ಜಗತ್ತು ಭಾರತದ ಕಡೆ ನೋಡುವಂತೆ ಮೋದಿ ಆಡಳಿತ ಮಾಡಿದ್ದಾರೆ; ನಳಿನ್ ಕುಮಾರ್ ಕಟೀಲ್


ಮಂಗಳೂರು;ಮೊತ್ತಮೊದಲ ಬಾರಿಗೆ ಕಾಂಗ್ರೇಸೇತರ ಸರಕಾರ ಎರಡನೇ ಅವಧಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ 2019ರ ಅವಧಿಗೆ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ ಪೂರೈಸಿದೆ. ಇಂದು ಜಗತ್ತು ಭಾರತದ ಕಡೆಗೆ ನೋಡುವಂತೆ ನರೇಂದ್ರ ಮೋದಿಯವರು ಆಡಳಿತ ನಡೆಸಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ತಮ್ಮ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, 370 ವಿಧಿ ರದ್ದತಿ, ತ್ರಿವಳಿ ತಲಾಖ್, ರಾಮಮಂದಿರ ನಿರ್ಮಾಣ, ಪೌರತ್ವ ತಿದ್ದುಪಡಿ ಕಾಯ್ದೆ ಮುಂತಾದ ಹಲವಾರು ಮಹತ್ವದ ತೀರ್ಮಾನವನ್ನು ಕೇಂದ್ರ ಸರಕಾರ ಕೈಗೊಂಡಿದೆ ಎಂದು ಹೇಳಿದರು.

ಕೋವಿಡ್ ಸೋಂಕು ನಿಯಂತ್ರಣ ದಲ್ಲಿ ಜಗತ್ತು ಭಾರತದ ಕಡೆ ನೋಡುವಂತೆ ಪ್ರಧಾನಿ ಮೋದಿಯವರು ಕಾರ್ಯ ಕೈಗೊಂಡಿದ್ದಾರೆ. ಡಬ್ಲ್ಯೂಎಚ್ಒ ಇದಕ್ಕಾಗಿ ಅಧ್ಯಕ್ಷ ಸ್ಥಾನವನ್ನೇ ನೀಡಿದೆ. ಅಮೇರಿಕದಂತಹ ದೇಶವು ಕೋವಿಡ್ ನಿಯಂತ್ರಣದಲ್ಲಿ ಭಾರತವನ್ನು ಪ್ರಶಂಸೆ ಮಾಡಿದೆ. 20 ಲಕ್ಷ ಕೋಟಿ ರೂ. ಪ್ಯಾಕೇಜ್ ನೀಡಿ ಬಡವರ ಆತಂಕದ ಬದುಕಿಗೆ ಮೋದಿ ಯವರು ಭರವಸೆ ತುಂಬಿದ್ದಾರೆ. ಅಲ್ಲದೆ ಕಿಸಾನ್ ಕಾರ್ಡ್, ಜನಧನ್ ಯೋಜನೆ, ಸ್ಕಿಲ್ ಇಂಡಿಯಾ, ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಜನಸಾಮಾನ್ಯರ ಬದುಕಿಗೆ ಪ್ರರೇಣೆಯಾಗುತೆ ಆಳ್ವಿಕೆ ನಡೆಸಿದ್ದಾರೆ‌. ಅಲ್ಲದೆ ಕಳೆದ ಆರು ವರ್ಷಗಳಲ್ಲಿ ಒಂದೇ ಒಂದು ಭ್ರಷ್ಟಾಚಾರವಿಲ್ಲದೆ ಆಡಳಿತ ನೀಡಿ ಜನರ ಬಗ್ಗೆ ವಿಶ್ವಾಸ ಬರುವಂತೆ ಪ್ರಧಾನಿ ಮೋದಿಯವರು ಆಡಳಿತ ನಡೆಸಿದ್ದಾರೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.

Comments