ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ


ಮಂಗಳೂರು;ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ) ಮತ್ತು ಕೆಎಂಸಿ ಆಸ್ಪತ್ರೆಯ ಆಶ್ರಯದಲ್ಲಿ  ರಕ್ತದಾನ ಶಿಬಿರ ನಡೆಯಿತು. 

ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ಮಂಗಳವಾರ ನಡೆದ ರಕ್ತದಾನ ಶಿಬಿರವನ್ನು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರೂ, ಮಂಗಳೂರು ನಗರ ದಕ್ಷಿಣ ಶಾಸಕರೂ ಆಗಿರುವ ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. 
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು ರಕ್ತದಾನ ಎಲ್ಲದಕ್ಕಿಂತಲೂ ಶ್ರೇಷ್ಟದಾನ. ಒಬ್ಬ ರೋಗಿಯ ಜೀವವನ್ನು ಉಳಿಸಲು ರಕ್ತ ಅತ್ಯಂತ ಅವಶ್ಯಕವಾಗಿರುತ್ತದೆ. ಮಂಗಳೂರಿನ ಕೆಎಂಸಿ ಆಸ್ಪತ್ರೆಯ ರಕ್ತನಿಧಿ ಘಟಕದಲ್ಲಿ ರಕ್ತ ಸಂಗ್ರಹದ ಕೊರತೆ ಇರುವುದನ್ನು ನಮ್ಮ ಗಮನಕ್ಕೆ ಬಂದಾಗ ಸದಾ ಸಮಾಜಮುಖಿ ಸೇವೆಯಲ್ಲಿ ನಿರತರಾಗಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಕಾರ್ಯಕರ್ತರು ಸ್ವಯಂಪ್ರೇರಣೆಯಿಂದ ಮುಂದೆ ಬಂದು ರಕ್ತದಾನದಲ್ಲಿ ಭಾಗವಹಿಸಿದ್ದಾರೆ. ಈ ಟ್ರಸ್ಟ್ ನ ಅನೇಕ ಹಿತೈಷಿಗಳು ಕೂಡ ರಕ್ತದಾನ ಮಾಡುವ ಮೂಲಕ ನಮ್ಮ ಸೇವಾಕಾರ್ಯಕ್ಕೆ ಸಾಥ್ ನೀಡಿರುವುದು ಇನ್ನಷ್ಟು ಕೆಲಸ ಮಾಡಲು ಪ್ರೇರಣೆ ನೀಡುತ್ತದೆ. ಸೇವಾಂಜಲಿ ಚಾರೀಟೇಬಲ್ ಟ್ರಸ್ಟ್ ಇದರ ವಿದ್ಯಾದಾನ, ಆರೋಗ್ಯದಾನದಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆದು ಸಮಾಜದ ಅಸಹಾಯಕರಿಗೆ ನೆರವಾಗಲಿ ಎಂದು ಹಾರೈಸಿದರು.
ರಕ್ತದಾನ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮೇಯರ್ ದಿವಾಕರ್ ಪಾಂಡೇಶ್ವರ್, ಟ್ರಸ್ಟ್ ನ ಪ್ರಮುಖರಾದ ಹನುಮಂತ ಕಾಮತ್, ಮಂಗಲ್ಪಾಡಿ ನರೇಶ್ ಶೆಣೈ, ಚೇತನ್ ಕಾಮತ್, ನರೇಶ್ ಪ್ರಭು, ಕೆಎಂಸಿ ಬ್ಲಡ್ ಬ್ಯಾಂಕ್ ಆಫೀಸರ್ ಭವಾನಿಶಂಕರ್ ಹಾಗೂ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಟ್ರಸ್ಟ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.

Comments