ಕ್ವಾರಂಟೈನ್ ಕೇಂದ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಲ್ಲಿ ಸಾಂಕ್ರಾಮಿಕ ತಡೆ ಕಾಯ್ದೆ ಯ ಅಡಿಯಲ್ಲಿ ಕ್ರಮ – ದಕ ಜಿಲ್ಲಾ ಎಸ್ಪಿ ಎಚ್ಚರಿಕೆಮಂಗಳೂರು: ದೇಶದ ಇತರೆ ರಾಜ್ಯಗಳಲ್ಲಿ ನೆಲೆಸಿರುವ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಗಳು ಪ್ರಸ್ತುತ ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಸರ್ಕಾರದ ನಿಯಮಗಳಿಗೆ ಒಳಪಟ್ಟು ಹಿಂತಿರುಗುತ್ತಿದ್ದು, ಅವರಿಗೆ ಕ್ವಾರಂಟೈನ್ ಕೇಂದ್ರಗಳನ್ನು ಮಾಡಲು ಯಾವುದೇ ವ್ಯಕ್ತಿಗಳು ಪ್ರತಿಭಟನೆ ಅಥವಾ ವಿರೋಧ ವ್ಯಕ್ತಪಡಿಸಿದಲ್ಲಿ ಅಂತವರ ವಿರುದ್ದ ಸಾಂಕ್ರಾಮಿಕ ತಡೆ ಕಾಯ್ದೆ ಯ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ದಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ದೇಶದ ಇತರೆ ರಾಜ್ಯಗಳಲ್ಲಿ ನೆಲೆಸಿರುವ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಗಳು ಪ್ರಸ್ತುತ ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಸರ್ಕಾರದ ನಿಯಮಗಳಿಗೆ ಒಳಪಟ್ಟು ಹಿಂತಿರುಗುತ್ತಿದ್ದು, ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ ಅಥವಾ ಇನ್ನಿತರ ಸಂಸ್ಥೆಗಳಲ್ಲಿ ಕ್ವಾರಂಟೈನ್ ನಲ್ಲಿಡುವ ಬಗ್ಗೆ  ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Comments