ಮಂಗಳೂರಿನಲ್ಲಿ ಉತ್ತಮ ಮಳೆಮಂಗಳೂರು; ಮಂಗಳೂರಿನಲ್ಲಿ ಮುಂಜಾನೆಯಿಂದ ಉತ್ತಮ ಮಳೆ ಸುರಿಯುತ್ತಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ  ಅಂಫಾನ್ ಚಂಡಮಾರುತ ಸೃಷ್ಟಿಯಾಗಿದ್ದು ಇದರ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಿದೆ.

ಮುಂಜಾನೆ ಐದರಿಂದಲೇ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು ಅರಬ್ಬೀ ಸಮುದ್ರದಲ್ಲಿ ನಿಮ್ನ ಒತ್ತಡ (ಟ್ರಫ್) ನಿರ್ಮಾಣ ಸೃಷ್ಟಿಯಾಗಿದೆ.

ದಕ್ಷಿಣ ಕನ್ನಡದಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗುತ್ತಿದೆ.ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆಯ
ಉತ್ತಮ ಆರಂಭವಾಗಿದೆ.

Comments