ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯ


ರಾಮನಗರ, : ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರದಿಂದ ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ಆಹಾರಧಾನ್ಯ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಎಸ್. ಅರ್ಚನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಆದೇಶದಂತೆ ಕೋವಿಡ್-19 ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಾಗೂ ಜಿಲ್ಲೆಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ಸೇರ್ಪಡೆಗೊಳ್ಳದ ವಲಸೆ ಕಾರ್ಮಿಕರು ಹಾಗೂ ಕೋವಿಡ್-19 ನಿಂದಾಗಿ ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರಿಗೆ ಪ್ರಸಕ್ತ ಸಾಲಿನ ಮೇ ಮತ್ತು ಜೂನ್ ತಿಂಗಳು ಸೇರಿದಂತೆ ಒಟ್ಟು ಎರಡು ತಿಂಗಳಿಗೆ ಕೇಂದ್ರ ಸರ್ಕಾರದ ಹಂಚಿಕೆಗೆ ಅನುಗುಣವಾಗಿ ಪ್ರತಿ ಫಲಾನುಭವಿಗೆ ತಲಾ 5 ಕೆ.ಜಿ ಅಕ್ಕಿ ಮತ್ತು ಒಂದು ಕೆಜಿ ಕಡಲೆ ಕಾಳನ್ನು ಉಚಿತವಾಗಿ ವಿತರಿಸಲಾಗುವುದು. ಅದರಂತೆ ಅರ್ಹ ವಲಸೆ ಕಾರ್ಮಿಕರು ಆಯಾ ನ್ಯಾಯಬೆಲೆ ಅಂಗಡಿಯಲ್ಲಿ ತಪ್ಪದೇ ಪಡೆದುಕೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ರಾಜ್ಯದಲ್ಲಿನ ಕೇಂದ್ರ ವ್ಯಾಪ್ತಿಯ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯ ಫಲಾನುಭವಿಗಳ ಸಂಖ್ಯೆಯ ಶೇ.10ರಂತೆ ಅಕ್ಕಿ ಹಂಚಿಕೆ ನೀಡಲಾಗಿರುತ್ತದೆ. ಸದರಿ ಹಂಚಿಕೆಯನ್ನು ಜಿಲ್ಲೆಯಲ್ಲಿ ತಾಲ್ಲೂಕುವಾರು ಹಂಚಿಕೆ ಮಾಡಲು ಜಿಲ್ಲೆಯ ಕಾರ್ಮಿಕ ಇಲಾಖೆಯ ಸೇವಾ ಸಿಂಧು ಅಂಕಿ-ಅAಶಗಳAತೆ ತಾಲ್ಲೂಕು ವ್ಯಾಪ್ತಿಯಲ್ಲಿರುವ ವಲಸಿಗರ ಸಂಖ್ಯೆಯ ಶೇಕಡವಾರು ಅನುಪಾತದ ಮೇಲೆ ತಾಲ್ಲೂಕುವಾರು ಹಂಚಿಕೆಯನ್ನು ನೀಡಲಾಗಿದೆ.
ಕೇಂದ್ರ ಸರ್ಕಾರದ ಆದೇಶದಂತೆ ಈ ಯೋಜನೆಯಡಿ ಬರುವ ಫಲಾನುಭವಿಗಳಿಗೆ ರಾಜ್ಯದಲ್ಲಿ ಅಥವಾ ಬೇರಾವುದೇ ರಾಜ್ಯಗಳಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಂಚಿಕೆ ಪಡೆಯುತ್ತಿರಬಾರದು. ಇದನ್ನು ಪರಿಶೀಲಿಸಿ ಖಾತ್ರಿ ಪಡಿಸಲು ಎಲ್ಲ ಫಲಾನುಭವಿಗಳಿಂದಲೂ ಅವರ ಆಧಾರ್ ಸಂಖ್ಯೆಯನ್ನು ಪಡೆದು ಆನ್‌ಲೈನ್ ತಂತ್ರಾAಶದಲ್ಲಿ ಪರಿಶೀಲಿಸಿ ವಿತರಿಸಲಾಗುವುದು. ಹಾಗಾಗಿ ಪ್ರತಿ ಫಲಾನುಭವಿಯ ಆಧಾರ್ ಸಂಖ್ಯೆಯ ಮುಖಾಂತರ ಪರಿಶೀಲಿಸಿ ಅವರ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ. ಬಂದ ನಂತರ, ಸದರಿ ಓಟಿಪಿ ಯನ್ನು ದಾಖಲಿಸಿ ಪಡಿತರ ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸಕ್ತ ವರ್ಷದ ಮೇ ತಿಂಗಳ ಹಂಚಿಕೆಯನ್ವಯ ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿಯನ್ನು ಮೇ 26ರಿಂದ ಮೇ 31ರವರೆಗೂ ಮುಂದುವರೆಸಲಾಗುವುದು. ಜೂನ್ ತಿಂಗಳಿನಲ್ಲಿ ಜೂನ್ 1ರಿಂದ ಜೂನ್ 10ರವರೆಗೆ 5 ಕೆ.ಜಿ ಅಕ್ಕಿ ಹಾಗೂ ಕೇಂದ್ರ ಸರ್ಕಾರವು ಹಂಚಿಕೆ ಮಾಡುವ ಕಡಲೆ ಕಾಳನ್ನು ವಿತರಿಸಲಾಗುವುದು ಎಂದು ತಿಳಿಸಿದೆ.
ಒಂದು ಪಕ್ಷ ಮೇ ತಿಂಗಳಿನಲ್ಲಿ ಆಹಾರಧಾನ್ಯವನ್ನು ಪಡೆಯದ ವಲಸೆ ಫಲಾನುಭವಿಗಳು ಜೂನ್ ತಿಂಗಳಲ್ಲಿ ಒಟ್ಟಿಗೆ ಎರಡು ತಿಂಗಳಿಗೆ ಸೇರಿದಂತೆ 10 ಕೆ.ಜಿ ಅಕ್ಕಿ ಮತ್ತು ಕೇಂದ್ರ ಸರ್ಕಾರದ ಹಂಚಿಕೆಯAತೆ ಕಡಲೆ ಕಾಳನ್ನು ಪಡೆಯಲು ಅರ್ಹರಿರುತ್ತಾರೆ.
ವಲಸಿಗ ಕಾರ್ಮಿಕರೆಂದರೆ ‘’ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಮತ್ತು ಒಂದು ತಾಲ್ಲೂಕಿನಿಂದ ಮತ್ತೊಂದು ತಾಲ್ಲೂಕಿಗೆ ಜೀವನ ನಿರ್ವಹಣೆಗೆ ಹೋಗುವವರನ್ನು ಹೋಗುವವರನ್ನು ವಲಸಿಗರೆಂದು ಪರಿಗಣಿಸಲಾಗುತ್ತದೆ. ಲಾಕ್ ಡೌನ್ ಹಿನ್ನಲೆಯಲ್ಲಿ ವಲಸಿಗರಿಗೆ ಒದಗಿಸುವ ಸೌಲಭ್ಯವನ್ನು ತಪ್ಪು ಮಾಹಿತಿ ನೀಡಿ ಪಡೆದುಕೊಂಡಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 52ರಡಿ (Uಟಿಜeಡಿ seಛಿಣioಟಿ 52 oಜಿ ಣhe ಆisಚಿsಣeಡಿ ಒಚಿಟಿಚಿgemeಟಿಣ ಂಛಿಣ 2005) ಅಂತಹವರಿಗೆ ದಂಡ ಜೊತೆಗೆ ಒಂದು ವರ್ಷದಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು’’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ಪಡಿತರ ಪಡೆದುಕೊಳ್ಳಲು ಯಾವುದೇ ದೂರುಗಳಿದ್ದಲ್ಲಿ ಜಿಲ್ಲೆಯ ಆಹಾರ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ, ಆಯಾ ತಾಲ್ಲೂಕಿನ ತಹಶೀಲ್ದಾರ್ ಅಥವಾ ಸಹಾಯವಾಣಿ 1967 ಸಂಖ್ಯೆಗೆ ದೂರನ್ನು ದಾಖಲಿಸಲು ಕೋರಿದೆ.
ವಲಸೆ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ನ್ಯಾಯಬೆಲೆ ಅಂಗಡಿಯಿAದ ಆಹಾರಧಾನ್ಯವನ್ನು ಪಡೆದುಕೊಳ್ಳಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Comments