ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ದೂರು ದಾಖಲು


ಮಂಗಳೂರು: ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ  ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಕೆ ಪಿ ಸಿ ಸಿ ಕಾರ್ಯದರ್ಶಿ ಅಶೋಕ್ ಶೆಟ್ಟಿ ಎಂಬವರು ಬಂಟ್ವಾಳ ನಗರ ಠಾಣೆಗೆ ಶೋಭ ಕರಂದ್ಲಾಜೆ ವಿರುದ್ದ ದೂರು ನೀಡಿದ್ದಾರೆ. ಬಂಟ್ವಾಳದ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಆತ್ಮಹತ್ಯೆಯ ಬಗ್ಗೆ ಮುಸ್ಲಿಂ ಜೆಹಾದಿಗಳ ಕೈವಾಡವಿದೆ ಎಂದು ಶೋಭಕರಂದ್ಲಾಜೆ ಟ್ವೀಟ್ ಮಾಡಿದ್ದು , ಮುಸ್ಲಿಂ ಯುವಕರು ರಕ್ಷಿಸಿದ್ದಾರೆ ಎಂದು ಗೊತ್ತಾದ ಕುಡಲೇ ಅದನ್ನು ಡಿಲೀಟ್ ಮಾಡಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ, ಸಂವಿಧಾನತ್ಮಾಕವಾದ ಹುದ್ದೆಯನ್ನು ಅಲಂಕರಿಸಿ ಪ್ರಮಾಣ ವಚನ ಸ್ವೀಕರಿಸಿದ ಇವರು ಈ ಹಿಂದೆಯು ಹಲವು  ದ್ವೇಷಪೂರಿತ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ

Comments