ಜೆಪ್ಪಿನಮೊಗರಿನಲ್ಲಿ ಕಾರಿಗೆ ಕಂಟೈನರ್ ಢಿಕ್ಕಿ; ಓರ್ವ ಸಾವು


ಮಂಗಳೂರು ; ಮಂಗಳೂರು ಹೊರವಲಯದ ಜಪ್ಪಿನಮೊಗರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ  ಕಂಟೈನರ್  ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಚೇತನ್ (21) ಮೃತಪಟ್ಟ ದುರ್ದೈವಿ.ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


 ತೊಕ್ಕೊಟ್ಟುವಿನಲ್ಲಿ ಶನಿವಾರ ರಾತ್ರಿ ನಡೆದ ಮೆಹಂದಿ ಕಾರ್ಯಕ್ರಮ ಮುಗಿಸಿ 5 ಮಂದಿ ಒಟ್ಟಾಗಿ ಕಾರಿನಲ್ಲಿ ಮಂಗಳೂರಿನತ್ತ ಬರುತ್ತಿದ್ದರು. ಈ ಸಂದರ್ಭ ಜಪ್ಪಿನಮೊಗರು ಸಮೀಪ ರಸ್ತೆಯ ಬದಿ ನಿಂತಿದ್ದ ಕಂಟೈನರ್ ಗೆ ಕಾರು ಡಿಕ್ಕಿಯಾಗಿ ಚಾಲಕ ಚೇತನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ 4 ಮಂದಿ ಸಹಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯರು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

Comments