ದ.ಕ ಜಿಲ್ಲೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಗೆ ಕೊರೊನಾ ಸೋಂಕು


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಓರ್ವ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಗೆ ಕೊರೊನಾ ದೃಢಪಟ್ಟಿದೆ.
ಮೇ 14 ರಂದು ಮಹಾರಾಷ್ಟ್ರದ ರಾಯಗಢದಿಂದ ಬಂದಿದ್ದ ವಿಟ್ಲದ ವ್ಯಕ್ತಿಗೆ ಕೊರೊನಾ ಬಂದಿತ್ತು. ಈ ವ್ಯಕ್ತಿ ಕ್ಬಾರಂಟೈನ್ ಗೆ ಹೋಗುವ ಮುನ್ನ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.  ಆತ ಭೇಟಿ ನೀಡಿದ ಪೊಲೀಸ್ ಕಾನ್ಸ್ ಟೇಬಲ್ ಗೂ ಇದೀಗ ಕೊರೊನಾ ದೃಢಪಟ್ಟಿದೆ.
ಜಿಲ್ಲೆಯಲ್ಲಿ ಸೋಂಕಿನ ಸಂಖ್ಯೆ 66 ಕ್ಕೆ ಏರಿಕೆಯಾಗಿದೆ.  ಇದರಲ್ಲಿ 6 ಮಂದಿ ( ಓರ್ವ ಆತ್ಮಹತ್ಯೆ) ಮೃತಪಟ್ಟಿದ್ದು  26 ಮಂದಿ ಗುಣಮುಖರಾಗಿದ್ದಾರೆ. 34 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

Comments