ಯಾದಗಿರಿ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ಪತ್ತೆ


ಯಾದಗಿರಿ: ಜಿಲ್ಲೆಯಲ್ಲಿ ಭಾನುವಾರ ಮತ್ತೆ ಮೂರು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರಿಂದ ಸೋಂಕಿತರ ಸಂಖ್ಯೆ 5ಕ್ಕೆ ಏರಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ತಿಳಿಸಿದ್ದಾರೆ.

ಶಹಾಪುರ ತಾಲ್ಲೂಕಿನವರಾದ 30 ವರ್ಷದ ಯುವಕ (ರೋಗಿ ಸಂಖ್ಯೆ ಪಿ-1139), 22 ವರ್ಷದ ಯುವಕ (ಪಿ-1140) ಮತ್ತು 34 ವರ್ಷದ ಪುರುಷ (ಪಿ-1141) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇವರೆಲ್ಲರೂ ಅಂತರರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಹಾಪೂರ ತಾಲ್ಲೂಕಿನ ಪಿ-1139 ಪೀಡಿತ ವ್ಯಕ್ತಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಎನ್ನಲಾದ 38 ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು ಎನ್ನಲಾದ 42 ಜನರನ್ನು ಗುರುತಿಸಲಾಗಿದೆ. ಸದರಿ ಪೀಡಿತ ವ್ಯಕ್ತಿಯು ಮಹಾರಾಷ್ಟ್ರ ರಾಜ್ಯದಿಂದ ಕಾಲ್ನಡಿಗೆ ಮೂಲಕ ಆಗಮಿಸಿದ್ದಾರೆ. ಆರೋಗ್ಯ ತಪಾಸಣೆ ಕೈಗೊಂಡು ಇವರನ್ನು ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ ಪ್ರತ್ಯೇಕವಾಗಿ ಅವಲೋಕನೆಗಾಗಿ ಇರಿಸಲಾಗಿತ್ತು. ಗಂಟಲಿನ ದ್ರವವನ್ನು ಸಂಗ್ರಹಿಸಿ, ಕೋವಿಡ್-19 ಪರೀಕ್ಷೆಗಾಗಿ ಕಲಬುರಗಿಗೆ ಕಳುಹಿಸಲಾಗಿತ್ತು. ಪಾಸಿಟಿವ್ ವರದಿಯಾದ ನಂತರ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಅವಲೋಕನೆಗಾಗಿ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶಹಾಪೂರ ತಾಲ್ಲೂಕಿನ ಪಿ-1140 ಪೀಡಿತ ವ್ಯಕ್ತಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಎನ್ನಲಾದ 14 ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು ಎನ್ನಲಾದ 87 ಜನರನ್ನು ಗುರುತಿಸಲಾಗಿದೆ. ಸದರಿ ಪೀಡಿತ ವ್ಯಕ್ತಿಯು ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯಿಂದ ಜೀಪ್ ಮೂಲಕ ಆಗಮಿಸಿದ್ದಾರೆ. ಆರೋಗ್ಯ ತಪಾಸಣೆ ಕೈಗೊಂಡು ಇವರನ್ನು ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ ಪ್ರತ್ಯೇಕವಾಗಿ ಅವಲೋಕನೆಗಾಗಿ ಇರಿಸಲಾಗಿತ್ತು. ಗಂಟಲಿನ ದ್ರವವನ್ನು ಸಂಗ್ರಹಿಸಿ, ಕೋವಿಡ್-19 ಪರೀಕ್ಷೆಗಾಗಿ ಕಲಬುರಗಿಗೆ ಕಳುಹಿಸಲಾಗಿತ್ತು. ಸಕಾರಾತ್ಮಕ ವರದಿಯಾದ ನಂತರ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಅವಲೋಕನೆಗಾಗಿ ಇರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನೋರ್ವ ಶಹಾಪೂರ ತಾಲ್ಲೂಕಿನ ಪಿ-1141 ಪೀಡಿತ ವ್ಯಕ್ತಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಎನ್ನಲಾದ 18 ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು ಎನ್ನಲಾದ 42 ಜನರನ್ನು ಗುರುತಿಸಲಾಗಿದೆ. ಸದರಿ ಪೀಡಿತ ವ್ಯಕ್ತಿಯು ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯಿಂದ ಕಾರು ಮೂಲಕ ಆಗಮಿಸಿದ್ದಾರೆ. ಆರೋಗ್ಯ ತಪಾಸಣೆ ಕೈಗೊಂಡು ಇವರನ್ನು ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ ಪ್ರತ್ಯೇಕವಾಗಿ ಅವಲೋಕನೆಗಾಗಿ ಇರಿಸಲಾಗಿತ್ತು. ಗಂಟಲಿನ ದ್ರವವನ್ನು ಸಂಗ್ರಹಿಸಿ, ಕೋವಿಡ್-19 ಪರೀಕ್ಷೆಗಾಗಿ ಕಲಬುರಗಿಗೆ ಕಳುಹಿಸಲಾಗಿತ್ತು. ಸಕಾರಾತ್ಮಕ ವರದಿಯಾದ ನಂತರ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಅವಲೋಕನೆಗಾಗಿ ಇರಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಸಕಾರಾತ್ಮಕ ಪ್ರಕರಣಗಳಿಗೆ ಪ್ರಾಥಮಿಕ, ದ್ವಿತೀಯ ಸಂಪರ್ಕ ಹೊಂದಿದವರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಜಿಲ್ಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಆತಂಕ ಪಡಬಾರದು. ಜಿಲ್ಲೆಯನ್ನು ಕೋವಿಡ್-19 ಮುಕ್ತ ಜಿಲ್ಲೆಯನ್ನಾಗಿಸುವ ಪ್ರಯತ್ನದಲ್ಲಿ ಸಾರ್ವಜನಿಕರು ಸಹಕರಿಸಬೇಕಾಗಿ ಅಪರ ಜಿಲ್ಲಾಧಿಕಾರಿಗಳು ಕೋರಿದ್ದಾರೆ.

Comments