ಫರ್ಸ್ಟ್ ನ್ಯೂರೋ ಆಸ್ಪತ್ರೆ ಸಿಬ್ಬಂದಿ ಹೋಂ‌ಕ್ವಾರಂಟೈನ್ ಗೆ ಶಿಪ್ಟ್


ಮಂಗಳೂರು; ದ.ಕ ಜಿಲ್ಲೆಯಲ್ಲಿ ಕೊರೊನಾ ಹಾಟ್ ಸ್ಪಾಟ್ ಆಗಿ ಗುರುತಿಸಿಕೊಂಡಿರುವ  ಮಂಗಳೂರಿನ ಫರ್ಸ್ಟ್ ನ್ಯೂರೋ  ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿರುವುದರಿಂದ ಅವರನ್ನು ಹೋಂ ಕ್ವಾರಂಟೈನ್ ಗೆ ಶಿಪ್ಟ್ ಮಾಡಲಾಗಿದೆ.
ಆಸ್ಪತ್ರೆಯಲ್ಲಿ ಒಟ್ಟು 14 ದಿನಗಳ ಕ್ವಾರಂಟೈನ್ ಅವಧಿಯನ್ನು ಅವರು ಪೂರ್ತಿಗೊಳಿಸಬೇಕಿತ್ತು. ಆದರೆ ಅವರ ಗಂಟಲುದ್ರವ ಮಾದರಿ ವರದಿ ಬರಲು ವಿಳಂಬವಾಗಿದ್ದರಿಂದ ಅವರನ್ನು ಆಸ್ಪತ್ರೆಯಿಂದ ಹೊರಬಿಡಲು ತಡವಾಗಿದೆ. ಇದೀಗ 22 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ.ಪೂರ್ತಿ 28 ದಿನಗಳ ಅವಧಿ ಮುಗಿಯುವವರೆಗೆ  ಅವರು ಮನೆಯಲ್ಲಿ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ

Comments