ಮಂಗಳೂರಿನಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬೆಳ್ತಂಗಡಿ ತಾಲೂಕಿನ 41 ವರ್ಷದ‌ ಮಹಿಳೆಯನ್ನು ಜ್ವರದ ಹಿನ್ನೆಲೆಯಲ್ಲಿ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊರೊನಾ ದೃಢಪಟ್ಟಿದೆ. ಮಹಾರಾಷ್ಟ್ರ ದಿಂದ ಆಗಮಿಸಿದ 30 ವರ್ಷದ ವ್ಯಕ್ತಿಗೆ ಕೊರೊನಾ ಇರುವುದು ದೃಢಪಟ್ಟಿದೆ. 
ಕ್ವಾರಂಟೈನ್ ನಲ್ಲಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗೆ ನಿನ್ನೆ ಕೊರೊನಾ ದೃಢಪಟ್ಟಿದೆ. ಆದರೆ ಈ ಸಾವನ್ನು ಕೋವಿಡ್ ನಿಂದ ಸಂಭವಿಸಿದ ಸಾವು ಎಂದು ಪರಿಗಣಿಸಲಾಗಿಲ್ಲ.
ಜಿಲ್ಲೆಯಲ್ಲಿ 65 ಪ್ರಕರಣ ದೃಢಪಟ್ಟಿದ್ದು 26 ಮಂದಿ ಗುಣಮುಖರಾಗಿದ್ದಾರೆ. 33 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments