ಕೊರೊನ ಜಾಗೃತಿ ಕರ್ತವ್ಯ: ಬೆಳ್ತಂಗಡಿಯಲ್ಲಿ ಪತ್ರಕರ್ತರಿಗೆ ಸನ್ಮಾನಬೆಳ್ತಂಗಡಿ: ಕೊರೊನಾ ವೈರಸ್ ಬಗ್ಗೆ ಜನಜಾಗೃತಿ ಮೂಡಿಸಿದ ಪತ್ರಕರ್ತರಿಗೆ ಅಖಿಲ ಕರ್ನಾಟಕ ರಾಜಕೇಸರಿ ಇದರ  ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ತಾಲೂಕು ಶಾಖೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸರಕಾರಿ ಅತಿಥಿಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಶಾಸಕ ಹರೀಶ್ ಪೂಂಜ  ಪತ್ರಕರ್ತರನ್ನು ಸಂಘಟನೆಯ ಪರವಾಗಿ ಸನ್ಮಾನಿಸಿದರು.

ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ ಎಲ್ಲರ ಪರವಾಗಿ ಕೃತಜ್ಞತೆ ಸಲ್ಲಿಸಿದರು ‌ ಲೋಕೇಶ್ ಕುತ್ಲೂರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ ವಂದಿಸಿದರು.

Comments