ನಾಳೆ ಸಂಜೆಯಿಂದ ಸೋಮವಾರ ಮುಂಜಾನೆಯವರೆಗೆ ಸಂಪೂರ್ಣ ಲಾಕ್ ಡೌನ್: ದ.ಕ.ಜಿಲ್ಲಾಧಿಕಾರಿಮಂಗಳೂರು,:ಕೊರೋನ ವೈರಸ್ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೇ 23ರ ಶನಿವಾರ ಸಂಜೆ 7 ಗಂಟೆಯಿಂದ ಮೇ 25ರ ಸೋಮವಾರ ಮುಂಜಾನೆ 7 ಗಂಟೆಯವರೆಗೆ ದ.ಕ. ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ಡೌನ್ ಆಗಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್  ತಿಳಿಸಿದ್ದಾರೆ.

ಈ ಅವಧಿಯಲ್ಲಿ ಅಗತ್ಯ ವಸ್ತುಗಳಾದ ಪತ್ರಿಕೆ, ತರಕಾರಿ, ಮೀನು, ಮಾಂಸ, ಹಾಲು, ಔಷಧ ಪೂರೈಕೆ, ಖರೀದಿಗೆ ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಇತರ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೊಟೇಲ್‌ಗಳು ಮುಚ್ಚಲ್ಪಡಲಿದೆ. ಅಲ್ಲದೆ ಎಲ್ಲಾ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
 ಈಗಾಗಲೆ ನಿಗದಿಯಾಗಿರುವ ಮತ್ತು ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆದಿರುವ ಮೇ 24ರ ಮದುವೆ ಕಾರ್ಯಕ್ರಮಗಳನ್ನು ಸರಕಾರ ನೀಡಿರುವ ಮಾರ್ಗಸೂಚಿಯಂತೆ ನಡೆಸಬಹುದಾಗಿದೆ. ಮದುವೆಯ ಪ್ರಯುಕ್ತ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣಿಸುವ ಆವಶ್ಯಕತೆ ಇದ್ದರೆ ಖಾಸಗಿ ವಾಹನಗಳಿಗೆ ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆಯಬೇಕು ಎಂದು ದ.ಕ.ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Comments