ಮುಖ್ಯ ಮಂತ್ರಿಗಳಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಗತಿ ಪರಿಶೀಲನೆಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು.
ನೂತನ ಮರಳು ನೀತಿ ಜಾರಿ ಮತ್ತು ನಿಯಮಗಳ ರಚನೆ, ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ವಲಯಗಳಲ್ಲಿ ಆಗಬೇಕಾದ ಅಗತ್ಯದ ಕಾರ್ಯಗಳು, ಇಲಾಖೆಯಿಂದ ಸರ್ಕಾರಕ್ಕೆ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕೈಕೊಳ್ಳಬೇಕಾದ ಕ್ರಮಗಳು, ಲಾಕಡೌನ ಸಡಿಲಿಸಿದ ಹಿನ್ನೆಲೆಯಲ್ಲಿ ಗೃಹ ಮತ್ತು ವಾಣಿಜ್ಯ ಕಟ್ಟಡಗಳ ನಿರ್ಮಾಣದಲ್ಲಿ ಹೆಚ್ಚಲಿರುವ ಮರಳು ಬೇಡಿಕೆಯನ್ನು ಸೂಕ್ತವಾಗಿ ನಿಭಾಯಿಸುವದು ಸೇರಿದಂತೆ ಹಲವಾರು ಮಹತ್ವದ ವಿಷಯಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳು ಚರ್ಚಿಸಿ ಸೂಚನೆಗಳನ್ನು ನೀಡಿದರು.
ಕಳೆದ ಎಂಟು ತಿಂಗಳ ಅವಧಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ರಾಜ್ಯದ ರಾಜಸ್ವ ಹೆಚ್ಚಿಸುವ ನಿಟ್ಟಿನಲ್ಲಿ ನೂತನ ಮರಳು ನೀತಿ ಸೇರಿದಂತೆ ಕೈಕೊಂಡ ಹಲವಾರು ಅಭಿವೃದ್ಧಿ ಕಾರ್ಯಗಳ ಹಾಗೂ ಮುಖ್ಯ ಮತ್ತು ಉಪ ಖನಿಜಳಿಗೆ ಸಂಬಂಧಿಸಿದ ಕಾಯ್ದೆಗೆ ತರಲಾದ ತಿದ್ದುಪಡಿ ಕುರಿತು ಸಚಿವ ಸಿ.ಸಿ.ಪಾಟೀಲ ಮುಖ್ಯಮಂತ್ರಿಗಳಿಗೆ ವಿವರಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್. ಎನ್. ಪ್ರಸಾದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಾರ್ಮಿಕ ಹಾಗೂ ವಾರ್ತಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಎಂ ಮಹೇಶ್ವರ ರಾವ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕ ಡಾ. ಶಿವಶಂಕರ್ ಸಭೆಯಲ್ಲಿ ಭಾಗವಹಿಸಿದ್ದರು.

Comments