಿಕರು ಮಂಗಳೂರಿನ ಮಿಲಾಗ್ರಿಸ್ ಕಾಲೇಜ್ ಬಳಿ ಧರಣಿ ನಡೆಸಿದ್ರು. 

ಮಿಲಾಗ್ರಿಸ್ ಕಾಲೇಜು ಬಳಿ ಜಮಾಯಿಸಿದ ಸುಮಾರು 400 ಮಂದಿ ವಲಸೆ ಕಾರ್ಮಿಕರು ಧರಣಿ ನಡೆಸಿ, ತಮ್ಮ ಊರಿಗೆ ತೆರಳಲು ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಕಾರ್ಮಿಕರಿಗೆ ಊರಿಗೆ ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲಿಯವರೆಗೆ ಸಂಯಮದಿಂದ ಇರುವಂತೆ ಸೂಚಿಸಿದರು.

Comments