ಪೊಲೀಸ್ ಕಾನ್ಸ್ ಟೇಬಲ್ ಗೆ ಕೊರೊನಾ ಹಿನ್ನೆಲೆ; ವಿಟ್ಲ ಠಾಣೆಗೆ ಸ್ಯಾನಿಟೈಸ್ ಸಿಂಪಡಣೆಮಂಗಳೂರು; ಇಂದು ವಿಟ್ಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಗೆ ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು.

ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನೇತೃತ್ವದಲ್ಲಿ ವಿಟ್ಲ ಠಾಣೆಗೆ ಸ್ಯಾನಿಟೈಸರ್  ಸಿಂಪಡಣೆ ಮಾಡಲಾಗಿದೆ. ಪೊಲೀಸ್ ಠಾಣೆ ಯ ಕಾರ್ಯಚಟುವಟಿಕೆಯನ್ನು ಸಂಚಾರಿ ಪೊಲೀಸ್ ಠಾಣೆಗೆ ವರ್ಗಾಯಿಸುವ ಸಾಧ್ಯತೆ ಇದೆ.

ಇಂದು ಠಾಣೆಯ ಕಾನ್ಸ್‌ಟೇಬಲ್ ಒಬ್ಬರಿಗೆ ಕೊರೋನಾ ಪಾಸಿಟಿವ್ ಆಗಿತ್ತು.ಮುಂಬೈಯಿಂದ ಬಂದ ವ್ಯಕ್ತಿಯ ಸಂಪರ್ಕದಿಂದ ಕೊರೋನಾ ಪಾಸಿಟಿವ್  ಆಗಿತ್ತು

Comments