ಪಾಣೆಮಂಗಳೂರಿನಲ್ಲಿ ನದಿಗೆ ಹಾರಿ ಯುವಕ‌ ಆತ್ಮಹತ್ಯೆಮಂಗಳೂರು;ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಕಲ್ಲಡ್ಕ ಸಮೀಪದ ಕೊಳಕೀರು ನಿವಾಸಿ ನಿಶಾಂತ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಬಂಟ್ವಾಳ ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಹಾರಿ ಕೊಳಕೀರು ನಿವಾಸಿ ನಿಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, 
ಇದನ್ನು ಗಮನಿಸಿದ ರಂಝಾನ್ ಹಬ್ಬದ ಸಡಗರದಲ್ಲಿದ್ದ ಮುಸ್ಲಿಂ ಯುವಕರು, ಕೂಡಲೇ ನದಿಗೆ ಜಿಗಿದು ಆತನನ್ನು ಮೇಲೆ ತಂದು ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವ ಪ್ರಯತ್ನ ಮಾಡಿದ್ದಾರೆ ಆದರೆ ನಿಶಾಂತ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..ವಿಡಿಯೋ ಗಾಗಿ ಇಲ್ಲಿ ಕ್ಲಿಕ್ ಮಾಡಿ

Comments