ಕೊರೊನಾಗೆ ಪತಿ ಬಲಿಯಾದ ದಿನವೇ ಮಗುವಿಗೆ ಜನ್ಮ ನೀಡಿದ ಪತ್ನಿಮೂಡುಬಿದಿರೆ; ಮೂಡುಬಿದಿರೆ ಮೂಲದ ವ್ಯಕ್ತಿಯೊಬ್ಬರು ಮುಂಬೈನಲ್ಲಿ ಕೊರೊನಾದಿಂದ ಸಾವನ್ನಪ್ಪಿದ ದಿನವೇ ಮೂಡಬಿದ್ರೆಯಲ್ಲಿದ್ದ ಅವರ ಪತ್ನಿ ಮಗುವಿಗೆ ಜನ್ಮ ನೀಡಿದ್ದಾರೆ.


ಮುಂಬಯಿಗೆ ಹೋಗಿದ್ದ ವ್ಯಕ್ತಿ ಗೆ ಕೊರೊನಾ ಸೋಂಕು ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿನ್ನೆ ಮೃತಪಟ್ಟಿದ್ದಾರೆ. ಅದೇ ದಿನ ಆ ವ್ಯಕ್ತಿಯ ಪತ್ನಿ ಮಗುವಿಗೆ ಜನ್ಮ ನೀಡಿದ್ದಾರೆ.

ಮೃತರ ಪತ್ನಿ ತಮ್ಮ ನಿವಾಸ ಮೂಡುಬಿದಿರೆಯಲ್ಲಿ ವಾಸವಾಗಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಅವರು ಇದೀಗ ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದೆಡೆ ಅವರ ಪತಿ ಕೊರೊನಾದಿಂದ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅಂತಿಮವಾಗಿ ಅವರ ಮುಖ ನೋಡುವ ಅವಕಾಶವೂ ಕೂಡ ಅವರಿಗೆ ಇಲ್ಲದಂತಾಗಿದೆ.

Comments